ಜಿಲ್ಲೆಯಲ್ಲಿ ರಸಗೊಬ್ಬರ ಹಾಗೂ ಬಿತ್ತನೆ ಬೀಜಗಳ ಕೊರತೆ ಇಲ್ಲ : ಬಿ.ಸಿ. ಪಾಟೀಲ್

ಕೊಪ್ಪಳ ಮೇ. 2: ಕೊಪ್ಪಳ ಜಿಲ್ಲೆಯಲ್ಲಿ ರಸಗೊಬ್ಬರ ಹಾಗೂ ಬಿತ್ತನೆ ಬೀಜಗಳ ಕೊರತೆಯಾಗದಂತೆ ರೈತ ಸಂಪರ್ಕ ಕೇಂದ್ರಗಳಲ್ಲಿ ಇವುಗಳನ್ನು ಸಂಗ್ರಹಿಸಲಾಗಿದ್ದು, ರೈತರು ತಮ್ಮ ಬಿತ್ತನೆಗೆ ಬೇಕಾಗುವ ಬೀಜಗಳನ್ನು ರೈತ ಸಂಪರ್ಕ ಕೇಂದ್ರಗಳಿAದ ಪಡೆಯಬಹುದಾಗಿದೆ ಎಂದು ಕರ್ನಾಟಕ ಸರ್ಕಾರದ ಕೃಷಿ ಸಚಿವರು ಮತ್ತು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ಪಾಟೀಲ್ ಹೇಳಿದರು.
ಅವರು ಬುಧವಾರದಂದು (ಮೇ.27) ನಗರದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದರು.
ರಾಜ್ಯದಲ್ಲಿ ರೈತರಿಗೆ ಯಾವುದೇ ರಸಗೊಬ್ಬರ ಬೀಜ ಹಾಗೂ ಇತರೆ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗದAತೆ ನೋಡಿಕೊಳ್ಳಲು ಕೃಷಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದು, ಪ್ರಸ್ತುತ ಮುಂಗಾರು ಬಿತ್ತನೆಗೆ ರೈತರಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು.  ಮೆಕ್ಕೆಜೋಳಕ್ಕೆ ಈಗಾಗಲೇ 10 ಲಕ್ಷ ರೈತರಿಗೆ ರೂ. 5000 ದಂತೆ ಪರಿಹಾರವನ್ನು ರಾಜ್ಯ ಸರ್ಕಾರವು ಘೋಷಣೆ ಮಾಡಿದ್ದು, ಇನ್ನೂ ರೈತರ ಖಾತೆಗೆ ಹಣ ಬಂದಿಲ್ಲ ಎನ್ನುವ ದೂರುಗಳು ಕೇಳಿ ಬರುತ್ತಿದ್ದು, ಪರಿಹಾರ ಘೋಷಣೆ ಮಾಡಿದ ತಕ್ಷಣವೇ ಅವರ ಖಾತೆಗೆ ಸರ್ಕಾರ ಹಣ ಹಾಕುವುದಿಲ್ಲ.  ಮೊದಲು ಮೆಕ್ಕೆಜೋಳ ಬೆಳೆದ ರೈತರ ಬೆಳೆಗಳ ಸಮೀಕ್ಷೆ ಮಾಡಿ ಕೃಷಿ ಅಧಿಕಾರಿಗಳು ಮತ್ತು ಗ್ರಾಮ ಲೆಕ್ಕಾಧಿಕಾರಿಗಳಿಂದ ವರದಿ ಪಡೆದ ನಂತರ ಮೆಕ್ಕೆಜೋಳ ಬೆಳೆದ ನಿಜವಾದ ಫಲಾನುಭವಿಗಳಿಗೆ ಪರಿಹಾರ ನೀಡಲಾಗುವುದು ಎಂದರು.
ಕೊಪ್ಪಳದಲ್ಲಿ ಮಂಗಳವಾರ ಒಂದು ಕೋವಿಡ್-19 ಪ್ರಕರಣ ಪತ್ತೆಯಾಗಿದ್ದು, ಈ ವ್ಯಕ್ತಿಯು ರಾಯಚೂರು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಂಬುದಾಗಿದ್ದು, ಕೋವಿಡ್‌ಗೆ ಸಂಬAಧಪಟ್ಟAತೆ ಜಿಲ್ಲೆಯಲ್ಲಿ ಹಲವಾರು ಮುಂಜಾಗೃತ ಕ್ರಮಗಳನ್ನು ತೆಗೆದುಕೊಂಡಿರುವ ಕುರಿತು ಅಧಿಕಾರಿಗಳೊಂದಿಗೆ ಮಾಹಿತಿ ಪಡೆಯಲಾಗಿದೆ.  ಕೋವಿಡ್-19 ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಗಳು, ಬಿಎಲ್.ಒ., ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಉತ್ತಮ ಕಾರ್ಯನಿರ್ವಹಿಸುತ್ತಿರುವುದರಿಂದ ಇಡೀ ರಾಜ್ಯದಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಕಡಿಮೆ ಸಂಖ್ಯೆಯ ಪ್ರಕರಣಗಳು ದಾಖಲಾಗಿವೆ.
ಕೊರೋನಾ ನಿಯಂತ್ರಣದಲ್ಲಿ ಭಾರತವು ವಿಶ್ವದಲ್ಲಿಯೇ ಉತ್ತಮ ಕಾರ್ಯನಿರ್ವಹಿಸುತ್ತಿದ್ದು, ಕರ್ನಾಟಕವು ಇದಕ್ಕೆ ಹೊರತಾಗಿಲ್ಲ.  ಲಾಕ್‌ಡೌನ್ ಸಂದರ್ಭದಲ್ಲಿ ಶ್ರಮಿಕ ವರ್ಗಗಳ ಕಷ್ಟಕ್ಕೆ ಸ್ಪಂದಿಸಿರುವ ಸರ್ಕಾರವು ಅವರಿಗೆ ಪರಿಹಾರ ರೂಪದಲ್ಲಿ ರೂ. 1610 ಕೋಟಿ ಹಣವನ್ನು ಎಲ್ಲಾ ವರ್ಗಗಳಾದ ಕ್ಷೌರಿಕರು, ಮಡಿವಾಳರು, ದರ್ಜಿಗಳು ಸೇರಿದಂತೆ ಇತರ ಶ್ರಮಿಕ ವರ್ಗಗಳ ಜನರಿಗೆ ಸರ್ಕಾರದಿಂದ ಪರಿಹಾರವನ್ನು ನೀಡುವ ಕೆಲಸ ಮಾಡಲಾಗುತ್ತಿದೆ ಎಂದು ಸಚಿವರು ಹೇಳಿದರು.

Please follow and like us:
error

Related posts