ಕೊಪ್ಪಳ : ಕೊಪ್ಪಳ ಜಿಲ್ಲೆಯ ಜನತೆಗೆ ಸ್ವಲ್ಪಮಟ್ಟಿನ ನಿರಾಳ . ಇವತ್ತು ಮತ್ತೊಬ್ಬ ಕರೋನಾದಿಂದ ಗುಣಮುಖಳಾದ ಮಹಿಳೆಯನ್ನು ಡಿಸ್ಚಾರ್ಜ ಮಾಡಲಾಗಿದೆ. ಚಿಕಿತ್ಸೆಯಿಂದ ಗುಣಮುಖವಾದ ಹಿನ್ನೆಲೆಯಲ್ಲಿ ಪೇಷಂಟ್ ನಂಬರ್ P-5834 ಕೊವಿಡ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಸ್ವಾಬ್ ಟೆಸ್ಟಿಂಗ್ ನಲ್ಲಿ ನೆಗೆಟಿವ್ ಬಂದಿದ್ದರಿಂದ ಬಿಡುಗಡೆ ಮಾಡಲಾಗಿದೆ. ಜಿಲ್ಲೆಯಲ್ಲಿ ಒಟ್ಟು ೧೩ ಕರೋನಾ ಪಾಜಿಟಿವ್ ಕೇಸ್ ಗಳು ಬಂದಿವೆ. ಅವರನ್ನು ಕೋವಿಡ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಆ ರೋಗಿಗಳ ಪೈಕಿ ಒಂಬತ್ತು ಜನರನ್ನು ಈಗಾಗಲೇ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಇಂದು P-5834ರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾ ಸರ್ಜನ್ ಡಾ.ಎಸ್. ದಾನರಡ್ಡಿ ಮಾಹಿತಿ ನೀಡಿದ್ದಾರೆ.
Please follow and like us: