You are here
Home > Koppal News > ಜಿಲ್ಲೆಯಲ್ಲಿ ಕನ್ನಡ ಅನುಷ್ಠಾನ : ಅ. 29 ರಂದು ಸಭೆ

ಜಿಲ್ಲೆಯಲ್ಲಿ ಕನ್ನಡ ಅನುಷ್ಠಾನ : ಅ. 29 ರಂದು ಸಭೆ

ಕೊಪ್ಪಳ ಅ. ೆ): ಕೊಪ್ಪಳ ಜಿಲ್ಲೆಯಲ್ಲಿ ಕನ್ನಡ ಅನುಷ್ಠಾನ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯಕ್ರಮಗಳ ಪ್ರಗತಿ ಕುರಿತು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸಭೆಯನ್ನು ಅ. 29 ರಂದು ಮಧ್ಯಾಹ್ನ 4-30 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೇಣುಕಾ ಸುಕುಮಾರ, ಸಹಾಯಕ ಆಯುಕ್ತರಾದ ಸಿ.ಡಿ ಗೀತಾ ಉಪಸ್ಥಿತರಿರುವರು. ಜಿಲ್ಲಾ ನಗರಾಭಿವೃದ್ಧಿ ಕೋಶ, ಸಾರ್ವಜನಿಕ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆ, ಲೋಕೋಪಯೋಗಿ, ಪಂಚಾಯತ್ ರಾಜ್ ಇಂಜಿನಿಯರಿಂಗ್, ನೀರಾವರಿ ಇಲಾಖೆ, ಕೈಗಾರಿಕಾ ಕೇಂದ್ರದ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲೆಯ ಎಲ್ಲಾ ತಾಲೂಕುಗಳ ತಹಶೀಲ್ದಾರರು, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು, ನಗರಸಭೆ/ ಪುರಸಭೆ/ ಪಟ್ಟಣ ಪಂಚಾಯತ್ ಪೌರಾಯುಕ್ತರು/ ಮುಖ್ಯಾಧಿಕಾರಿಗಳು ತಪ್ಪದೇ ಸಭೆಗೆ ಹಾಜರಾಗಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿಗಳ ಕಾರ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.

Top