ಜಿಲ್ಲಾ ಆರೋಗ್ಯ ಇಲಾಖೆಯಿಂದ ರಾಷ್ಟಿಯ ಡೆಂಗ್ಯೂ ದಿನಾಚರಣೆ

ಕೊಪ್ಪಳ ಮೇ. : ರಾಷ್ಟಿçÃಯ ಡೆಂಗ್ಯೂ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಕಛೇರಿ, ಕೊಪ್ಪಳ ಇವರ ವತಿಯಿಂದ ಇಂದು ನಗರದ ಹಳೆ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಡೆಂಗ್ಯೂ ಜನ ಜಾಗೃತಿಗಾಗಿ “ಆರೋಗ್ಯ ಶಿಕ್ಷಣವಾಹಿನಿ ವಾಹನದ ಜಾಥಾ” ಕ್ಕೆ ಚಾಲನೆ ನೀಡಲಾಯಿತು.
ಡೆಂಗ್ಯೂ ಜಾಗೃತಿಯ “ಆರೋಗ್ಯ ಶಿಕ್ಷಣವಾಹಿನಿ” ವಾಹನದ ಜಾಥಾಕ್ಕೆ ಬಿತ್ತಿಪತ್ರ ಬಿಡುಗಡೆ ಮಾಡುವುದರ ಮೂಲಕ ಚಾಲನೆ ನೀಡಿ ಮಾತನಾಡಿದ ಡಾ|| ಲಿಂಗರಾಜು ಟಿ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಭಾರತ ಸರ್ಕಾರದ ನಿರ್ದೇಶನದ ಮೇರೆಗೆ ಪ್ರತಿ ವರ್ಷದ ಮೇ-16 ಅನ್ನು ಜಿಲ್ಲೆಯಾದ್ಯಂತ ರಾಷ್ಟಿçÃಯ ಡೆಂಗ್ಯೂ ದಿನಾಚರಣೆಯನ್ನಾಗಿ ಆಚರಿಸಿ ಡೆಂಗ್ಯೂ ರೋಗ ಪ್ರಸರಣ ಅವಧಿಯ ಮುನ್ನವೇ ಜನಸಮುದಾಯವನ್ನು ಜಾಗೃತಿಗೊಳಿಸಲು ವ್ಯಾಪಕ ಅಭಿಯಾನ, ಜಾಥಾಗಳು, ರ‍್ಯಾಲಿ, ಅಂತರ್ ಇಲಾಖಾ ಸಭೆ ಸಮಾರಂಭಗಳನ್ನು ಜಿಲ್ಲೆಯಾದ್ಯಂತ ನಡೆಸಲಾಗುತ್ತಿತ್ತು. ಆದರೆ ಪ್ರಸ್ತುತ ಕೋವಿಡ್-19 ರ ಆರೋಗ್ಯ ತುರ್ತುಪರಿಸ್ಥಿತಿ ಇರುವುದರಿಂದ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಯಾವುದೇ ಜಾಥಾ, ರ‍್ಯಾಲಿ, ಸಭೆ ಸಮಾರಂಭಗಳನ್ನು ನಡೆಸಲು ಅವಕಾಶವಿಲ್ಲದಿರುವುದರಿಂದ ಜಿಲ್ಲಾ ಆರೋಗ್ಯ ಇಲಾಖೆಯ  ಆರೋಗ್ಯ ಶಿಕ್ಷಣವಾಹಿನಿ ವಾಹನದ ಮೂಲಕ ಡೆಂಗ್ಯೂ ರೋಗದ ಬಗ್ಗೆ ಮೈಕಿಂಗ್, ಆಡಿಯೋ ಮತ್ತು ವಿಡಿಯೋ ಹಾಗೂ ಕರಪತ್ರ ಭಿತ್ತಿಪತ್ರ ಹಂಚುವ ಮೂಲಕ ಜನಜಾಗೃತಿ ಮೂಡಿಸಲಾಗುವುದು ಎಂದು ಹೇಳಿದರು.
ಜಿಲ್ಲೆಯಲ್ಲಿ ಡೆಂಗ್ಯೂ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಡೆಂಗ್ಯೂ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯಿಂದ ಎಲ್ಲಾ ಸೂಕ್ತ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ಡೆಂಗ್ಯೂ ಜ್ವರಕ್ಕೆ ಯಾವುದೇ ನಿರ್ದಿಷ್ಟ ಚಿಕಿತ್ಸೆ ಇಲ್ಲದಿದ್ದರೂ ಜನರೂ ಭಯಪಡುವ ಅವಶ್ಯಕತೆ ಇಲ್ಲ, ಲಕ್ಷಣಗಳನ್ನಾಧರಿಸಿ ಚಿಕಿತ್ಸೆ ನೀಡಲಾಗುವುದು. ಸರ್ಕಾರಿ ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆ ಮತ್ತು ಉಚಿತ ಪ್ರಯೋಗಾಲಯ ಪರೀಕ್ಷೆಗಳನ್ನು ಮಾಡಲಾಗುತ್ತಿದ್ದು ಜನರು ಅನಗತ್ಯ ಭಯಕ್ಕೆ ಒಳಗಾಗದೆ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು ಎಂದು ಹೇಳಿದರು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ|| ಗೌರಿಶಂಕರ್ ಸಿ. ಮಾತನಾಡಿ, ಡೆಂಗ್ಯೂ ಜ್ವರವು ಈಡಿಸ್ ಜಾತಿಯ ಸೊಳ್ಳೆಗಳ ಕಚ್ಚುವಿಕೆಯಿಂದ ಹರಡುತ್ತದೆ ಹಾಗೂ ಇದು ಹಗಲು ಹೊತ್ತಿನಲ್ಲಿಯೇ ಕಚ್ಚುತ್ತವೆ. ನೀರು ಶೇಖರಣೆ ಸಲಕರಣೆಗಳನ್ನು ಸದಾಕಾಲ ಮುಚ್ಚಿಡಬೇಕು ಹಾಗೂ ಮನೆಯ ಒಳಗೆ ಮತ್ತು ಹೊರಗೆ ನೀರು ನಿಲ್ಲದಂತೆ ಎಚ್ಚರ ವಹಿಸಿ ಸೊಳ್ಳೆ ಉತ್ಪತ್ತಿಯನ್ನು ತಡೆಗಟ್ಟಲು ಮನೆಗಳ ಸುತ್ತಮುತ್ತ ಸ್ವಚ್ಛತೆ ಕಾಪಾಡಬೇಕು ಹಾಗೂ ಈಡೀಸ್ ಲಾರ್ವಾ ಸಮೀಕ್ಷೆಗಾಗಿ ನಿಮ್ಮ ಮನೆಗೆ ಭೇಟಿ ನೀಡುವ ಆರೋಗ್ಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತರಿಗೆ ಸಹಕಾರ ನೀಡಿ ಅವರ ಸಲಹೆಗಳನ್ನು ಪಾಲಿಸಲು ಜನಸಮುದಾಯಕ್ಕೆ ಕರೆನೀಡಿದ ಅವರು, ಈ ವರ್ಷದ ಧ್ಯೇಯವಾಕ್ಯದಂತೆ ”ಡೆಂಗ್ಯೂ ನಿಯಂತ್ರಣದಲ್ಲಿ ಸಮುದಾಯದ ಪಾತ್ರ ಪ್ರಮುಖ” ಎಂಬುದನ್ನು ಉಲ್ಲೇಖಿಸಿದರು.
ಜಿಲ್ಲಾ ಕೀಟಜನ್ಯ ರೋಗಗಳ ಸಲಹೆಗಾರರಾದ ರಮೇಶ್ ಕೆ.  ಮಾತನಾಡಿ, ಯಾವುದೇ ಜ್ವರವಿರಲಿ ಶೀಘ್ರವೇ ಹತ್ತಿರದ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ರಕ್ತ ಪರೀಕ್ಷೆ ಮಾಡಿಸಿ ಉಚಿತ ಚಿಕಿತ್ಸೆ ಪಡೆಯಿರಿ. ಮಲಗುವಾಗ ಸೊಳ್ಳೆ ಪರದೆಗಳನ್ನು ಬಳಸಿ ಹಾಗೂ ವಾರಕ್ಕೊಮ್ಮೆ ನೀರು ಶೇಖರಣಾ ಸಲಕರಣೆಗಳನ್ನು ಖಾಲಿ ಮಾಡಿ ಸ್ವಚ್ಚಗೊಳಿಸಿ, ನೀರು ತುಂಬಿ ಮುಚ್ಚಿಡಬೇಕು. ಸೊಳ್ಳೆ ಕಡಿತದಿಂದ ದೂರವಿರಲು ಸಾಧ್ಯವಾದ ಎಲ್ಲಾ ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸಿ. ಡೆಂಗ್ಯೂ ಜ್ವರ ನಿಯಂತ್ರಣಕ್ಕೆ ಜನಸಮುದಾಯದ ಸಹಕಾರ, ಸೊಳ್ಳೆ ಉತ್ಪತ್ತಿ ತಾಣಗಳ ನಿರ್ಮೂಲನೆ ಹಾಗೂ ಜನಜಾಗೃತಿಯೊಂದೇ ಪರಿಹಾರ ಮಾರ್ಗ ಎಂದರು.
ಕೊಪ್ಪಳ ನಗರದಾದ್ಯಂತ ಸಂಚರಿಸಿದ “ಆರೋಗ್ಯ ಶಿಕ್ಷಣವಾಹಿನಿ” ವಾಹನದಲ್ಲಿ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಮಂತ್ರಿಗಳ ಡೆಂಗ್ಯೂ ಜಾಗೃತಿ ಸಂದೇಶಗಳನ್ನು ಭಿತ್ತರಿಸಲಾಯಿತು. ಡೆಂಗ್ಯೂ ಜಾಗೃತಿ ಗೀತೆಗಳನ್ನು ಹಾಡುವುದರ ಮೂಲಕ, ಡೆಂಗ್ಯೂ ಜಾಗೃತಿ ಕರಪತ್ರಗಳನ್ನು ಹಂಚುವುದರ ಮೂಲಕ ಹಾಗೂ ಭಿತ್ತಿಪತ್ರಗಳನ್ನು ಪ್ರದರ್ಶಿಸುವುದರ ಮೂಲಕ ನಗರದಲ್ಲಿ ಡೆಂಗ್ಯೂ ಜನ ಜಾಗೃತಿ ಆರೋಗ್ಯ ಶಿಕ್ಷಣವಾಹಿನಿ” ಜಾಥಾವನ್ನು ಕೈಗೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ|| ಜಂಬಯ್ಯ ಬಿ. ಉಪಸ್ಥಿತರಿದ್ದರು. ಜಿಲ್ಲಾ ಉಪ ಆರೋಗ್ಯ ಶಿಕ್ಣಣಾಧಿಕಾರಿ ಶಿವಾನಂದ ಪೂಜಾರ ಸ್ವಾಗತಿಸಿ,  ಕಾರ್ಯಕ್ರಮವನ್ನು ನಿರೂಪಿಸಿದರು. ಕೊಪ್ಪಳ ತಾಲೂಕ ಆರೋಗ್ಯಾಧಿಕಾರಿಗಳ ಕಚೇರಿಯ ಕ್ಷೇತ್ರ ಆರೋಗ್ಯ ಶಿಕ್ಣಣಾಧಿಕಾರಿ ಗಂಗಮ್ಮ, ತಾಲೂಕ ಆಶಾ ಮೆಂಟರ್ ಸಂಧ್ಯಾ,  ಕೊಪ್ಪಳ ಜಿಲ್ಲಾ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಕಚೇರಿಯ ಸಿಬ್ಬಂದಿ ಭಾಗವಹಿಸಿದ್ದರು.

Please follow and like us:
error