ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಅಧ್ಯಕ್ಷರಾಗಿ ಶರಣಬಸನಗೌಡ ಪಾಟೀಲ,ಪ್ರಧಾನ ಕಾರ್ಯದರ್ಶಿಯಾಗಿ ನಿಂಗಪ್ಪ ಗುನ್ನಾಳ

ಕೊಪ್ಪಳ : ಕೊಪ್ಪಳ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾಗಿ ಶರಣಬಸನಗೌಡ ಪಾಟೀಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನಿಂಗಪ್ಪ ಗುನ್ನಾಳ, ಗೌರವಧ್ಯಕ್ಷರಾಗಿ ಶರಣೇಗೌಡ ಪೊಲೀಸ್ ಪಾಟೀಲ್, ಜಿಲ್ಲಾ ಸಹ ಕಾರ್ಯದರ್ಶಿಯಾಗಿ ಮುರುಗೇಂದ್ರ ಇವರುಗಳನ್ನು ಕೊಪ್ಪಳ ಜಿಲ್ಲಾ ಘಟಕದ ವಿವಿಧ ಹಂತದ ಪದಾಧಿಕಾರಿಗಳನ್ನಾಗಿ ಮಾಡಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಂಗಳೂರು ರಾಜ್ಯ ಸಂಘವು ಅನುಮೋದನೆ ನೀಡಿದೆ. ಅನುಮೋದನೆ ನೀಡಿದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ವಿ.ಎಂ.ನಾರಾಯಣಸ್ವಾಮಿ ಹಾಗೂ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಎನ್.ಎಸ್. ಇನ್ನೀತರ ಪದಾಧಿಕಾರಿಗಳಿಗೆ ಕೊಪ್ಪಳ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು, ಕೊಪ್ಪಳ ಜಿಲ್ಲೆಯ ಎಲ್ಲಾ ತಾಲೂಕಾಗಳ ಅಧ್ಯಕ್ಷರು ಹಾಗೂ ಪ್ರ.ಕಾರ್ಯದರ್ಶಿಗಳು, ಪದಾಧಿಕಾರಿಗಳು ಶಿಕ್ಷಕ ಬಳಗ, ಜಿಲ್ಲೆಯ ನೌಕರರ ಬಳಗ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದೆ.

Related posts