ಚುನಾವಣಾ ಅಕ್ರಮಕ್ಕೆ ಕಡಿವಾಣ : ಕ್ಷಿಪ್ರ ಕಾರ್ಯಾಚರಣೆಗಾಗಿ ಫ್ಲೈಯಿಂಗ್ ಸ್ಕ್ವಾಡ್ ನೇಮಕ

ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ಯಾವುದೇ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ನಿಗಾ ವಹಿಸಲು ಹಾಗೂ ಕ್ಷಿಪ್ರ ಕಾರ್ಯಾಚರಣೆಗೆ ಅನುಕೂಲವಾಗುವಂತೆ ಕೊಪ್ಪಳ ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ 06 ತಂಡಗಳಂತೆ, ಐದು ವಿಧಾನಸಭಾ ಕ್ಷೇತ್ರಗಳಿಗೆ ಒಟ್ಟು 30 ಫ್ಲೈಯಿಂಗ್ ಸ್ಕ್ವಾಡ್ (ವಿಚಕ್ಷಣ ದಳ) ನೇಮಕ ಮಾಡಲಾಗಿದೆ.
ವಿಧಾನಸಭಾ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳ ಅಕ್ರಮ ಕಾರ್ಯಚಟುವಟಿಕೆಗಳಿಗೆ ಕಡಿವಾಣ ಹಾಕಲು ವಿಚಕ್ಷಣ ದಳ ನೇಮಕ ಮಾಡಲಾಗಿದೆ. ಮತದಾರರನ್ನು ಓಲೈಸುವ ಧಾವಂತದಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಎಸಗುವ ಅಕ್ರಮಗಳನ್ನು ತಡೆದು, ಅವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲು ಈ ದಳ ಕ್ಷಿಪ್ರ ಕಾರ್ಯಾಚರಣೆ ನಡೆಸಲಿದೆ. ರಾಜ್ಯದಲ್ಲಿ ಈ ವಿಧಾನವನ್ನು ಕಳೆದ 2013 ರಲ್ಲಿ ಜರುಗಿದ ವಿಧಾನಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಜಾರಿಗೆ ತರಲಾಗಿತ್ತು. ಫ್ಲೈಯಿಂಗ್ ಸ್ಕ್ವಾಡ್ ತಂಡದ ಮುಖ್ಯಸ್ಥರಿಗೆ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳೆಂಬ ಹೊಸ ಅಸ್ತ್ರವನ್ನೂ ಸಹ ನೀಡಲಾಗಿದೆ. ಈ ವಿಚಕ್ಷಣ ದಳ ತಮ್ಮ ವ್ಯಾಪ್ತಿಯಲ್ಲಿನ ವಿವಿಧ ಸೆಕ್ಟರ್ ಅಧಿಕಾರಿಗಳ ತಂಡದೊಂದಿಗೆ ಸಮನ್ವಯ ಸಾಧಿಸಿ, ಸೂಕ್ತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಲಿದೆ. ಪ್ರತಿ ಫ್ಲೈಯಿಂಗ್ ಸ್ಕ್ವಾಡ್ ತಂಡದಲ್ಲಿ ಹಿರಿಯ ಅಧಿಕಾರಿಗಳು ತಂಡದ ಮುಖ್ಯಸ್ಥರಾಗಲಿದ್ದು. ಇವರ ಜೊತೆಗೆ ಒಬ್ಬರು ಪೊಲೀಸ್ ಇನ್ಸ್‍ಪೆಕ್ಟರ್, ಇಬ್ಬರು ಪೊಲೀಸ್ ಕಾನ್ಸಟೇಬಲ್ ಹಾಗೂ ಓರ್ವ ವಿಡಿಯೋಗ್ರಾಫರ್ ಸೇರಿದಂತೆ ಒಟ್ಟು ಐವರು ಕಾರ್ಯ ನಿರ್ವಹಿಸಲಿದ್ದಾರೆ. ಕೊಪ್ಪಳ ಜಿಲ್ಲೆಯ 05 ವಿಧಾನಸಭಾ ಕ್ಷೇತ್ರಗಳಿಗೆ ನೇಮಿಸಲಾಗಿರುವ ಫ್ಲೈಯಿಂಗ್ ಸ್ಕ್ವಾಡ್ ತಂಡದ ಮುಖ್ಯಸ್ಥರ ವಿವರ ಈ ಕೆಳಗಿನಂತಿದೆ.
ಫ್ಲೈಯಿಂಗ್ ಸ್ಕ್ವಾಡ್ ತಂಡ ವಿವರ : ಕುಷ್ಟಗಿ ವಿಧಾನಸಭಾ ಕ್ಷೇತ್ರದಲ್ಲಿ ಕುಷ್ಟಗಿ ಪೊಲೀಸ್ ಠಾಣಾ ವ್ಯಾಪ್ತಿಗೆ ಕೊಪ್ಪಳ ಭೂವಿಜ್ಞಾನಿ ಎಸ್.ಆರ್. ರಾವಲ್- 9448763756, ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಚಿದಾನಂದ- 9900223306. ಹನುಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕುಷ್ಟಗಿ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಕಳಕನಗೌಡ- 8618711931, ಹಾಗೂ ಕುಷ್ಟಗಿ ಕೆ.ಬಿ.ಜೆ.ಎನ್.ಎಲ್ ಎಇಇ ಸುಬ್ರಮಣ್ಯ- 9483823102. ತಾವರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕುಷ್ಟಗಿ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಡಾ. ಡಿ. ಮೋಹನ – 9538373948, ಹಾಗೂ ಎ.ಪಿ.ಎಂ.ಸಿ ಕಾರ್ಯದರ್ಶಿ ಮರಿಬಸಪ್ಪ ಸಜ್ಜನ್- 9902751099, ಇವರನ್ನು ಫ್ಲೈಯಿಂಗ್ ಸ್ಕ್ವಾಡ್ ತಂಡದ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.
ಕನಕಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಕನಕಗಿರಿ ಪೊಲೀಸ್ ಠಾಣಾ ವ್ಯಾಪ್ತಿಗೆ ಕೊಪ್ಪಳ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೃಷ್ಣ ಉಕ್ಕುಂದ- 9448999237, ಹಾಗೂ ಗಂಗಾವತಿ ತಾ.ಪಂ ಕಾರ್ಯನಿರ್ವಹಕ ಅಧಿಕಾರಿ ವಿನಾಯಕ- 8861617230. ಕಾರಟಗಿ ಪೊಲೀಸ್ ಠಾಣಾ ವ್ಯಾಪ್ತಿಗೆ ಕೊಪ್ಪಳ ಕೆ.ಯು.ಡಿ.ಎ ಆಯುಕ್ತ ವಿಷ್ಣು- 8217805871 ಹಾಗೂ ಕಾರಟಗಿ ನಂ.2 ಕಾಲುವೆ ಉಪ ಡಿಎನ್ ಸೂಗಪ್ಪ- 9480311734. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಂಗಾವತಿ ಎಪಿಎಂಸಿ ಕಾರ್ಯದರ್ಶಿ ರಘುಪತಿ ಭಟ್ ಹಾಗೂ ಕಾರಟಗಿ ಪ.ಪಂ ಮುಖ್ಯಾಧಿಕಾರಿ ಶಿವಲಿಂಗಪ್ಪ- 9880342441 ಇವರು ಫ್ಲೈಯಿಂಗ್ ಸ್ಕ್ವಾಡ್ ತಂಡದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುವರು.

*ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಗಂಗಾವತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಮುನಿರಾಬಾದ್‍ನ ವಾಟರ್‍ಗೇಜಿಂಗ್ ಉಪ ಡಿಎನ್ ಎನ್.ಎಂ ಗೋಟೂರ- 9448183971, ಟನಕನಕಲ್ ಐಟಿಐ ಕಾಲೇಜಿನ ಪ್ರೀನ್ಸಿಪಾಲ್ ಗವಿಶಂಕರ, ಹಾಗೂ ಗಂಗಾವತಿ ಎ.ಡಿ.ಎ ಜಂಬಣ್ಣ ಎ.- 8277932106. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಗೆ ಗಂಗಾವತಿ ನಗರಸಭೆ ಪೌರಾಯುಕ್ತ ಖಾಜಾ ಮೊಯಿನುದ್ದಿನ- 9845838853, ಗಂಗಾವತಿ ಎ.ಪಿ.ಎಂ.ಸಿ ಸಹಾಯಕ ಕಾರ್ಯದರ್ಶಿ ಗ್ರೇಟ್-2 ವೀರಭದ್ರಯ್ಯ- 9986363311. ಕೊಪ್ಪಳ ಗ್ರಾಮೀಣ ಮತ್ತು ಮುನಿರಾಬಾದ ಪೊಲೀಸ್ ಠಾಣಾ ವ್ಯಾಪ್ತಿಗೆ ಕೊಪ್ಪಳ ಜಿಲ್ಲಾ ಅಲ್ಪಸಖ್ಯಾತರ ಅಧಿಕಾರಿ ಮಹಿಮೂದ್- 9686397868 ಇವರನ್ನು ಫ್ಲೈಯಿಂಗ್ ಸ್ಕ್ವಾಡ್‍ಗಳನ್ನಾಗಿ ರಚಿಸಲಾಗಿದೆ.*
ಯಲಬುರ್ಗಾ ವಿಧಾನಸಭಾ ಕ್ಷೇತ್ರದಲ್ಲಿ ಕುಕನೂರ ಪೊಲೀಸ್ ಠಾಣಾ ವ್ಯಾಪ್ತಿಗೆ ಜಿಲ್ಲಾ ಕಾರ್ಮಿಕಾಧಿಕಾರಿ ಶ್ಯಾಮರಾವ್- 9448740330, ಹಾಗೂ ಯಲಬುರ್ಗಾ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ತಿಮ್ಮಪ್ಪ- 9480871115. ಬೇವೂರ ಪೊಲೀಸ್ ಠಾಣಾ ವ್ಯಾಪ್ತಿಗೆ ಕೊಪ್ಪಳ ಟಿ&ಸಿ ಯೋಜನಾ ಇಲಾಖೆ ಸಹಾಯಕ ನಿರ್ದೇಶಕ ಪ್ರಭಣ್ಣವರ- 9448326111, ಹಾಗೂ ಯಲಬುರ್ಗಾ ಜೆಸ್ಕಾಂ ಎಇಇ ಖಲಿಮುದ್ದೀನ್- 9448359032. ಯಲಬುರ್ಗಾ ಪೊಲೀಸ್ ಠಾಣಾ ವ್ಯಾಪ್ತಿಗೆ ಯಲಬುರ್ಗಾ ಕ್ಷೇತ್ರ ಶಿಕ್ಷಣಾಧಿಕಾರಿ ಶರಣಪ್ಪ ವಟಗಲ್- 9480695281 ಹಾಗೂ ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ರೇಣುಕಾನಂದ- 9480843039, ಇವರನ್ನು ಫ್ಲೈಯಿಂಗ್ ಸ್ಕ್ವಾಡ್‍ಗಳನ್ನಾಗಿ ರಚಿಸಲಾಗಿದೆ.
ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿ ಕೊಪ್ಪಳ ಪೊಲೀಸ್ ಠಾಣಾ ವ್ಯಾಪ್ತಿಗೆ ಕೊಪ್ಪಳ ಜೆಸ್ಕಾಂ ಇಇ ಮಹೇಶ ಪತ್ತಾರ- 9448359020, ಹಾಗೂ ಮುನಿರಾಬಾದ್ ಡಿಐಇಟಿ ಹಿರಿಯ ಪ್ರಾಧ್ಯಾಪಕ ಎಸ್.ಎಂ. ವೀರಭದ್ರಯ್ಯ- 9449810594. ಅಳವಂಡಿ ಪೊಲೀಸ್ ಠಾಣಾ ವ್ಯಾಪ್ತಿಗೆ ಮುನಿರಾಬಾದ್ ಕಾಡಾ ಎಲ್.ಡಿ.ಓ ಡಿ.ಮುನಿಯಪ್ಪ- 9448634079, ಹಾಗೂ ಕೊಪ್ಪಳ ವಕ್ಫ್ ಅಧಿಕಾರಿ ಮಖಬುಲ್- 9901739501. ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಕೊಪ್ಪಳ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಟಿ. ಕೃಷ್ಣಮೂರ್ತಿ- 9480871105, ಹಾಗೂ ಮುನಿರಾಬಾದ್ ಡಿಐಇಟಿ ಹಿರಿಯ ಪ್ರಾಧ್ಯಾಪಕ ವಿಜಯ ಕುಮಾರ ಬಾರಕೇರ- 9900200358, ಇವರನ್ನು ಫ್ಲೈಯಿಂಗ್ ಸ್ಕ್ವಾಡ್‍ಗಳನ್ನಾಗಿ ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ತಿಳಿಸಿದ್ದಾರೆ.

Please follow and like us:
error