ಜಿಲ್ಲೆಯಲ್ಲಿ ಗುಳೆ ಪ್ರಮಾಣವನ್ನು ತಗ್ಗಿಸಲು ಮಾನವ ದಿನಗಳನ್ನು ಸೃಷ್ಟಿಸಿ : ಸಂಗಣ್ಣ ಕರಡಿ


ಕೊಪ್ಪಳ ಜ.  ): ಜಿಲ್ಲೆಯಲ್ಲಿ ಗುಳೆ ಪ್ರಮಾಣವನ್ನು ತಗ್ಗಿಸಲು ಅಧಿಕ ಮಾನವ ದಿನಗಳನ್ನು ಸೃಷ್ಟಿಸಿ, ಗುಳೆ ಹೋಗುವ ಕುಟುಂಬದ ಮಕ್ಕಳು ಶಿಕ್ಷಣದಿಂದ ವಂಚಿತವಾಗದAತೆ ಕ್ರಮ ವಹಿಸಿ ಎಂದು ಸಂಸದರು ಹಾಗೂ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ)ಯ ಅಧ್ಯಕ್ಷ ಕರಡಿ ಸಂಗಣ್ಣ ಸಂಬAಧಿಸಿದ ಅಧಿಕಾರಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತನ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಇಂದು (ಜ. 17) ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗಂಗಾವತಿಯ ಮಲ್ಲಾಪುರ ಮತ್ತು ಕುಣಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗುಳೆ ಹೋಗುವ ಕುರಿತು ದಿನ  ಪತ್ರಿಕೆಗಳಲ್ಲಿ ವರದಿ ಬಂದ ಹಿನ್ನೆಲೆಯಲ್ಲಿ ಅಲ್ಲಿನ ವಸ್ತು ಸ್ಥಿತಿ ಪರಿಶೀಲಿಸಲು ಸೂಚಿಸಲಾಗಿತ್ತು ಅದರನುಸಾರ ಗುಳೆ ಪ್ರಮಾಣ ಮತ್ತು ಗುಳೆ ಹೋಗುವ ಕುಟುಂಬದ ಮಕ್ಕಳ ಶಿಕ್ಷಣದ ಕುರಿತು ವಿವರವಾದ ಮಾಹಿತಿ ನೀಡಿ. ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆಯಲ್ಲಿ ಗುಳೆ ಹೋಗುವ ಕುಟುಂಬದ ಮಕ್ಕಳ ಸಂಖ್ಯೆ ಹಾಗೂ ಆ ಮಕ್ಕಳನ್ನು ಪುನಃ ಶಾಲೆಗೆ ಸೇರಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಸಂಪೂರ್ಣ ಮಾಹಿತಿ ನೀಡಿ ಎಂದು ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಸೂಚನೆ ನೀಡಿದರು.
ಅದರಂತೆ ಗುಳೆಯನ್ನು ತಪ್ಪಿಸಲು ಗ್ರಾಮದ ಜನರಿಗೆ ಉದ್ಯೋಗ ನೀಡಲು ಮಾನವ ದಿನಗಳನ್ನು ಸೃಷ್ಟಿಸಿ. ಹಾಗೂ ಮಾನವ ದಿನಗಳ ಮೂಲಕ ಉದ್ಯೋಗ ನೀಡುವ ಕುರಿತು ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಿ ಗುಳೆಯನ್ನು ತಪ್ಪಿಸಿ ಎಂದು ತಾಲ್ಲೂಕು ಪಂಚಾಯತ ಮುಖ್ಯಾಧಿಕಾರಿಗೆ ತಿಳಿಸಿದರು.
ಈ ಕುರಿತು ಜಿ.ಪಂ ಉಪಕಾರ್ಯದರ್ಶಿ ಎನ್.ಕೆ. ತೊರವಿ ಮಾಹಿತಿ ನೀಡುತ್ತಾ ಮಲ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 17,490 ಮತ್ತು ಕುಣಿಕೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 9,430 ಮಾನವ ದಿನಗಳನ್ನು ಸೃಷ್ಟಿಸಲಾಗಿದೆ. ಜಿಲ್ಲೆಯಾದ್ಯಂತ ಇದುವರೆಗೂ ಒಟ್ಟು 42,25,628 ಮಾನವ ದಿನಗಳನ್ನು ಸೃಷ್ಟಿಸಲಾಗಿದೆ. ಗಂಗಾವತಿ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಬೇಡಿಕೆಗೆ ತಕ್ಕಂತೆ ವಿವಿಧ ಯೋಜನೆಗಳಡಿಯಲ್ಲಿ ಉದ್ಯೋಗ ಚೀಟಿಗಳನ್ನು ವಿತರಿಸಿ, ಕೂಲಿಕಾರರಿಗೆ ಕೆಲಸ ಒದಗಿಸಿ ಉತ್ತಮ ಮಾನವ ದಿನಗಳನ್ನು ಸೃಜಿಸಿ ಕೂಲಿ ಪಾವತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ರೇಷ್ಮೆ ಇಲಾಖೆಗೆ ಸಂಬAಧಿಸಿದAತೆ 2019-20ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಘಟಕ ಅಳವಡಿಕೆಗಾಗಿ ಕೊಪ್ಪಳ ಜಿಲ್ಲೆಗೆ ಒಟ್ಟು ರೂ. 20.00 ಲಕ್ಷಗಳ ಅನುದಾನ ಬಿಡುಗಡೆಯಾಗಿದ್ದು ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 25 ಜನ ಫಲಾನುಭವಿಗಳಿಗೆ 20.98 ಹೆಕ್ಟೇರ್ ಪ್ರದೇಶಕ್ಕೆ ಹನಿ ನೀರಾವರಿ ಘಟಕ ಅಳವಡಿಕೆಗಾಗಿ ಒಟ್ಟು ರೂ. 18.98031 ಲಕ್ಷಗಳ ಅನುದಾನವನ್ನು ಭರಿಸಲಾಗಿದೆ ಎಂಬ ಮಾಹಿತಿಗೆ ಅಧ್ಯಕ್ಷರು ಫಲಾನುಭವಿಗಳ ಸಂಪೂರ್ಣ ಮಾಹಿತಿಯೊಂದಿಗೆ ವರದಿ ನೀಡಿ ಎಂದು ರೇಷ್ಮೆ ಇಲಾಖೆ ಉಪನಿರ್ದೇಶಕರಿಗೆ ಸೂಚನೆ ನೀಡಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸಂಬAಧಿಸಿದAತೆ ಕುಷ್ಟಗಿ ತಾಲ್ಲೂಕಿನ ಹನುಮಸಾಗರದಲ್ಲಿ 30 ಹಾಸಿಗೆಗಳ ಸಮುದಾಯ ಆರೋಗ್ಯ ಕೇಂದ್ರ ಕಟ್ಟಡದ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ. ಹನುಮನಾಳದಲ್ಲಿ 30 ಹಾಸಿಗೆಗಳ ಸಮುದಾಯ ಆರೋಗ್ಯ ಕೇಂದ್ರ ಕಟ್ಟಡದ ನಿರ್ಮಾಣಕ್ಕೆ ನಿವೇಶನದಲ್ಲಿನ ತಾಂತ್ರಿಕ ತೊಂದರೆ ಕುರಿತು ಪರಿಶೀಲಿಸಿ ವರದಿ ನೀಡಿ. ಅಗತ್ಯವಿದ್ದಲ್ಲಿ ಬೇರೆ ನಿವೇಶನವನ್ನು ಒದಗಿಸಲಾಗುವುದು. ಕೊಪ್ಪಳ ನಗರದ 100 ಹಾಸಿಗೆಗಳ ಎಂ.ಸಿ.ಎಚ್ ಆಸ್ಪತ್ರೆ ಕಟ್ಟಡದ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ. ಜಿಲ್ಲಾಸ್ಪತ್ರೆ ಹಾಗೂ ತಾಲ್ಲೂಕು ಆರೋಗ್ಯ ಕೇಂದ್ರಗಳಲ್ಲಿನ ಅನೈರ್ಮಲ್ಯದ ಕುರಿತು ದೂರುಗಳು ಬರುತ್ತಿದ್ದು, ವೈದ್ಯೇತರ ಡಿ-ದರ್ಜೆ ಸಿಬ್ಬಂದಿಯನ್ನು ನಿಯೋಜಿಸಿ ಆಸ್ಪತ್ರೆಯ ಸ್ವಚ್ಛತೆಯನ್ನು ಕಾಪಾಡಿ. ಆಸ್ಪತ್ರೆಗೆ ಬಂದವರು ಗುಣಮುಖರಾಗಬೇಕೆ ಹೊರತು ಖಾಯಿಲೆಗೆ ತುತ್ತಾಗಬಾರದು. ಹಾಗೆಯೇ ರೋಗಿಗಳ ಜೊತೆಗೆ ಬಂದವರ ವಾಸ್ತವ್ಯಕ್ಕಾಗಿ ಪರ್ಯಾಯ ವ್ಯವಸ್ಥೆಯನ್ನು ಮಾಡಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾ ಆರೋಗ್ಯಾಧಿಕಾರಿಗೆ ಸೂಚನೆ ನೀಡಿದರು.
ಅಂತರ್ ಜಾತಿ ವಿವಾಹಕ್ಕೆ ಸರ್ಕಾರ ನೀಡುವ ಪ್ರೋತ್ಸಾಹ ಧನದ ಕುರಿತು ಮಾಹಿತಿ ಕೆಳಿದ ಅಧ್ಯಕ್ಷರಿಗೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಮಾಹಿತಿ ನೀಡುತ್ತಾ ಅಂತರ್ ಜಾತಿ ವಿವಾಹಿತ ದಂಪತಿಗಳು ವಿವಾಹ ದಿನದಿಂದ 18 ತಿಂಗಳುಗಳೊಳಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದರೆ ಪ್ರೋತ್ಸಾಹಧನ ನೀಡಲಾಗುತ್ತದೆ ಎಂದು ಹೇಳಿದರು. 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನಕ್ಕಾಗಿ 2018-19 ನೇ ಸಾಲಿಗೆ 11.70 ಲಕ್ಷ ರೂ. ಗಳನ್ನು ಇಲಾಖೆಯಿಂದ ಬಿಡುಗಡೆ ಮಾಡಲಾಗಿದ್ದು, ಅನುದಾನವನ್ನು 5,591 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮಂಜೂರು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಕೂಕನಪಳ್ಳಿಯಲ್ಲಿ ಆಧುನಿಕ ಮೂಲಭೂತ ಸೌಕರ್ಯಗಳನ್ನು ಒದಗಿಸಿ ನಿರ್ಮಿಸಲಾಗಿರುವ ಅಧಿಕೃತ ಮಾರುಕಟ್ಟೆಯಲ್ಲಿ ಪ್ರತಿ ಶುಕ್ರವಾರ ಕುರಿ ಮತ್ತು ಮೇಕೆ ವಾರದ ಸಂತೆ ನಡೆಯಬೇಕು. ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ಕೂಕನಪಳ್ಳಿಯಲ್ಲಿಯೇ ಅಧಿಕೃತ ಮಾರುಕಟ್ಟೆಯನ್ನು ಆರಂಭಿಸುವAತೆ ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಸೂಚನೆ ನೀಡಿದರು.
ಪಶು ಸಂಗೋಪನಾ ಇಲಾಖೆಯ ಯೋಜನೆಯಾದ ರಾಷ್ಟಿçÃಯ ಕೃತಕ ಗರ್ಭಧಾರಣೆ ಯೋಜನೆಯಲ್ಲಿ ಹಸು ಮತ್ತು ಎಮ್ಮೆಗಳ ಫಲವಂತಿಕೆಯ ಸರಾಸರಿಯಲ್ಲಿ ಪ್ರಗತಿ ಕಾಣುತ್ತಿಲ್ಲ. ಈ ಕುರಿತು ರೈತರಲ್ಲಿ ಜಾಗೃತಿ ಮೂಡಿಸಿ. ಗುಣಮಟ್ಟದ ತಳಿಯ ವೀರ್ಯಗಳನ್ನು ಬಳಸಿ ಹಸು ಹಾಗೂ ಎಮ್ಮೆಗಳ ಕೃತಕ ಗರ್ಭಧಾರಣೆಗೆ ಕ್ರಮ ಕೈಗೊಳ್ಳಿ ಎಂದು ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆಯ ಉಪನಿರ್ದೇಶಕರಿಗೆ ಹೇಳಿದರು.
ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಕುಷ್ಟಗಿ ಮತ್ತು ಯಲಬುರ್ಗಾ ತಾಲ್ಲೂಕಿನ 331 ಗ್ರಾಮಗಳು ಸೇರಿದಂತೆ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿನ ಕಾಮಗಾರಿಗಳು ವಿಳಂಬವಾಗುತ್ತಿದ್ದು ಅವುಗಳನ್ನು ಪರಿಶೀಲಿಸಿ ಶೀಘ್ರ ಪೂರ್ಣಗೊಳಿಸಿ ಗ್ರಾಮಗಳಿಗೆ ಸಮರ್ಪಕ ನೀರು ಒದಗಿಸಲು ಕ್ರಮ ಕೈಗೊಳ್ಳುವಂತೆ ಸಂಬAಧಿಸಿದ ಅಧಿಕಾರಿಗೆ ಸೂಚನೆ ನೀಡಿದರು.
ಅಕ್ಷರ ದಾಸೋಹ ಯೋಜನೆಯಡಿ ಮಕ್ಕಳಿಗೆ ನೀಡುವ ಮಧ್ಯಾಹ್ನದ ಬಿಸಿಊಟಕ್ಕೆ ಬಳಸುವ ತೊಗರಿಬೇಳೆ ಹಾಗೂ ಇತರೆ ಪದಾರ್ಥಗಳು ಗುಣಮಟ್ಟದಿಂದ ಕೂಡಿರುವುದಿಲ್ಲ ಹಾಗೂ ಶಾಲೆಯಲ್ಲಿ ಮಕ್ಕಳ ಹಾಜರಾತಿಯಲ್ಲಿ ಕಡಿಮೆ ಇದ್ದರೂ ಅಕ್ಷರ ದಾಸೋಹದಲ್ಲಿ ಎಲ್ಲ ಮಕ್ಕಳು ಹಾಜರಿರುವಂತೆ ದಾಖಲೆ ಸೃಷ್ಟಿಸುತ್ತಾರೆ ಎಂದು ಆರೋಪಿಸಿದ ಕುಷ್ಟಗಿ ಶಾಸಕ ಅಮರೇಗೌಡ ಬಯ್ಯಾಪುರ ಅವರಿಗೆ ಸ್ಪಷ್ಟನೆ ನೀಡಿದ ಜಿ.ಪಂ. ಸಿಇಒ ರಘುನಂದನ್ ಮೂರ್ತಿ ಕಳಪೆ ಗುಣಮಟ್ಟದ ಆಹಾರ ಪದಾರ್ಥಗಳನ್ನು ಬಳಸುತ್ತಿಲ್ಲ. ಗುಣಮಟ್ಟದ ಆಹಾರವನ್ನೇ ಶಾಲಾ ಮಕ್ಕಳಿಗೆ ಹಾಗೂ ವಸತಿ ನಿಲಯದ ಮಕ್ಕಳಿಗೆ ನೀಡಲಾಗುತ್ತಿದೆ ಅಲ್ಲದೇ ಮಕ್ಕಳ ಹಾಜರಾತಿಯನ್ನು ನಿಯಮಾನುಸಾರ ಪಡೆಯಲಾಗುತ್ತಿದ್ದು, ಅಕ್ರಮಕ್ಕೆ ಅವಕಾಶವಿಲ್ಲ  ಎಂದು ಮಾಹಿತಿ ನೀಡಿದರು.
ಅಂಗವಿಕಲರಿಗೆ ನೀಡುವ ತ್ರಿಚಕ್ರ ವಾಹನದಲ್ಲಿ ಸರ್ಕಾರಿ ನಿಯಮಾವಳಿಗಳನ್ನು ಅನುಸರಿಸುತ್ತಿಲ್ಲ. ವೈದ್ಯರ ಲೋಪದಿಂದ ನಿಯಮ ಬಾಹಿರವಾಗಿ ತ್ರಿಚಕ್ರ ವಾಹನ ವಿತರಿಸಲಾಗುತ್ತಿದೆ ಎಂಬ ಶಾಸಕ ಅಮರೇಗೌಡ ಬಯ್ಯಾಪೂರರವರ ಆರೋಪಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಶೇ. 75 ಕ್ಕಿಂತ ಹೆಚ್ಚಿನ ಅಂಗವೈಕಲ್ಯ ಹೊಂದಿದ ವಿಕಲಚೇತನರಿಗೆ ಮಾತ್ರ ತ್ರಿಚಕ್ರ ವಾಹನವನ್ನು ನೀಡಲಾಗುತ್ತಿದ್ದು, ಅಕ್ರಮಗಳು ಕಂಡುಬAದಲ್ಲಿ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳು ತಮ್ಮ ಅಧೀನ ವೈದ್ಯಾಧಿಕಾರಿಗಳಿಗೆ ಸರ್ಕಾರಿ ನಿಯಮಾವಳಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು ಎಂದು ಹೇಳಿದರು.
ರಾಷ್ಟಿçÃಯ ವೃದ್ದಾಪ್ಯ ವೇತನ, ರಾಷ್ಟಿçÃಯ ವಿಧವಾ ವೇತನ, ಅಂಗವಿಕಲ ವೇತನ, ಸಂಧ್ಯಾ ಸುರಕ್ಷಾ ಯೋಜನೆ ಸೇರಿದಂತೆ ವಿವಿಧ 8 ವೇತನಗಳನ್ನು ನೀಡಲು 3-4 ತಿಂಗಳು ವಿಳಂಬವಾಗುತ್ತಿದೆ ಹಾಗೂ ಒಬ್ಬರಿಗೇ ಎರಡರಿಂದ ರಿಂದ ಮೂರು ವೇತನಗಳು ದೊರೆಯುತ್ತಿವೆ ಎಂಬ ಶಾಸಕರ ಪ್ರಶ್ನೆಗೆ ಉತ್ತರಿಸಿದ ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ ವಿಳಂಬ ಹಾಗೂ ಫಲಾನುಭವಿಗಳ ನಕಲು ತಡೆಯಲು ಇನ್ನು ಮುಂದೆ ಫಲಾನುಭವಿಗಳ ಖಾತೆಗೆ ನೇರವಾಗಿ ಮಾಸಿಕ ಪಿಂಚಣಿ ಜಮೆಯಾಗುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಅದಕ್ಕಾಗಿ ಫಲಾನುಭವಿಗಳ ಆಧಾರ್ ಸಂಖ್ಯೆಯನ್ನ ಬ್ಯಾಂಕ್ ಖಾತೆಗೆ ಜೋಡಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದರು.
ಜಿಲ್ಲೆಯಾದ್ಯಂತ ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆಯ ಜಾಗೃತಿಯು ಕೇವಲ ಹೆಸರಿಗೆ ಮಾತ್ರ ಸೀಮಿತವಾಗಿದ್ದು, ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ನಮ್ಮ ಜಿಲ್ಲೆ ಪ್ರಚಾರಕ್ಕೆ ಮಾತ್ರ ಸೀಮಿತವಾಗಿದೆ. ನಮ್ಮ ಜಿಲ್ಲೆಯಲ್ಲಿ ಲಿಂಗ ತಾರತಮ್ಯ, ಹೆಣ್ಣುಮಕ್ಕಳ ಉಳಿವು, ಹೆಣ್ಣು ಮಕ್ಕಳ ಶಿಕ್ಷಣ ಹೆಚ್ಚಿಸುವ ಕುರಿತು ಇನ್ನೂ ಹೆಚ್ಚಿನ ಕಾರ್ಯಕ್ರಮಗಳನ್ನು ರೂಪಿಸಿ ಎಂದು ಅಧ್ಯಕ್ಷರು ಹೇಳಿದರು.
ಕಾರಟಗಿ ವ್ಯಾಪ್ತಿಯ ರೈತರಿಗೆ ಉತ್ತಮ ರೈಸ್ ಟೆಕ್ನಾಲಜಿ ಪಾರ್ಕ ನಿರ್ಮಾಣದ ಯೋಜನೆ ಪ್ರಗತಿಯಲ್ಲಿದೆ. ಇಲ್ಲಿ ಉತ್ತಮ ಸಿ.ಸಿ ರಸ್ತೆ, ಒಳಚರಂಡಿ, ಟೆಂಡರ್ ಹಾಲ್, ಶೌಚಾಲಯಗಳು, ಬೀದಿ ದೀಪಗಳು, ಶುದ್ಧ ಕುಡಿಯುವ ನೀರಿನ ಘಟಕಗಳು, ಕ್ಲೀನಿಂಗ್ ಘಟಕಗಳು, ಸಂಯುಕ್ತ ಭವನ, ಇಂಡಸ್ಟಿçಯಲ್ ನಿವೇಶನಗಳು ಸೇರಿದಂತೆ ಉತ್ತಮ ಮೂಲ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಇದು ಏಷ್ಯಾದಲ್ಲಿಯೇ ಎರಡನೇ ಅತಿ ದೊಡ್ಡ ಮತ್ತು ಉನ್ನತ ಮೂಲ ಸೌಕರ್ಯಗಳ ರೈಸ್ ಪಾರ್ಕ್ ಆಗಲಿದೆ ಎಂದು ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕರು ಮಾಹಿತಿ ನೀಡಿದರು.
2019-20ನೇ ಸಾಲಿನ ಸಂಸದರ ಆದರ್ಶ ಗ್ರಾಮ ಯೋಜನೆ ಮತ್ತು ಸ್ವಚ್ಛ ಭಾರತ ಮತ್ತು  ನರೇಗಾ ಯೋಜನೆ ಅಡಿಯಲ್ಲಿ ಕೊಪ್ಪಳ ಜಿಲ್ಲೆಯ ಹಲಗೇರಿ ಗ್ರಾಮದಲ್ಲಿ 386 ಕಾಮಗಾರಿಗಳನ್ನು ಆಯ್ಕೆ ಮಾಡಿಕೊಂಡಿದ್ದು 336 ಕಾಮಗಾರಿ ಪ್ರಾರಂಭವಾಗಿವೆ. 14 ಕಾಮಗಾರಿಗಳು ಆರಂಭದ ಹಂತದಲ್ಲಿವೆ. ನವಲಿಯಲ್ಲಿ ಆಯ್ಕೆ ಮಾಡಿಕೊಂಡ 16 ಕಾಮಗಾರಿಗಳಲ್ಲಿ 14 ಪೂರ್ಣವಾಗಿವೆ. 2 ಬಾಕಿ ಉಳಿದಿವೆ ಎಂದು ಜಿ.ಪಂ. ಉಪ ಕಾರ್ಯದರ್ಶಿ ಮಾಹಿತಿ ನೀಡಿದರು.
ಸಭೆಯಲ್ಲಿ ಇತರೆ ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚಿಸಲಾಯಿತು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ರಾಜ್ಯ ನಿರ್ದೇಶಕರಾದ ಶಿವಶಂಕರ, ಜಿಲ್ಲಾ ಪಂಚಾಯಿತಿಯ ವಿವಿಧ ಸ್ಥಾಯಿ ಸಮಿತಿ ಅಧ್ಯಕ್ಷರು, ಸದಸ್ಯರು, ದಿಶಾ ಸಮಿತಿಗೆ ಹೊಸದಾಗಿ ನೇಮಕಗೊಂಡ ಸದಸ್ಯರು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Please follow and like us:
error