You are here
Home > Koppal News > ಜಯಂತಿಗಳು ಯುವ ಪೀಳಿಗೆಗೆ ಆದರ್ಶ :ರಾಘವೇಂದ್ರ ಹಿಟ್ನಾಳ್

ಜಯಂತಿಗಳು ಯುವ ಪೀಳಿಗೆಗೆ ಆದರ್ಶ :ರಾಘವೇಂದ್ರ ಹಿಟ್ನಾಳ್

ಕೊಪ್ಪಳ: ಕನ್ನಡದ ಕಣ್ಮಣಿ, ಜಗದ ಕವಿ ತ್ರಿಪದಿ ಕವಿ ಸರ್ವಜ್ಞ ರವರ ವಚನಗಳು ಇಂದಿಗೂ ಪ್ರಸ್ತುತವಾಗಿದೆ, ಅವರ ವಚನಗಳು ಅಜರಾಮರವಾಗಿ ಉಳಿದಿದೆ ಎಂದು ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಹೇಳಿದರು.

ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ನಗರದ ಶಾದಿ ಮಹಲ್‍ನಲ್ಲಿ ಇಂದು ಏರ್ಪಡಿಸಿದ ಕವಿ ಸರ್ವಜ್ಞ ಜಯಂತಿ ಆಚರಣೆ ಸಮಾರಂಭದ ಉದ್ಘಾಟನೆ ನೆರೆವೇರಿಸಿ ಅವರು ಮಾತನಾಡಿದರು.ಬಸವಣ್ಣ, ಅಂಬೇಡ್ಕರ್, ಗಾಂಧೀಜಿ, ಕನಕದಾಸರಂತಹ ಮಹನಿಯರ ಜಯಂತಿ ಆಚರಣೆ ಮಾಡುವದರ ಮೂಲಕ ಇಂದಿನ ಯುವ ಪೀಳಿಗೆಗೆ ಆದರ್ಶ ಮತ್ತು ಅವರು ಹಾಕಿಕೊಟ್ಟ ಮಾರ್ಗದೆಡೆ ಜೀವನ ಸಾಗಿಸಲು ಅರಿವು ಮತ್ತು ಜಾಗೃತಿ ಮೂಡಿಸುವ ಸದುದ್ದೇಶದಿಂದ ಸರ್ಕಾರ ಇಂತಹ ಜಯಂತಿಗಳನ್ನು ಆಚರಿಸುತ್ತದೆ.  ಸಣ್ಣ-ಸಣ್ಣ ಸಮಾಜಗಳ ಸಾಮಾಜಿಕ, ಆರ್ಥಿಕ ಅಭಿವೃದ್ಧಿಗೆ ಶಿಕ್ಷಣ ಅತ್ಯವಶ್ಯಕವಾಗಿದೆ.  ಶಿಕ್ಷಣದಿಂದ ಸಮಾಜದ ಸರ್ವತೋಮುಖ ಅಭಿವೃದ್ಧಿ ಕಾಣಲು ಸಾಧ್ಯ.  ಸಮಾಜಗಳು ಅಭಿವೃದ್ಧಿಯತ್ತ ಸಾಗಿದರೆ ಜಯಂತಿಗಳ ಆಚರಣೆಗೆ ಅರ್ಥಬರುತ್ತದೆ.  ಕುಂಬಾರ ಸಮಾಜದ ಸಮುದಾಯ ಭವನ ನಿರ್ಮಾಣಕ್ಕೆ ಮುಖ್ಯಮಂತ್ರಿಯವರ ಗಮನಕ್ಕೆ ತಂದು, ಅವರಿಗೆ ಮನವರಿಕೆ ಮಾಡಿ ಅಗತ್ಯ ಕ್ರಮ ಕೈಗೊಂಡು ಕೊಪ್ಪಳದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಅಲ್ಲದೆ, ಕುಂಬಾರ ಸಮಾಜದ ತರಬೇತಿ ಕೇಂದ್ರ ಪ್ರಾರಂಭ, ಸರ್ವಜ್ಞರ ಹೆಸರಿನಲ್ಲಿ ಉದ್ಯಾನವನ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗುವುದು.  ಬಡವರಿಗೆ ಸರ್ಕಾರ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದ್ದು ಒಂದು ಕೋಟಿ ಜನರು ಇದರ ಸದುಪಯೋಗ ಪಡೆದುಕೊಂಡಿದ್ದಾರೆ. ಕ್ಷೀರಭಾಗ್ಯ ಯೋಜನೆಯಡಿ ಮಕ್ಕಳಿಗೆ ವಾರದ ಐದು ದಿನಗಳವರೆಗೆ ಹಾಲು ನೀಡಲು ಸರ್ಕಾರ ನಿರ್ಧರಿಸಿದೆ. ಸರ್ಕಾರ ಜಾರಿಗೊಳಿಸಿದ ವಿದ್ಯಾಸಿರಿ ಯೋಜನೆ ದೇಶದಲ್ಲಿಯೇ ಮಾದರಿಯಾಗಿದ್ದು, ಶಿಕ್ಷಣ ವಂಚಿತ ಮಕ್ಕಳಿಗೆ ಶಿಕ್ಷಣ ದೊರೆಯುತ್ತಿದೆ.   ಕ್ರೀಡಾಪಟುಗಳಿಗೆ ಕೂಡ ಸರ್ಕಾರ ಹೆಚ್ಚಿನ ಕಾಳಜಿವಹಿಸಿ ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ ಹೆಚ್ಚಿಸಿದೆ ಎಂದು ಕೆ.ರಾಘವೇಂದ್ರ ಹಿಟ್ನಾಳ್ ಹೇಳಿದರು.ಈ ಸಮಾರಂಭದಲ್ಲಿ ಶಾಸಕರಾದ ರಾಘವೇಂದ್ರ ಹಿಟ್ನಾಳ,  ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಯ್ಯದ್ ಜುಲ್ಲು ಖಾದರ ಖಾದ್ರಿ, ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ ಘಾಳಿ, ನಗರಸಭೆ ಅಧ್ಯಕ್ಷ ಮಹೇಂದ್ರ ಛೋಪ್ರಾ, ಜಿ.ಪಂ. ಸದಸ್ಯ ಗೂಳಪ್ಪ ಹಲಗೇರಿ, ತಾ.ಪಂ ಅಧ್ಯಕ್ಷ ಬಾಲಚಂದ್ರನ್, ತಹಶಿಲ್ದಾರ ಗುರುಬಸವರಾಜ, ಗಣ್ಯರಾದ ಮುತ್ತುರಾಜ ಕುಷ್ಟಗಿ, ಕಳಕಪ್ಪ ಕುಂಬಾರ, ನಿಂಗಪ್ಪ ಕುಂಬಾರ, ಪ್ರಭು ಕುಂಬಾರ, ಪಂಪಣ್ಣ ಕುಂಬಾರ, ಈರಣ್ಣ ಆಡೂರ, ಗವಿಸಿದ್ದಪ್ಪ, ಸುವರ್ಣ ಕುಂಬಾರ ಹಾಗೂ ಬಾಳಪ್ಪ ಬಾರಕೇರ ಉಪಸ್ಥಿತರಿದ್ದರು. 

Leave a Reply

Top