ಚೈತನ್ಯ ಟೆಕ್ನೋ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ


ಗಂಗಾವತಿ: ಸಿ.ವಿ. ರಾಮನ್‌ರವರ ಜನ್ಮದಿನಾಚರಣೆಯ ಪ್ರಯುಕ್ತ ವಿಜ್ಞಾನ ವಸ್ತು ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಒಂದು ಕಾರ್ಯಕ್ರಮಕ್ಕೆ ಕೊಪ್ಪಳದ ಸರ್ಕಾರಿ ಮಹಾವಿದ್ಯಾಲಯದ ಪ್ರಾಧ್ಯಾಪಕರಾದ   ಹಸನ್‌ಮಿಯಾ ಹಾಗೂ ಗಂಗಾವತಿಯ ಟಿ.ಎಂ.ಎ.ಈ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರಾದ ಕೆ.ಸಿ ಕುಲಕರ್ಣಿ ಇವರುಗಳು ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಕ್ಕಳು ತಯಾರಿಸಿದ ಪ್ರಾಜೆಕ್ಟ್ ಹಾಗೂ ವಿವರಣೆಯ ಮತ್ತು ಶಾಲೆಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಈ ವಿಜ್ಞಾನ ವಸ್ತು ಪ್ರದರ್ಶನ ವೀಕ್ಷಿಸಿದ ಪಾಲಕರು ಮಕ್ಕಳ ಹಾಗೂ ಶಿಕ್ಷಕರ ಬಗ್ಗೆ ಅಭಿಮಾನ ವ್ಯಕ್ತಪಡಿಸಿದರು. ಈ ಒಂದು ವಿಜ್ಞಾನ ವಸ್ತು ಪ್ರದರ್ಶನಕ್ಕೆ ಪ್ರತ್ಯಕ್ಷವಾಗಿ-ಪರೋಕ್ಷವಾಗಿ ಮಕ್ಕಳು ಮತ್ತು ಶಿಕ್ಷಕರು ಹಾಗೂ ಪಾಲಕರು ಮುಖ್ಯ ಕಾರಣ ಎಂದು ಶಾಲೆಯ ಪ್ರಾಚಾರ್ಯರಾದ ಶ್ರೀಯುತ ವ್ಯಾಸ ಕುಮಾರ್ ಮಕ್ಕಳ ಕಾರ್ಯವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಭಾಗವಹಿಸಿದ್ದ ಮಕ್ಕಳಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಉಪ ಪ್ರಾಚಾರ್ಯ ಶಿವಕುಮಾರ ಕೋರಿ ಹಾಗೂ ಶಿಕ್ಷಕ ಸಿಬ್ಬಂದಿಗಳು ಭಾಗವಹಿಸಿದ್ದರು.

Please follow and like us:
error