You are here
Home > Koppal News > ಡಾ: ಬಾಬು ಜಗಜೀವನರಾಮ್ ಅವರಿಗೆ ಭಕ್ತಿ ನಮನ

ಡಾ: ಬಾಬು ಜಗಜೀವನರಾಮ್ ಅವರಿಗೆ ಭಕ್ತಿ ನಮನ

ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಂ ಅವರ ೧೧೧ ನೇ ಜನ್ಮ ದಿನಾಚರಣೆಯನ್ನು ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಗಜೀವನರಾಂ ಅವರ ಭಾವಚಿತ್ರಕ್ಕೆ ಪುಷ್ಪವನ್ನು ಅರ್ಪಿಸಿ ಭಕ್ತಿ ನಮನ ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.
ಚುನಾವಣಾ ನೀತಿ ಸಂಹಿತೆಯ ಕಾರಣದಿಂದಾಗಿ ಜಿಲ್ಲಾಡಳಿತ ವತಿಯಿಂದ ಡಾ. ಬಾಬು ಜಗಜೀವನರಾಂ ಅವರ ಜಯಂತಿಯನ್ನು ಗುರುವಾರದಂದು ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಸರಳವಾಗಿ ಆಚರಿಸಲಾಯಿತು. ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟ್ ರಾಜಾ, ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ರೇಣುಕಾನಂದ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಬಂಡಿವಡ್ಡರ್, ಜಿ.ಪಂ. ಉಪಕಾರ್ಯದರ್ಶಿ ನಾಗರಾಜ್ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜಗಜೀವನರಾಂ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆಗೈದು ಭಕ್ತಿ ನಮನ ಸಲ್ಲಿಸಿದರು. ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Top