ಕೊಪ್ಪಳ ಏ. : ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಂ ಅವರ 112 ನೇ ಜನ್ಮ ದಿನಾಚರಣೆಯನ್ನು ಕೊಪ್ಪಳ ಜಿಲ್ಲಾ ಪಂಚಾಯತ್ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಜಗಜೀವನರಾಂರವರ ಭಾವಚಿತ್ರಕ್ಕೆ ಪುಷ್ಪವನ್ನು ಅರ್ಪಿಸಿ ಭಕ್ತಿ ನಮನ ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.
ಲೋಕಸಭಾ ಸಾರ್ವತ್ರಿಕ ಚುನಾವಣಾ ನೀತಿ ಸಂಹಿತೆಯ ಕಾರಣದಿಂದಾಗಿ ಜಿಲ್ಲಾಡಳಿತ ವತಿಯಿಂದ ಡಾ. ಬಾಬು ಜಗಜೀವನರಾಂ ಅವರ ಜಯಂತಿಯನ್ನು ಶುಕ್ರವಾರದಂದು ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಸರಳವಾಗಿ ಆಚರಿಸಲಾಯಿತು. ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್.ಎಸ್. ಪೆದ್ದಪ್ಪಯ್ಯ, ಅಪರ ಜಿಲ್ಲಾಧಿಕಾರಿ ಬಾಲಚಂದ್ರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಬಿ. ಕಲ್ಲೇಶ, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಪರಮೇಶ್ವರಪ್ಪ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಕೃಷ್ಣಮೂರ್ತಿ ದೇಸಾಯಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಈರಣ್ಣ ಪಂಚಾಳ್, ಪೊಲೀಸ್ ಇಲಾಖೆಯ ಎಸ್.ಎಸ್. ಮಲ್ಲೂರು ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜಗಜೀವನರಾಂ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆಗೈದು ಭಕ್ತಿ ನಮನ ಸಲ್ಲಿಸಿದರು. ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಡಾ. ಬಾಬು ಜಗಜೀವನರಾಮ್ ಜನ್ಮ ದಿನಾಚರಣೆ : ಜಿಲ್ಲಾಡಳಿತದಿಂದ ಭಕ್ತಿ ನಮನ
Please follow and like us: