ಜಲ ಜೀವನ್ ಮಿಷನ್ ಅನುಷ್ಠಾನ : ವಾರ್ಷಿಕ ಕ್ರಿಯಾ ಯೋಜನೆ ಕುರಿತ ಕಾರ್ಯಾಗಾರ ಯಶಸ್ವಿ


ಕೊಪ್ಪಳ ಮೇ. : ಜಲ ಜೀವನ್ ಮಿಷನ್ ಅನುಷ್ಠಾನದ ಕುರಿತಂತೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕ ಪಂಚಾಯತ್ ಸಭಾಂಗಣದಲ್ಲಿ ಇಂದು (ಮೇ.02) ವಾರ್ಷಿಕ ಕ್ರಿಯಾ ಯೋಜನೆ ಕುರಿತ ಕಾರ್ಯಾಗಾರವು ಯಶಸ್ವಿಯಾಗಿ ಜರುಗಿತು.

ಜಿಲ್ಲಾ ಪಂಚಾಯತ್ ಅಧ್ಯಕ್ಷ ವಿಶ್ವನಾಥ್ ರೆಡ್ಡಿ ಹೊಸಮನಿ ಉಪಸ್ಥಿತಿಯಲ್ಲಿ ಜಲ ಜೀವನ್ ಮಿಷನ್ ಅನುಷ್ಠಾನದ ಕುರಿತಂತೆ ವಾರ್ಷಿಕ ಕ್ರಿಯಾ ಯೋಜನೆ ಕುರಿತು ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು.

ಈ ಸಂದರ್ಭದಲ್ಲಿ ಸಂಸದ ಸಂಗಣ್ಣ ಕರಡಿ, ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪುರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ, ಉಪ ಕಾರ್ಯದರ್ಶಿ ಕೃಷ್ಣಮೂರ್ತಿ ಸೇರಿದಂತೆ ಸಹಾಯಕ ಕಾರ್ಯಪಾಲಕ ಅಭಿಯಂತರರು ಮತ್ತು ಕುಷ್ಟಗಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಮತ್ತು ತಾಲೂಕು ಪಂಚಾಯತಿಯ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.

Please follow and like us:
error