ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿ : ಅರ್ಜಿ ಆಹ್ವಾನ

ಕೊಪ್ಪಳ ಡಿ. 22 (): ಕೊಪ್ಪಳ ಸಹಕಾರ ಸಂಘಗಳ ಉಪ ನಿಬಂಧಕರ ಕಾರ್ಯಾಲಯದ ವತಿಯಿಂದ ದೂರ ಶಿಕ್ಷಣ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳವು ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್, ಕಲಬುರ್ಗಿ ತರಬೇತಿ ಕೇಂದ್ರದ ಮೂಲಕ ಸಹಕಾರ ಸಂಘ/ ಸಂಸ್ಥೆಗಳ ಮತ್ತು ಸಹಕಾರ ಬ್ಯಾಂಕುಗಳ ಸಿಬ್ಬಂದಿಗಳಿಗೆ 6 ತಿಂಗಳ ಅಥವಾ 180 ದಿನಗಳ ದೂರ ಶಿಕ್ಷಣದ ಮೂಲಕ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಯನ್ನು ನೀಡುತ್ತಿದ್ದು, ಈ ತರಬೇತಿಯನ್ನು ಪಡೆಯಲು ಇಚ್ಛಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ಡಿ. 31 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್, ಆದರ್ಶ ನಗರ, ಸೇಡಂ ರಸ್ತೆ, ಕಲಬುರ್ಗಿ-585105, ದೂ.ಸಂ. 08472-245340, ಮೊ.ಸಂ. 9916726886, 8495893192 ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಕೊಪ್ಪಳ ಸಹಕಾರ ಸಂಘಗಳ ಉಪ ನಿಬಂಧಕರ ತಿಳಿಸಿದ್ದಾರೆ
=======

Please follow and like us:
error