ಡಿ. ೧೫ ರಂದು ಕೊಪ್ಪಳದಲ್ಲಿ ಉದ್ಯೋಗಕ್ಕಾಗಿ ಸಂದರ್ಶನ


ಕೊಪ್ಪಳ ಡಿ.೧೧  : ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಉದ್ಯೋಗಕ್ಕಾಗಿ ಸಂದರ್ಶನವನ್ನು ಡಿ. ೧೫ ರಂದು ಬೆಳಿಗ್ಗೆ ೧೦-೩೦ ರಿಂದ ೨-೩೦ ರವರೆಗೆ ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿನ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ.
ಈ ಸಂದರ್ಶನದಲ್ಲಿ ಮಧುರ ಮೈಕ್ರೋ ಫೈನಾನ್ಸ್ ಪ್ರೈವೇಟ್. ಲಿ. ಮುನಿರಾಬಾದ ಇವರಿಂದ “ವಾಕ್-ಇನ್-ಇಂಟರವ್ಯೂ ಆಯೋಜಿಸಲಾಗಿದ್ದು, ಭಾಗವಹಿಸಲು ಉಚಿತ ಪ್ರವೇಶವಿರುತ್ತದೆ. ಅಭ್ಯರ್ಥಿಗಳ ವಿದ್ಯಾರ್ಹತೆ ಯಾವುದೇ ಪದವಿ ಜೊತೆಗೆ ಡ್ರೈವಿಂಗ್ ಲೈಸನ್ಸ್ ಹೊಂದಿರುವ ಅಭ್ಯರ್ಥಿಗಳಿಗೆ ವಾಕ್-ಇನ್-ಇಂಟರವ್ಯೂ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಸಂದರ್ಶನದಲ್ಲಿ ಭಾಗವಹಿಸಲಿಚ್ಛಿಸುವ ಅಭ್ಯರ್ಥಿಗಳು ೧೮ ರಿಂದ ೨೮ ವರ್ಷದೊಳಗಿನ ಯುವಕರಾಗಿರಬೇಕು. ಅರ್ಹ ವಿದ್ಯಾರ್ಹತೆ ಹೊಂದಿದ ನಿರುದ್ಯೋಗಿ ಅಭ್ಯರ್ಥಿಗಳು ತಮ್ಮ ವಿಧ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು ಮತ್ತು ಕಡ್ಡಾಯವಾಗಿ ಆಧಾರ ಕಾರ್ಡಿನ ಪ್ರತಿ, ಬಯೋಡಾಟಾ (ರೆಸುಮ್) ಹಾಗೂ ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ವಾಕ್-ಇನ್-ಇಂಟರವ್ಯೂನಲ್ಲಿ ಭಾಗವಹಿಸಿ, ಉದ್ಯೋಗದ ನೇರವನ್ನು ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಪ್ಪಳ ದೂರವಾಣಿ ಸಂಖ್ಯೆ ೦೮೫೩೯-೨೨೦೮೫೯, ೯೮೮೦೯೧೦೯೭೭ ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಕೊಪ್ಪಳ ಜಿಲ್ಲಾ ಉದ್ಯೋಗಾಧಿಕಾರಿ   ತಿಳಿಸಿದ್ದಾರೆ.

Please follow and like us:
error