ಜಿಲ್ಲಾಡಳಿತ ಭವನದಲ್ಲಿ ಧ್ವಜಾರೋಹಣ


ಕೊಪ್ಪಳ : 73ನೇ ಸ್ವಾತಂತ್ರೊÃತ್ಸವ ದಿನಾಚರಣೆ ನಿಮಿತ್ಯ ಕೊಪ್ಪಳ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ ಅವರು ರಾಷ್ಟç ಧ್ವಜಾರೋಹಣ ನೆರೆವೇರಿಸಿದರು.
ನಂತರ ಅವರು ಮಾತನಾಡಿ, ಸರ್ಕಾರ, ಜನರ ಶ್ರೆÃಯೋಭಿವೃದ್ಧಿಗಾಗಿ ರೂಪಿಸಿ, ಜಾರಿಗೊಳಿಸಿರುವ ಯೋಜನೆಗಳನ್ನು ಶ್ರಿÃಸಾಮಾನ್ಯರಿಗೆ ತಲುಪುವಂತೆ ಮಾಡಲು, ಎಲ್ಲ ಅಧಿಕಾರಿ, ಸಿಬ್ಬಂದಿಗಳು ದಕ್ಷತೆಯಿಂದ, ಪ್ರಾಮಾಣಿಕತೆಯಿಂದ ಕಾರ್ಯ ನಿರ್ವಹಿಸುವ ಜೊತೆಗೆ, ಪಾರದರ್ಶಕ ಆಡಳಿತ ನಡೆಸಲು ಶ್ರಮ ವಹಿಸಬೇಕು.  ಸರ್ಕಾರಿ ಯೋಜನೆಗಳನ್ನು ಜನರಿಗೆ ತಲುಪಿಸುವ ಕಾರ್ಯವನ್ನು ಆಡಳಿತ ವರ್ಗ ಸರಿಯಾಗಿ ಕೈಗೊಂಡಾಗ ಮಾತ್ರ ಯೋಜನೆಗಳು ಯಶಸ್ವಿಯಾಗಲು ಸಾಧ್ಯ.  ನಮ್ಮ ಕರ್ತವ್ಯವನ್ನು ದೇಶ ಸೇವೆ ಎಂದು ಭಾವಿಸಿ ಕಾರ್ಯನಿರ್ವಹಿಸೋಣ ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ ಮೂರ್ತಿ, ಅಪರ ಜಿಲ್ಲಾಧಿಕಾರಿ ಸೈಯದಾ ಅಯಿಷಾ, ಉಪ ವಿಭಾಗಾಧಿಕಾರಿ ಸಿ.ಡಿ. ಗೀತಾ, ಜಿ.ಪಂ. ಉಪ ಕಾರ್ಯದರ್ಶಿ ಎನ್.ಕೆ. ತೊರವಿ, ಸೇರಿದಂತೆ ಜಿಲ್ಲಾಧಿಕಾರಿ ಕಚೇರಿಯ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Please follow and like us:
error