ಡಿ. 05 ರಂದು ಮಂಗಳೂರು ಗ್ರಾಮದ ವಿದ್ಯುತ್ ಉಪ ಕೇಂದ್ರದ ಲೋಕಾರ್ಪಣೆ

ಕೊಪ್ಪಳ ಡಿ.  : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ವತಿಯಿಂದ ಕೊಪ್ಪಳ ಜಿಲ್ಲೆಯ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಮಂಗಳೂರು ಗ್ರಾಮದಲ್ಲಿ 110/11 ಕೆ.ವಿ ವಿದ್ಯುತ್ ಉಪ ಕೇಂದ್ರದ ಲೋಕಾರ್ಪಣೆ ಸಮಾರಂಭವನ್ನು ಡಿಸೆಂಬರ್. 05 ರಂದು ಬೆಳಿಗ್ಗೆ 11-30 ಗಂಟೆಗೆ ಆಯೋಜಿಸಲಾಗಿದೆ. ಕರ್ನಾಟಕ ಸರ್ಕಾರದ ಮುಖ್ಯ ಮಂತ್ರಿಗಳು ಹಾಗೂ ಇಂಧನ ಸಚಿವರಾದ ಬಿ.ಎಸ್. ಯಡಿಯೂರಪ್ಪ ಅವರು 110/11 ಕೆ.ವಿ. ವಿದ್ಯುತ್ ಉಪ ಕೇಂದ್ರದ ಲೋಕಾರ್ಪಣೆ ಸಮಾರಂಭದ ಉದ್ಘಾಟನೆ ನೆರವೇರಿಸುವರು.

ಉಪ ಮುಖ್ಯ ಮಂತ್ರಿಗಳು, ಸಾರಿಗೆ ಮತ್ತು ಕೃಷಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷö್ಮಣ ಸಂಗಪ್ಪ ಸವದಿ ಅವರು ಘನ ಉಪಸ್ಥಿತರಿರುವರು. ಯಲಬುರ್ಗಾ ಶಾಸಕ ಹಾಲಪ್ಪ ಬಸಪ್ಪ ಆಚಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಹೆಚ್. ವಿಶ್ವನಾಥ ರೆಡ್ಡಿ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಅಮರೇಗೌಡ ಪಾಟೀಲ್ ಬಯ್ಯಾಪುರ, ಕೆ. ರಾಘವೇಂದ್ರ ಹಿಟ್ನಾಳ, ಪರಣ್ಣ ಈಶ್ವರಪ್ಪ ಮುನವಳ್ಳಿ ಹಾಗೂ ಬಸವರಾಜ ದಢೇಸೂಗೂರು, ವಿಧಾನ ಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ್ ಇಟಗಿ, ಶರಣಪ್ಪ ಮಟ್ಟೂರು ಹಾಗೂ ಚಂದ್ರಶೇಖರ್ ಬಿ. ಪಾಟೀಲ್, ಜಿ.ಪಂ. ಉಪಾಧ್ಯಕ್ಷೆ ರತ್ನವ್ವ ಭರಮಪ್ಪ ನಗರ, ಸದಸ್ಯೆ ಪ್ರೇಮಾ ಈರಪ್ಪ ಕುಡಗುಂಟಿ, ಯಲಬುರ್ಗಾ ತಾ.ಪಂ. ಅಧ್ಯಕ್ಷೆ ಲಕ್ಷಿö್ಮÃ ದ್ಯಾಮಪ್ಪ ಗೌಡರ್, ಉಪಾಧ್ಯಕ್ಷ ವಿಶ್ವನಾಥ ಮಂಗಳೇಶಪ್ಪ ಮರಿಬಸಪ್ಪನವರ್, ಎಪಿಎಂಸಿ ಅಧ್ಯಕ್ಷ ಬಸವರಾಜ ಗಡಾದ, ಸದಸ್ಯ ಈರಪ್ಪ ಬಸಪ್ಪ ಹಳ್ಳಿಕೇರಿ, ಮಂಗಳೂರು ಗ್ರಾ.ಪಂ. ಅಧ್ಯಕ್ಷೆ ಶೋಭಾ ಎಸ್. ನಿಂಗಾಪುರ, ಉಪಾಧ್ಯಕ್ಷೆ ಲಕ್ಷö್ಮವ್ವ ಎಂ. ಅಳವಂಡಿ ಪಾಲ್ಗೊಳ್ಳುವರು. ವಿಶೇಷ ಆಹ್ವಾನಿತರಾಗಿ ರಾಜ್ಯ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಎನ್., ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಸಂಗೀತಾ ಭಾಗವಹಿಸುವರು .

Please follow and like us:
error