ಜೂನ್ 30 ರಂದು ಜಿಲ್ಲೆಯಲ್ಲಿ 13 ಸೋಂಕು ದೃಢ : ಪಿ.ಸುನೀಲ್ ಕುಮಾರ್


ಕೊಪ್ಪಳ  : ಜಿಲ್ಲೆಯಲ್ಲಿ ಜೂನ್ 30 ರಂದು ಒಬ್ಬರು ಕೊರೊನಾ ವಾರಿಯರ್ ಸೇರಿದಂತೆ 13 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.
ಗಂಗಾವತಿ ತಾಲ್ಲೂಕಿನಲ್ಲಿ ಒಟ್ಟು 8 ಜನರಲ್ಲಿ ಸೋಂಕು ದೃಢಪಟ್ಟಿವೆ. ಗಂಗಾವತಿಯ 10 ವರ್ಷ ಮತ್ತು 7 ವರ್ಷದ ಬಾಲಕಿಯರಲ್ಲಿ ಸೋಂಕು ದೃಢಪಟ್ಟಿದ್ದು, ಇವರು ಪಿ-9810 ನ ಪ್ರಾಥಮಿಕ ಸಂಪರ್ಕಿತರಾಗಿದ್ದಾರೆ. ವೆಂಕಟಗಿರಿಯ 45 ವರ್ಷದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದ್ದು, ಇವರು ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ವೆಂಕಟಾಪುರಕ್ಕೆ ಪ್ರಯಾಣ ಬೆಳೆಸಿದ್ದರು. ಶೀತಜ್ವರದ(ಐಎಲ್‌ಐ) ಹಿನ್ನೆಲೆ ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ದೃಢಪಟ್ಟಿದೆ. ಗಂಗಾವತಿಯ 23 ವರ್ಷದ ಮಹಿಳೆ ಮತ್ತು 23 ವರ್ಷದ ಪುರುಷನಲ್ಲಿ ಸೋಂಕು ದೃಢಪಟ್ಟಿದ್ದು, ಶೀತಜ್ವರದ(ಐಎಲ್‌ಐ) ಹಿನ್ನೆಲೆ ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ದೃಢಪಟ್ಟಿದೆ. ಗಂಗಾವತಿಯ 48 ವರ್ಷದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದ್ದು, ಗಂಗಾವತಿಯ ಮರಳಿ ಗ್ರಾಮದ ಸಂಪರ್ಕ ಹೊಂದಿದ್ದರು. ಯರಡೋಣಿಯ 34 ವರ್ಷದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದ್ದು, ಶೀತಜ್ವರದ(ಐಎಲ್‌ಐ) ಹಿನ್ನೆಲೆ ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ದೃಢಪಟ್ಟಿದೆ. ಚಿಕ್ಕಜಂತಕಲ್‌ನ 18 ವರ್ಷದ  ಯುವಕನಲ್ಲಿ ಸೋಂಕು ದೃಢಪಟ್ಟಿದ್ದು, ಇವರು ಜೂನ್ 26 ರಂದು ಬೆಂಗಳೂರಿನಿAದ ಆಗಮಿಸಿದ್ದಾರೆ. ಶೀತಜ್ವರದ(ಐಎಲ್‌ಐ)  ಹಿನ್ನೆಲೆಯಲ್ಲಿ ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ದೃಢಪಟ್ಟಿದೆ.
ಕುಷ್ಟಗಿ ತಾಲ್ಲೂಕಿನ ದೊಣ್ಣೆಗುಡ್ಡದಲ್ಲಿ 12 ವರ್ಷದ ಇಬ್ಬರು ಬಾಲಕರು ಮತ್ತು 41 ವರ್ಷದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದ್ದು, ಇವರೆಲ್ಲರೂ ಪಿ-10987 ನ ಪ್ರಾಥಮಿಕ ಸಂಪರ್ಕಿತರಾಗಿದ್ದಾರೆ.
ಕೊಪ್ಪಳದ 49 ವರ್ಷದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದ್ದು, ಇವರಲ್ಲಿ ತೀವ್ರ ಉಸಿರಾಟದ ಸಮಸ್ಯೆ (ಸಾರಿ)ಕಂಡುಬAದ ಹಿನ್ನೆಲೆ ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ದೃಢಪಟ್ಟಿದೆ. ತಾಲ್ಲೂಕಿನ ಮುನಿರಾಬಾದ ಗ್ರಾಮದ ಕೊರೊನಾ ವಾರಿಯರ್ 34 ವರ್ಷದ ಮಹಿಳೆಯಲ್ಲಿ ಸೋಂಕು ದೃಢಪಟ್ಟಿದೆ.
ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಪತ್ತೆ ಕಾರ್ಯ ನಡೆದಿದೆ ಎಂದು ಜಿಲ್ಲಾಧಿಕಾರಿಗಳು   ತಿಳಿಸಿದ್ದಾರೆ.

Please follow and like us:
error