ಡಿ. ೦೩ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ : ಯಾರಿಗೂ ದುಡ್ಡು ಕೊಡಬೇಡಿ,ಮೋಸ ಹೋಗಬೇಡಿ -ಡಾ. ಅನೂಪ್‌ಶೆಟ್ಟಿ

ಕೊಪ್ಪಳ ಜಿಲ್ಲಾ ಪೊಲೀಸ್ ಘಟಕದಲ್ಲಿ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಯ ಆಯ್ಕೆಗೆ ಲಿಖಿತ ಪರೀಕ್ಷೆ ಡಿ. ೦೩ ರಂದು ಮಧ್ಯಾಹ್ನ ೦೩ ಗಂಟೆಯಿಂದ ೪-೩೦ ರವರೆಗೆ ಗಂಗಾವತಿಯಲ್ಲಿ ಜರುಗಲಿದ್ದು, ಅಭ್ಯರ್ಥಿಗಳು ಯಾವುದೇ ಮಧ್ಯವರ್ತಿಗಳ ಭರವಸೆಗಳಿಗೆ ಮಾರುಹೋಗದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅನೂಪ್‌ಶೆಟ್ಟಿ ಅವರು ಮನವಿ ಮಾಡಿದ್ದಾರೆ.
ಕೊಪ್ಪಳ ಜಿಲ್ಲಾ ಪೊಲೀಸ್ ಘಟಕದಲ್ಲಿ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಯ ಆಯ್ಕೆಗೆ ಲಿಖಿತ ಪರೀಕ್ಷೆ ಡಿ. ೦೩ ರಂದು ಮಧ್ಯಾಹ್ನ ೦೩ ಗಂಟೆಯಿಂದ ೪-೩೦ ರವರೆಗೆ ಗಂಗಾವತಿಯ ಒಟ್ಟು ೨೩ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಪೊಲೀಸ್ ನೇಮಕಾತಿಯು ಪಾರದರ್ಶಕ, ಗಣಕೀಕೃತ, ಸಂಪೂರ್ಣ ವಸ್ತುನಿಷ್ಠ, ಅರ್ಹತೆ ಮತ್ತು ಮೀಸಲಾತಿ ಆಧಾರದ ಮೇಲೆ ನಡೆಯುತ್ತದೆ. ಯಾವುದೇ ಅಭ್ಯರ್ಥಿಯು ಇಲಾಖೆಯ ಹೊರಗಾಗಲಿ ಅಥವಾ ಒಳಗಾಗಲಿ ಉದ್ಯೋಗ ಪಡೆಯುವ ಸಲುವಾಗಿ ಯಾವುದೇ ವ್ಯಕ್ತಿಗೆ ಹಣ ನೀಡುವುದು ಅಥವಾ ಯಾವುದೇ ವಿಧವಾದ ಪಾರಿತೋಷಕ ನೀಡುವುದು ಮಾಡಬಾರದು. ಯಾವುದೇ ವಿಧವಾದ ಹಣ ವಸೂಲಾತಿಗೆ ಯಾರಿಗೂ ಅಧಿಕಾರ ನೀಡಿರುವುದಿಲ್ಲ. ಈ ದಿಸೆಯಲ್ಲಿ ಪರೀಕ್ಷಾರ್ಥಿಗಳು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಹಾಗೂ ಮಧ್ಯವರ್ತಿಗಳ ಭರವಸೆಗಳಿಗೆ ಮಾರುಹೋಗದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅನೂಪ್‌ಶೆಟ್ಟಿ ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

Related posts