ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರಿಂದ ಜಿಲ್ಲಾಡಳಿತ ಭವನ ಆವರಣದಲ್ಲಿ ರಾಷ್ಟ್ರ ಧ್ವಜಾರೋಹಣ

ಭಾರತದ ೭೧ ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕೊಪ್ಪಳ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಜಿಲ್ಲಾಡಳಿತ ಭವನದ ಆವರಣದಲ್ಲಿ ಮಂಗಳವಾರದಂದು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.  ನಂತರ ಅವರು ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನಗೈದ ಸ್ವಾತಂತ್ರ್ಯ ಹೋರಾಟಗಾರರನ್ನು ಈ ಸಂದರ್ಭದಲ್ಲಿ ಸ್ಮರಿಸುವುದು ಎಲ್ಲರ ಕರ್ತವ್ಯವಾಗಿದೆ.  ಸರ್ಕಾರ, ಜನರ ಶ್ರೇಯೋಭಿವೃದ್ಧಿಗಾಗಿ ರೂಪಿಸಿ, ಜಾರಿಗೊಳಿಸಿರುವ ಯೋಜನೆಗಳನ್ನು ಶ್ರೀಸಾಮಾನ್ಯರಿಗೆ ತಲುಪುವಂತೆ ಮಾಡಲು, ಎಲ್ಲ ಅಧಿಕಾರಿ, ಸಿಬ್ಬಂದಿಗಳು ದಕ್ಷತೆಯಿಂದ, ಪ್ರಾಮಾಣಿಕತೆಯಿಂದ ಕಾರ್ಯ ನಿರ್ವಹಿಸುವ ಜೊತೆಗೆ, ಪಾರದರ್ಶಕ ಆಡಳಿತ ನಡೆಸಲು ಶ್ರಮ ವಹಿಸಬೇಕು.  ಸರ್ಕಾರಿ ಯೋಜನೆಗಳನ್ನು ಜನರಿಗೆ ತಲುಪಿಸುವ ಕಾರ್ಯವನ್ನು ಆಡಳಿತ ವರ್ಗ ಸರಿಯಾಗಿ ಕೈಗೊಂಡಾಗ ಮಾತ್ರ ಯೋಜನೆಗಳು ಯಶಸ್ವಿಯಾಗಲು ಸಾಧ್ಯ.  ಈ ದಿಸೆಯಲ್ಲಿ ಎಲ್ಲ ಅಧಿಕಾರಿಗಳ ಸಹಕಾರ ಕೋರುವುದಾಗಿ ಮನವಿ ಮಾಡಿದರು.  ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ, ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ, ಉಪವಿಭಾಗಾಧಿಕಾರಿ ಗುರುದತ್ ಹೆಗ್ಡೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Related posts