ಕೊಪ್ಪಳ, : ತುಂಗಭದ್ರಾ ಜಲಾಶಯದ ಎಡದಂಡೆ ಕಾಲುವೆಯ ಅಕ್ರಮ ನೀರು ಬಳಕೆಗೆ ಕಡಿವಾಣ ಹಾಕಿ ಎಂದು ಜಿಲ್ಲಾಧಿಕಾರಿ ಸುರಳ್ಕರ್ ವಿಕಾಶ್ ಕಿಶೋರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತುಂಗಭದ್ರ ಜಲಾಶಯದ ಎಡದಂಡೆ ಕಾಲುವೆ ಅಕ್ರಮ ನೀರು ಬಳಕೆ ಕುರಿತು ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಶುಕ್ರವಾರದಂದು ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪೈಪ್ಲೈನ್ ಹಾಕಿ ಅಕ್ರಮ ನೀರು ಬಳಕೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದರ ಜೊತೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಬೇಕು. ನೀರಾವರಿ ಇಲಾಖೆಯ ಸಿಬ್ಬಂದಿಗಳು ಅಕ್ರವಾಗಿ ನೀರನ್ನು ಉಪಯೋಗಿಸುವವರ ವಿವರವನ್ನು ಕಲೆ ಹಾಕಿ. ಮೊದಲ ಮಾಹಿತಿಯನ್ನು ನೀಡಿ ಮತ್ತು ಇಲಾಖೆ ಅಧಿಕಾರಿಗಳು ಗ್ರಾ.ಪಂ. ಹಂತದಲ್ಲಿ ತಂಡ ರಚಿಸಿಕೊಂಡು ಕಾರ್ಯ ನಿರ್ವಹಿಸಬೇಕು. ಕೃಷಿ ಇಲಾಖೆ, ಕಂದಾಯ ಇಲಾಖೆ, ಜೆಸ್ಕಾಂ ಇಲಾಖೆ, ಪೊಲೀಸ್ ಇಲಾಖೆ ನಾಲ್ಕು ಇಲಾಖೆಯವರು ಕೂಡಿ ಅಕ್ರಮ ನೀರು ಬಳಕೆಗೆ ಕಡಿವಾಣ ಹಾಕುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.
ಸAಬAಧಿಸಿದ ತಾಲ್ಲೂಕುಗಳ ತಹಶೀಲ್ದಾರರು ಮತ್ತು ನೀರಾವರಿ ಇಲಾಖೆ ಅಧಿಕಾರಿಗಳು ಇನ್ನೂ 10 ದಿನಗಳಲ್ಲಿ ಸರ್ವೆ ಕಾರ್ಯ ಮುಗಿಸುವಂತೆ ಸೂಕ್ತ ಕ್ರಮ ವಹಿಸಬೇಕು. ಅಲ್ಲದೇ ಅಕ್ರಮವಾಗಿ ನೀರು ಬಳಕೆ ಮಾಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಈ ನಿಟ್ಟಿ
ನಲ್ಲಿ ಪೊಲೀಸ್ ಇಲಾಖೆ ಸಹಾಯ ಪಡೆದುಕೊಳ್ಳಬೇಕು. ಹಾಗೂ ಕೃಷಿ ಇಲಾಖೆಯವರು ಬ್ಯಾನರ್, ಪ್ಲೇಕ್ಸ್ ಹಾಗೂ ರೇಡಿಯೋ ಮುಖಾಂತರ ರೈತರಿಗೆ ಜಾಗೃತಿ ಮೂಡಿಸಬೇಕು ಎಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ಮೂರ್ತಿ ಮಾತನಾಡಿ, ತಾಲ್ಲೂಕ ಮಟ್ಟದಲ್ಲಿ ಟಾಸ್ಕ್ಫೋರ್ಸ್ ಸಮಿತಿ ರಚಿಸಿ ಅಕ್ರಮ ನೀರು ಬಳಕೆ ಮಾಡಿದವರಿಗೆ ಮೊದಲು ನೋಟಿಸ್ ನೀಡಿ, ನೋಟಿಸ್ಗೆ ಸಹಕರಿಸದಿದ್ದಲ್ಲಿ ಮೂರು ದಿನಗಳ ನಂತರ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಪಿ ಮಾರುತಿ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಜಿ. ಸಂಗೀತಾ, ಜಂಟಿ ಕೃಷಿ ನಿರ್ದೇಶಕಿ ಶಬಾನಾ ಶೇಖ್ ನೀರಾವರಿ ಇಲಾಖೆ, ಕಂದಾಯ ಇಲಾಖೆ, ಜೆಸ್ಕಾಂ ಇಲಾಖೆ ಹಾಗೂ ಸಂಬAಧಪಟ್ಟ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.