ಡಾ.ಭಾಗ್ಯಜ್ಯೋತಿಗೆ ಪ್ರಶಸ್ತಿ


ಕೊಪ್ಪಳ: ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕಿ ಡಾ.ಭಾಗ್ಯಜ್ಯೋತಿ ಬಿ ಇವರಿಗೆ ರಾಷ್ಟ್ರೀಯ ಶಿಕ್ಷಣ ಸೇವಾ ರತ್ನ ಪ್ರಶಸ್ತಿ ಬಂದಿರುತ್ತದೆ. ಅಂತರ ರಾಷ್ಟ್ರೀಯ ಶಿಕ್ಷಕರ ದಿನಾಚರಣೆ ಅಂಗವಾಗಿ ಇತ್ತೀಚಿಗೆ ಬೆಂಗಳೂರಿನಲ್ಲಿ ಜರುಗಿದ ಕರ್ನಾಟಕ ಶಿಕ್ಷಕರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಶಿಕ್ಷಣ, ಸಾಹಿತ್ಯ, ಸಂಶೋಧನೆ,ಉಪನ್ಯಾಸ ಮತ್ತು ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ಡಾ.ಭಾಗ್ಯಜ್ಯೋತಿ ಇವರಿಗೆ ಪ್ರಾಚಾರ್ಯರು, ಶಿಕ್ಷಕ,ಶಿಕ್ಷಕೇತರ ಸಿಬ್ಬಂಧಿ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿರುತ್ತಾರೆ. ಕೊಪ್ಪಳ ಜಿಲ್ಲಾ ನಾಗರೀಕರ ವೇದಿಕೆ,ಕರ್ನಾಟಕ ರಾಜ್ಯ ಶಿಕ್ಷಕರ ವಿಕಾಸ ಪರಿಷತ್ ಬೆಂಗಳೂರ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರ ರುಕ್ಮಿಣಿ ಬಾಯಿ ಸ್ಮಾರಕ ಟ್ರಸ್ಟ ಬೆಂಗಳೂರ ಇವುಗಳ ಸಂಯುಕ್ತಾಶ್ರಯದಲ್ಲಿ ಶಿಕ್ಷಣ ಸಮ್ಮೇಳನ ಹಮ್ಮಿಕೊಳ್ಳಲಾಗಿತ್ತು.

Related posts