ಡಿ. ದೇವರಾಜ ಅರಸು ಪ್ರತಿಭಾ ಪುರಸ್ಕಾರ : ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

ಕೊಪ್ಪಳ ನ. ೨೨  : ಕೊಪ್ಪಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಪದವಿ/ ಸ್ನಾತ್ತಕೋತ್ತರ ಪದವಿ ಮತ್ತು ವೃತ್ತಿಪರ ಪದವಿ/ ವೃತ್ತಿಪರ ಸ್ನಾತ್ತಕೊತ್ತರ ಪದವಿಯಲ್ಲಿ ಪದವಿಯಲ್ಲಿ ಹೆಚ್ಚು ಅಂಕ ಗಳಿಸಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಡಿ. ದೇವರಾಜ ಅರಸು ಪ್ರತಿಭಾ ಪುರಸ್ಕಾರ ನೀಡಲು ಅರ್ಹರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ೨೦೧೮ನೇ ಸಾಲಿನಲ್ಲಿ ಪದವಿ/ ಸ್ನಾತ್ತಕೋತ್ತರ ಪದವಿ ಮತ್ತು ವೃತ್ತಿಪರ ಪದವಿ/ ವೃತ್ತಿಪರ ಸ್ನಾತ್ತಕೊತ್ತರ ಪದವಿಯನ್ನು ಪೂರ್ಣಗೊಳಿಸಿದ್ದು, ಸರಾಸರಿ ಶೇಕಡಾ ೭೦ ಮತ್ತು ಅದಕ್ಕಿಂತ ಹೆಚ್ಚು ಅಂಕ ಗಳಿಸಿರುವ ಹಿಂದುಳಿದ ವರ್ಗಗಳ ಪ್ರವರ್ಗ-೧, ೨ಎ, ೩ಎ ಹಾಗೂ ೩ಬಿ ವರ್ಗಕ್ಕೆ ಸೇರಿದವರಾಗಿರಬೇಕು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ನ. ೩೦ ಕೊನೆಯ ದಿನವಾಗಿದ್ದು, ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‌ಸೈಟ್ www.backwardclasses.kar.nic.inಅನ್ನು ನೋಡಬಹುದಾಗಿದೆ. ಅಥವಾ ಸಹಾಯವಾಣಿ ಸಂಖ್ಯೆ ೮೦೫೦೭೭೦೦೦೪ ಕ್ಕೆ ಸಂಪರ್ಕಿಸಬಹುದು ಎಂದು ಕೊಪ್ಪಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ  ತಿಳಿಸಿದ್ದಾರೆ.

Please follow and like us:

Related posts