ಡಿ. ೨೮ ರಂದು ಕೊಪ್ಪಳ ಜಿ.ಪಂ. ಅಧ್ಯಕ್ಷ/ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ

ಕೊಪ್ಪಳ ಡಿ.೧೪ :  ಕೊಪ್ಪಳ ಜಿಲ್ಲಾ ಪಂಚಾಯತ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆಯನ್ನು ಡಿ. ೨೮ ರಂದು ಜಿ.ಪಂ. ಸಭಾಂಗಣದಲ್ಲಿ ಜರುಗಲಿದೆ.
ಕೊಪ್ಪಳ ಜಿಲ್ಲಾ ಪಂಚಾಯತ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆಯನ್ನು ಹಮ್ಮಿಕೊಳ್ಳಬೇಕಾಗಿದ್ದು, ಜಿ.ಪಂ. ಅಧ್ಯಕ್ಷರ ಸ್ಥಾನವನ್ನು ಸಾಮಾನ್ಯ ವರ್ಗಕ್ಕೆ ಮತ್ತು ಉಪಾಧ್ಯಕ್ಷರ ಸ್ಥಾನವನ್ನು ಹಿಂದುಳಿದ “ಅ” ವರ್ಗ (ಮಹಿಳೆ)ಕ್ಕೆ ಮೀಸಲಿರಿಸಿದೆ. ಪ್ರಾದೇಶಿಕ ಆಯುಕ್ತರು, ಕಲಬುರಗಿ ವಿಭಾಗ, ಕಲಬುರಗಿ ಅವರ ನಿರ್ದೆಶನದಂತೆ ಕೊಪ್ಪಳ ಜಿ.ಪಂ. ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆಯನ್ನು ಡಿ. ೨೮ ರಂದು ಅಪರಾಹ್ನ ೦೩ ಗಂಟೆಗೆ ಜಿ.ಪಂ. ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ ಅವರು ತಿಳಿಸಿದ್ದಾರೆ.

Please follow and like us:
error

Related posts