ಡಾ. ಬಿ.ಆರ್. ಅಂಬೇಡ್ಕರ್‌ಅವರ ಮಹಾ ಪರಿನಿರ್ವಾಣ ದಿನಾಚರಣೆ

ಕೊಪ್ಪಳ ಡಿ. 06 ಡಾ. ಬಿ.ಆರ್. ಅಂಬೇಡ್ಕರವರ ಮಾಹಾ ಪರಿನಿರ್ವಾಣ ದಿನಾಚರಣೆಯ ಅಂಗವಾಗಿ ಕೊಪ್ಪಳ ಉಪ ವಿಭಾಗಾಧಿಕಾರಿ ಸಿ.ಡಿ ಗೀತಾ ಅವರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ ನಮನ ಸಲ್ಲಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು(ಡಿ.6) ಹಮ್ಮಿಕೊಂಡಿದ್ದ ಡಾ. ಬಿ.ಆರ್. ಅಂಬೇಡ್ಕರವರ ಮಾಹಾ ಪರಿನಿರ್ವಾಣ ದಿನಾಚರಣೆಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತ ಸಂವಿಧಾನವು ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಶ್ಲಾಘನೀಯ ಕೊಡುಗೆಯಾಗಿದೆ. ಭಾರತದ ಪ್ರತಿಯೊಬ್ಬ ಪ್ರಜೆ ಸಂವಿಧಾನ ನಮಗೆ ನೀಡಿದ ಹಕ್ಕು ಹಾಗೂ ಸ್ವಾತಂತ್ರö್ಯವನ್ನು ಒಳ್ಳೆಯ ಉದ್ದೇಶಕ್ಕೆ ಬಳಸಿಕೊಳ್ಳಬೇಕು. ಸಂವಿಧಾನವು ನಮ್ಮ ದೇಶದ ಪ್ರಗತಿಗೆ ಅತ್ಯವಶ್ಯಕವಾಗಿದೆ. ಆಡಳಿತ, ನಿತ್ಯ ಜೀವನ, ಕಾನೂನು ಮುಂತಾದ ವಿಷಯಗಳಿಗೆ ಸಂವಿಧಾನ ಮಾರ್ಗದರ್ಶಿಯಾಗಿದ್ದು, ಸಂವಿಧಾನದ ಆಶಯವನ್ನು ಎಲ್ಲರೂ ಪಾಲಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಸಾಂಖ್ಯಿಕ ಅಧಿಕಾರಿ ಕೃಷ್ಣಮೂರ್ತಿ ದೇಸಾಯಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಈರಪ್ಪ ಆಶಾಪುರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Please follow and like us:
error