You are here
Home > Koppal News > ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ರಿಂದ ರಾಷ್ಟ್ರ ಧ್ವಜಾರೋಹಣ

ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ರಿಂದ ರಾಷ್ಟ್ರ ಧ್ವಜಾರೋಹಣ

: ಭಾರತದ 72 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕೊಪ್ಪಳ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ಜಿಲ್ಲಾಡಳಿತ ಭವನದ ಆವರಣದಲ್ಲಿ ಬುಧವಾರದಂದು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ನಂತರ ಅವರು ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನಗೈದ ಮಹಾನ್ ನಾಯಕರು, ಸ್ವಾತಂತ್ರ್ಯ ಹೋರಾಟಗಾರರನ್ನು ಈ ಸಂದರ್ಭದಲ್ಲಿ ಸ್ಮರಿಸುವುದು ಎಲ್ಲರ ಕರ್ತವ್ಯವಾಗಿದೆ. ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಹಾಗೂ ಮಾಧ್ಯಮವನ್ನು ಪ್ರಜಾಪ್ರಭುತ್ವದ ನಾಲ್ಕು ಆಧಾರಸ್ತಂಭಗಳೆಂದು ಹೇಳಲಾಗುತ್ತದೆ. ಇವೆಲ್ಲವೂ ಸಂವಿಧಾನದ ಆಶಯದಂತೆ ಕೆಲಸ ಮಾಡಬೇಕಾಗುತ್ತದೆ. ಸರ್ಕಾರ, ಜನರ ಶ್ರೇಯೋಭಿವೃದ್ಧಿಗಾಗಿ ರೂಪಿಸಿ, ಜಾರಿಗೊಳಿಸಿರುವ ಯೋಜನೆಗಳನ್ನು ಶ್ರೀಸಾಮಾನ್ಯರಿಗೆ ತಲುಪುವಂತೆ ಮಾಡಲು, ಎಲ್ಲ ಅಧಿಕಾರಿ, ಸಿಬ್ಬಂದಿಗಳು ದಕ್ಷತೆಯಿಂದ, ಪ್ರಾಮಾಣಿಕತೆಯಿಂದ ಕಾರ್ಯ ನಿರ್ವಹಿಸುವ ಜೊತೆಗೆ, ಪಾರದರ್ಶಕ ಆಡಳಿತ ನಡೆಸಲು ಶ್ರಮ ವಹಿಸಬೇಕು. ಸರ್ಕಾರಿ ಯೋಜನೆಗಳನ್ನು ಜನರಿಗೆ ತಲುಪಿಸುವ ಕಾರ್ಯವನ್ನು ಆಡಳಿತ ವರ್ಗ ಸರಿಯಾಗಿ ಕೈಗೊಂಡಾಗ ಮಾತ್ರ ಯೋಜನೆಗಳು ಯಶಸ್ವಿಯಾಗಲು ಸಾಧ್ಯ. ಈ ದಿಸೆಯಲ್ಲಿ ಎಲ್ಲ ಅಧಿಕಾರಿಗಳ ಸಹಕಾರ ಕೋರುವುದಾಗಿ ಜಿಲ್ಲಾಧಿಕಾರಿಗಳು ಈ ಸಂದರ್ಭದಲ್ಲಿ ಮನವಿ ಮಾಡಿದರು.
ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ, ಐಎಎಸ್ ಪ್ರೊಬೆಷನರಿ ಅಧಿಕಾರಿ ಅಕ್ಷಯ್ ಶ್ರೀಧರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Top