ಡೊನೇಷನ್ ಹಾವಳಿ ತಡೆಗಟ್ಟಲು ಜಿಲ್ಲಾಧಿಕಾರಿಗಳಿಗೆ ಎಸ್,ಎಫ್.ಐ ಆಗ್ರಹ.

ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರ’ ಸಭೆ ಸೇರಿ, ಡೊನೇಷನ್ ಹಾವಳಿ ತಡೆಗಟ್ಟಲು  ಜಿಲ್ಲಾಧಿಕಾರಿಗಳಿಗೆ ಎಸ್,ಎಫ್.ಐ ಆಗ್ರಹ.

೨೦೧೮-೧೯ ನೇ ಸಾಲಿನಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿನ ಪ್ರವೇಶಾತಿಯ ದಿನಾಂಕವನ್ನು ರಾಜ್ಯ ಸರಕಾರ ನಿಗದಿ ಪಡಿಸುವ ಮೊದಲೆ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪ್ರಕ್ರಿಯೆಗಳು ಮುಗಿಸಿದ್ದಾರೆ. ಖಾಸಗಿ ಶಿಕ್ಷಣ ಸಂಸ್ಥೆಗಳು ಸರಕಾರದ ನೀತಿ-ನಿಯಮಗಳನ್ನು ಮೀರಿ ಡೊನೇಷನ್ ವಸೂಲಿಯಲ್ಲಿ ತೊಡಗಿವೆ. ಸೀಟುಗಳ ಲಭ್ಯತೆ, ಸಂಗ್ರಹಿಸಬೇಕಾದ ಶುಲ್ಕ, ಪಾಲಿಸಬೇಕಾದ ಮೀಸಲಾತಿ, ನಿಯಮಗಳ ಕುರಿತು ಶಿಕ್ಷಣ ಇಲಾಖೆ ಅನೇಕ ಸುತ್ತೋಲೆ ಹೊರಡಿಸಿದರೂ ಖಾಸಗಿ ಶಾಲೆಗಳು ಎಗ್ಗಿಲ್ಲದೆ ವಸೂಲಿಯಲ್ಲಿ ತೊಡಗುವ ಮೂಲಕ ನಿಯಮಗಳನ್ನು ಉಲ್ಲಂಘಿಸಿ ಸರಕಾರದ ಆದೇಶಗಳಿಗೆ ಬೆಲೆ ನೀಡದೆ ಸರ್ವಾಧಿಕಾರಿ ಧೊರಣೆ ಅನುಸರಿಸಿವೆ. ಕಾಳ ಸಂತೆಯಲ್ಲಿ ಶಿಕ್ಷಣ ಮಾರಾಟವಾಗುತ್ತಿದ್ದರೂ ಅದನ್ನು ನಿಯಂತ್ರಿಸಬೇಕಾದ ಜಿಲ್ಲಾಧಿಕಾರಿಗಳು ಡಿ.ಡಿ.ಪಿ.ಐ ಮತ್ತು ಕೇತ್ರಶಿಕ್ಷಣಾಧಿಕಾರಿಗಳ ನಿರ್ಲಕ್ಷ್ಯವನ್ನು ಎಸ್,ಎಫ್,ಐ ತೀವ್ರವಾಗಿ ಖಂಡಿಸುತ್ತದೆ.
ಜಿಲ್ಲೆಯಾದ್ಯಂತ ನಾಯಿ ಕೊಡೆಗಳಂತೆ ಖಾಸಗಿ ಶಾಲೆಗಳು ತಲೆ ಎತ್ತುತ್ತಿವೆ. ಒಂದೆಡೆ ರಾಜ್ಯದಲ್ಲಿ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳು ಮುಚ್ಚುತ್ತಿವೆ. ಜಿಲ್ಲೆಯಲ್ಲಿ ಈಗಾಗಲೇ ಖಾಸಗಿ ಶಾಲೆಗಳಲ್ಲಿ ದಾಖಲಾತಿ ಹೆಸರಲ್ಲಿ ಡೋನೆಷನ್ ಮನಬಂದತೆ ಪ್ರಾರಂಭವಾಗಿದೆ. ಬಡ ಹಿಂದುಳಿದ ದಲಿತ ಅಲ್ಪಸಂಖ್ಯಾತರ ಮಕ್ಕಳು ಖಾಸಗಿ ಶಾಲೆಗಳಲ್ಲಿ ಡೋನೆಷನ್ ಪಿಡುಗಿನಿಂದ ಶಾಲೆಗಳಲ್ಲಿ ಓದುವುದು ತುಂಬಾ ದುರದರಷ್ಟಕರವಾಗಿದೆ. ಶಿಕ್ಷಣ ಹಕ್ಕು ಕಾಯ್ದೆ ೧೯೮೩ ಮತ್ತು ೨೦೦೯ರ ಆರ್.ಟಿಇ ಕಾಯ್ದೆ ಜಾರಿಯಾದರೂ ಜಿಲ್ಲೆಯಲ್ಲಿ ಸಮರ್ಪಕವಾಗಿ ಪಾಲನೆಯಾಗುತ್ತಿಲ್ಲ. ಆರ್.ಟಿ.ಇ ಸೀಟು ಮಧ್ಯವರ್ತಿಗಳ ಪಾಲಾಗುತ್ತಿವೆ. ಜಿಲ್ಲೆಯ ಬಹುತೇಕ ಖಾಸಗಿ ಶಾಲೆಗಳಲ್ಲಿ ೩೦ ರಿಂದ ೧ ಲಕ್ಷ ರೂ ವರೆಗೂವಸೂಲಿ ಮಾಡುವುದರ ಮೂಲಕ ಹಗಲು ದರೋಡೆ ಮಾಡುತ್ತಿದ್ದಾರೆ. ಹಾಗೂ ಅಕ್ರಮವಾಗಿ ಟ್ಯುಷನ್,ಟ್ಯೂಟರಿಯಲ್ಸ್, ಅನದೀಕೃತವಾಗಿ ICSC,CBSC,JEE,NET,CET, ಹೆಸರಿನಲ್ಲಿ ಶಾಲಾ ಕಾಲೇಜುಗಳು ನಡೆಯುತ್ತೀವೆ ಇತ್ಯಾದಿ ಹೆಸರುಗಳಲ್ಲಿ ಶಿಕ್ಷಣವನ್ನು ವ್ಯಾಪಾರೀಕರಣ ಮಾಡಿ ಸರಕಾರದ ನಿಯಮಗಳನ್ನು ಉಲ್ಲಂಘನೆ ಮಾಡಿ ಹಗಲೂ ದರೋಡೆ ಮಾಡುತ್ತಿದ್ದರು ಸಂಬಂಧಿಸಿದ ಅಧಿಕಾರಿಗಳುಮೌನ ವಹಿಸಿರುವುದೇಕೆ?.
ಸರಕಾರ ನಿಯಮಗಳ ಪ್ರಕಾರ ಸರ್ಕಾರ ನಿಗದಿಪಡಿಸಿದಂತೆ ಅನುದಾನಿತ ಶಿಕ್ಷಣ ಸಂಸ್ಥೆಗಳು ೫೦೦ ರೂ. ಅನುದಾನರಹಿತ ಶಿಕ್ಷಣ ಸಂಸ್ಥೆಗಳು ರೂ.೬೦೦ ಗಳನ್ನು ಮಾತ್ರ ಅಭಿವೃದ್ಧಿ ಶುಲ್ಕ (ಡೆವಲಪ್‌ಮೆಂಟ್ ಫೀ)ನ್ನು ಸಂಗ್ರಹಿಸಲು ಅವಕಾಶವಿದೆ. ಈ ಹಣವನ್ನು ಒತ್ತಾಯದ ಮೂಲಕ ಸಂಗ್ರಹಿಸುವಂತಿಲ್ಲ. ಇದಕ್ಕೂ ಹೆಚ್ಚು ಸಂಗ್ರಹಿಸುವುದು ಕಾನೂನಿನ ಪ್ರಕಾರ ಅಪರಾಧ. ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರಾರಂಭಿಕ ತರಗತಿಗೆ ಪ್ರವೇಶ ಪರೀಕ್ಷೆಗಳನ್ನು ನಡೆಸಬಾರದು ಎಂದು ಶಿಕ್ಷಣ ಹಕ್ಕು ಕಾಯ್ದೆ ೨೦೦೯ ರ ಸೆಕ್ಷನ್ ೧೩(೨)(ಬಿ) ಹೇಳುತ್ತದೆ. ಪ್ರವೇಶ ಪರೀಕ್ಷೆ ನಡೆಸುವ ಶಾಲೆಗಳಿಗೆ ೨೫ ಸಾವಿರ ರೂ ದಂಡ ಹಾಕಬೇಕೆಂದು ಹೇಳಿದೆ. ವಿದ್ಯಾರ್ಥಿಗಳ ಸಂಖ್ಯೆ, ಕಲಿಕಾ ಮಾಧ್ಯಮ, ಶುಲ್ಕದ ವಿವರ, ಕ್ರೀಡಾಂಗಣ, ಶೌಚಾಲಯ, ಶಿಕ್ಷಕರ ಸಂಖ್ಯೆ, ಮುಂತಾದ ಮಾಹಿತಿಯನ್ನು ಶಾಲಾ ಆವರಣದಲ್ಲಿ ೧೦*೬ ಸೈಜಿನಲ್ಲಿ ಫೆಕ್ಸ್ ಪ್ರಕಟಿಸಬೇಕೆಂದು ಹಾಗೂ ಇದೇ ಮಾಹಿತಿಯನ್ನು ಇಲಾಖೆಯ ವೆಬ್ ಸೈಟ್‌ನಲ್ಲಿ ಪ್ರಕಟಿಸಬೇಕೆಂದು ಶಿಕ್ಷಣ ಇಲಾಖೆ ಆದೇಶಿಸಿದೆ ಆದರೆ ಇದನ್ನು ಖಾಸಗಿ ಶಿಕ್ಷಣ ಸಂಸ್ಥೆಗಳು ಜಾರಿ ಮಾಡಿಲ್ಲ. ಸರ್ಕಾರದ ಸುತ್ತೋಲೆಯಲ್ಲಿ ಡಿ,ಡಿ.ಪಿ ಐ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಇದನ್ನು ಪರೀಶಿಲಿಸಬೇಕೆಂದು ಹೇಳಿದ್ದರೂ ಇಲಾಖಾ ಅಧಿಕಾರಿಗಳು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಮಣಿದು ಸರಿಯಾಗಿ ಪರೀಶಿಲ ಮಾಡಿರುವುದಿಲ್ಲ ಇದರಿಂದಾಗಿ ಶಾಲೆಗಳಲ್ಲಿ ಪ್ರವೇಶ ಪರೀಕ್ಷೆ ನಡೆಸುವುದರ ಜೊತೆಗೆ ನೋಟ್ ಬುಕ್, ಶಾಲಾ ಬ್ಯಾಗ್, ಬೂಟು, ಬಟ್ಟೆ, ಜಾಮಿಟ್ರಿ ಬಾಕ್ಸ್ ಕಡ್ದಾಯವಾಗಿ ಆಯಾ ಶಾಲೆಗಳಲ್ಲಿ ತೆಗೆದುಕೊಳ್ಳಬೇಕೆಂದು ಪಾಲಕರಿಗೆ ಹೇಳಿ ಹೆಚ್ಚಿನ ದರದಲ್ಲಿ ಕೊಟ್ಟು ಶಾಲೆಗಳನ್ನು ಅಂಗಡಿಯಾಗಿ ಮಾರ್ಪಟ್ಟು ಮಾಡಿದ ಶಾಲೆಗಳ ವಿರುದ್ದ ಮಾನ್ಯತೆಯನ್ನು ರದ್ದುಮಾಡಿ ಮತ್ತು ಜಿಲ್ಲೆಯ ಬಹುತೇಕ ಶಾಲೆಗಳು ಆಯುಕ್ತರ ಆದೇಶವನ್ನು ಉಲ್ಲಂಘಿಸಿದ್ದು, ಅಂತಹ ಶಾಲೆಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಅನಧಿಕೃತ ಟ್ಯೂಶನ್ ಸೆಂಟರ್‌ಗಳನ್ನು ಮುಚ್ಚತಕ್ಕದ್ದು ಮತ್ತು ಈ ಕೂಡಲೇ ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರ ಸಭೆ ಸೇರಲು ಎಸ್.ಎಫ್.ಐ ಜಿಲ್ಲಾ ಸಮಿತಿಯು  ಒತ್ತಾಯಿಸುತ್ತದೆ.