ಚೆಕ್ ಡ್ಯಾಂ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಸಂಸದ ಸಂಗಣ್ಣ ಕರಡಿ ಭೇಟಿ, ಪರಿಶೀಲನೆ

ಕೊಪ್ಪಳ ಮೇ. : ಕೊಪ್ಪಳ ತಾಲ್ಲೂಕಿನ ಕಿನ್ನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಮಹಾತ್ಮ ಗಾಂಧಿ ರಾಷ್ಟಿçÃಯ ಉದ್ಯೋಗ ಖಾತ್ರಿ ಯೋಜನೆಯ ಚೆಕ್ ಡ್ಯಾಂ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಇಂದು ಸಂಸದ ಸಂಗಣ್ಣ ಕರಡಿ ಭೇಟಿ ನೀಡಿ, ಕಾಮಗಾರಿ ಪರಿಶೀಲನೆ ಮಾಡಿದರು.

ಭೇಟಿ ವೇಳೆ ಕೂಲಿಕಾರರನ್ನು ಉದ್ದೇಶಿಸಿ ಮಾತನಾಡಿದ ಅವರು ಬಡವರಿಗೆ, ಆರ್ಥಿಕವಾಗಿ ಹಿಂದುಳಿದವರಿಗೆ, ಕೂಲಿಕಾರರಿಗೆ ಇದೊಂದು ಒಳ್ಳೆಯ ಯೋಜನೆಯಾಗಿದೆ. ವೈಯಕ್ತಿಕ ಕಾಮಗಾರಿ ಹಾಗೂ ಸಾಮೂಹಿಕ ಕಾಮಗಾರಿಗಳಲ್ಲಿ ತೊಡಗಿಸಿಕೊಂಡು ಯೋಜನೆಯ ಲಾಭವನ್ನು ಪಡೆಯಬೇಕು ಹಾಗೂ ಕೋವಿಡ್ ಸಂದರ್ಭದಲ್ಲಿ ನಾವೆಲ್ಲರೂ ಕೇಂದ್ರ ಹಾಗೂ ರಾಜ್ಯ ಸರ್ಕಾರ ನೀಡಿದ ನಿರ್ದೇಶನಗಳನ್ನು ಪಾಲನೆ ಮಾಡಿ ನಮ್ಮ ಹಾಗೂ ಕುಟುಂಬದ ಮತ್ತು ಸಾರ್ವಜನಿಕರ ಜೀವವನ್ನು ಕಾಪಾಡಿಕೊಳ್ಳಬೇಕೆಂದು ತಿಳಿಸಿದರು. ನಂತರ ಕೂಲಿಕಾರರಿಗೆ ಹ್ಯಾಂಡ್ ಸ್ಯಾನಿಟೈಸರ್ ಮತ್ತು ಮಾಸ್ಕ್ಗಳನ್ನು ವಿತರಿಸಿದರು.

ಈ ಸಂದರ್ಭ ಉಪಸ್ಥಿತರಿದ್ದ ಕೊಪ್ಪಳ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಟಿ. ವೆಂಕೋಬಪ್ಪ ಇವರು, ಕೊಪ್ಪಳ ತಾಲೂಕಿನಲ್ಲಿ ಒಟ್ಟು 52,919 ಜಾಬ್ ಕಾರ್ಡಗಳನ್ನು ನೀಡಲಾಗಿದ್ದು ಇದರಲ್ಲಿ ತಾಲೂಕಿನಲ್ಲಿ ವೈಯಕ್ತಿಕ ಕಾಮಗಾರಿಗಳಾದ ಬದು ನಿರ್ಮಾಣ, ಕೃಷಿಹೊಂಡ, ನಾಲಾ ಹೂಳೆತ್ತುವುದು, ಚೆಕ್ ಡ್ಯಾಂ ಹೂಳೆತ್ತುವುದು ಹೀಗೆ ಒಟ್ಟು 458 ಕಾಮಗಾರಿಗಳು ಪ್ರಾರಂಭವಾಗಿದ್ದು 3,847 ಕೂಲಿಕಾರರು ಕೆಲಸವನ್ನು ನಿರ್ವಹಿಸುತ್ತಿದ್ದಾರೆ. ಇಲ್ಲಿಯವರೆಗೆ ಒಟ್ಟು 24,856 ಮಾನವ ದಿನಗಳನ್ನು ಸೃಜನೆ ಮಾಡಲಾಗಿದೆ. ರೈತರು ಗಮನಹರಿಸಿ ವೈಯಕ್ತಿಕ ಕಾಮಗಾರಿಗಳಾದ ಬದು ನಿರ್ಮಾಣ, ಕೃಷಿಹೊಂಡ ಮಾಡಿಕೊಳ್ಳುವಂತೆ ತಿಳಿಸಿದರು. ನಂತರ ಎಲ್ಲಾ ಕೂಲಿಕಾರರು ಕೋವಿಡ್ -19 ರ ಬಗ್ಗೆ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು.

ಜಿಲ್ಲಾ ಪಂಚಾಯತಿ ಸದಸ್ಯರಾದ ಗವಿಸಿದ್ದಪ್ಪ ಕರಡಿ, ರಾಮಣ್ಣ ಚೌಡ್ಕಿ, ಗ್ರಾಮ ಪಂಚಾಯತ್ ಅಧ್ಯಕ್ಷೆ ಚೆನ್ನಮ್ಮ ವಾಲ್ಮೀಕಿ ಮತ್ತು ಉಪಾಧ್ಯಕ್ಷೆ ಗೀತಾ ಬಿದರೂರ, ತಾಲೂಕ ಪಂಚಾಯತನ ಸಹಾಯಕ ನಿರ್ದೇಶಕ ಶರಣಯ್ಯ ಸಸಿಮಠ, ಕಿನ್ನಾಳ ಪಿ.ಡಿ.ಓ ವೀರನಗೌಡ, ಕಾರ್ಯದರ್ಶಿ ನೀಲಮ್ಮ ಬಿ., ತಾಂತ್ರಿಕ ಸಹಾಯಕ ಇಂಜಿನಿಯರ ವಿಜಯ ಬಳಿಗೇರ, ಗ್ರಾಮ ಪಂಚಾಯತಿಯ ಸದಸ್ಯರು ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಗ್ರಾಮ ಪಂಚಾಯತ ಸಿಬ್ಬಂದಿ ಇನ್ನಿತರರು ಉಪಸ್ಥಿತರರಿದ್ದರು.

Please follow and like us:
error