ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಪ್ರವಾಸ ಕಾರ್ಯಕ್ರಮ

ಕೊಪ್ಪಳ ನ. : ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸರ್ಕಾರದ ಕಾರ್ಯದರ್ಶಿ ಉಮಾ ಮಹದೇವನ್ ಅವರು ನ. ೦೯ ರಂದು ಒಂದು ದಿನದ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಉಮಾ ಮಹದೇವನ್ ಅವರು ನ. ೦೯ ರಂದು ಬೆಳಗ್ಗೆ ೮-೧೦ ಗಂಟೆಗೆ ಬೆಂಗಳೂರಿನಿಂದ ಹೊರಟು ವಿಮಾನದ ಮೂಲಕ ಬೆಳಿಗ್ಗೆ ೯-೧೦ಕ್ಕೆ ಹುಬ್ಬಳ್ಳಿಗೆ ಆಗಮಿಸುವರು. ನಂತರ ಕಾರಿನ ಮೂಲಕ ಮಧ್ಯಹ್ನ ೧೨ ಗಂಟೆಗೆ ಕೊಪ್ಪಳಕ್ಕೆ ಆಗಮಿಸಿ, ಜಿಲ್ಲಾಧಿಕಾರಿ ಮತ್ತು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಮಧ್ಯಾಹ್ನ. ೨ ಗಂಟೆಗೆ ಕೊಪ್ಪಳದಿಂದ ರಸ್ತೆ ಮೂಲಕವಾಗಿ ಹುಬ್ಬಳ್ಳಿ ಕಡೆಗೆ ಪ್ರಯಾಣ ಬೆಳೆಸುವರು