ತೆರಿಗೆ ಸಂಗ್ರಹಣೆಯಲ್ಲಿ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಮುಂದಿರಿ : ಪಿ. ಸುನೀಲ್ ಕುಮಾರ್

ಕೊಪ್ಪಳ ಡಿ.  ಆಸ್ತಿ ತೆರಿಗೆ, ನೀರಿನ ಶುಲ್ಕ ಹಾಗೂ ಇತ್ಯಾದಿ ತೆರಿಗೆ ಸಂಗ್ರಹಣೆಯಲ್ಲಿ ಕೊಪ್ಪಳ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಮುಂದಿರಬೇಕು ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ಸಂಬಂಧಿಸಿದ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೊಪ್ಪಳ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ತೆರಿಗೆ ವಸೂಲಾತಿ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರದಂದು ಆಯೋಜಿಸಲಾದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಕೊಪ್ಪಳ ಜಿಲ್ಲೆಯಲ್ಲಿರು ವಿವಿಧ ನಗರ ಸ್ಥಳೀಯ ಸಂಸ್ಥೆಗಳಡಿ ನಡೆಯುವ ಆಸ್ತಿ ತೆರಿಗೆ, ನೀರಿನ ತೆರಿಗೆ, ಉದ್ದಿಮೆ ಪರವಾನಿಗೆ ಹಾಗೂ ವಾಣಿಜ್ಯ ಸಂಕೀರ್ಣಗಳ ಬಾಡಿಗೆ, ಇವುಗಳ ಮೂಲಕ ಬರುವ ತೆರಿಗೆ ವಸೂಲಾತಿ ಪ್ರಕ್ರೀಯೆಯು ತ್ವರಿತಗತಿಯಲ್ಲಿ ನಡೆಯುತ್ತಿಲ್ಲ. ಆದ್ದರಿಂದ ಜಿಲ್ಲಾ ನಗರಾಭಿವೃದ್ಧಿ ಇಲಾಖೆ ಯೋಜನಾ ನಿರ್ದೇಶಕರು ಈ ಕುರಿತು ಪರಿಶೀಲಿಸಬೇಕು. ತೆರಿಗೆ ವಸೂಲಾತಿಯು ಸರಿಯಾದ ರೀತಿಯಲ್ಲಿ ಆಗಬೇಕು. ಅಂದಾಗ ಮಾತ್ರ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅನುಕೂಲವಾಗುತ್ತದೆ. ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಅಧಿನದಲ್ಲಿರುವ ವಾಣಿಜ್ಯ ಕಟ್ಟಡಗಳ ಬಾಡಿಗೆ ಯಾವ ರೀತಿಯಲ್ಲಿ ನೀಡಲಾಗುತ್ತಿದೆಯೇ. ಬಾಡಿಗೆ ವೆಚ್ಚವನ್ನು ನಿಯಮಾನುಸಾರ ಪಡೆಯಬೇಕು. ಹೊಸ ಅಂಶಕಳನ್ವಯ ಬಾಡಿಗೆಯನ್ನು ನೀಡಿ. ಹೊಸ ವಾಣಿಜ್ಯ ಕಟ್ಟಡಗಳನ್ನು ನಿರ್ಮಾಣವಾದಲ್ಲಿ ಒಟ್ಟು ಮಳಿಗೆಗಳಲ್ಲಿ ಅಂಗವಿಕಲರಿಗೆ ಒಂದು ಮತ್ತು ಕೆಲ ಮಳಿಗೆಗಳನ್ನು ಎಸ್.ಸಿ./ ಎಸ್.ಟಿ ಉದ್ದಿಮೆದಾರರಿಗೂ ಮೀಸಲಿಡಬೇಕು. ತೆರಿಗೆ ಪಾವತಿಸದೇ ಇರುವ ತೆರಿಗೆದಾರರ ಕಳುವಾರು ಪಟ್ಟಿಯನ್ನು ತಯಾರಿಸಿ, ಕರ ಪತ್ರಗಳ ವಿತರಣೆ ಹಾಗೂ ತಮಟೆ ಚಳುವಳಿಯ ಮೂಲಕ ವಸೂಲಾತಿ ಆಂದೋಲನವನ್ನು ಪ್ರಾರಂಭಿಸಬೇಕು. ತೆರಿಗೆ ಪಾವತಿಸದೇ ಇರುವವರಿಗೆ ನಗರ ಸ್ಥಳೀಯ ಸಂಸ್ಥೆಗಳಿಂದ ನೀಡುವ ವಿವಿಧ ಸೌಲಭ್ಯಗಳನ್ನು ಕಡಿತಗೊಳಸಲಾಗುವುದು ಎಂದು ಈ ಬಗ್ಗೆ ಸಾರ್ವಜನಿಕರಿಗೆ ಹಾಗೂ ತೆರಿಗೆದಾರರಿಗೆ ಮಾಹಿತಿ ಕೊಡಬೇಕು. ಒಂದು ವೇಳೆ ತೆರಿಗೆ ಪಾವತಿಸಲು ವಿಫಲವಾದ ತೆರೆಗೆದಾರರಿಗೆ ನಿಯಮಾನುಸಾರ ಜಪ್ತಿ ವಾರಂಟ್ ಮೂಲಕ ವಸೂಲಾತಿಯನ್ನು ಮಾಡಬೇಕು. ಅಲ್ಲದೇ ಪ್ಲಾಸ್ಟಿಕ್ ನಿಷೇಧ ಕುರಿತು ಜನರಿಗೆ ಮೊದಲು ಮನವರಿಕೆ ಮಾಡಬೇಕು. ಅನೇಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಕಸ ವಿಲೇವಾರಿ ವಾಹನಗಳ ಮೂಲಕ ಜಾಗೃತಿ ಮೂಡಿಸಬೇಕು. ನಂತರ ಕಾನೂನು ರೀತಿಯಲ್ಲಿ ನೋಟಿಸ್ ನೀಡಿ, ಆಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ಸಂಬಂಧಿಸಿದ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿ ಸೂಚನೆ ನೀಡಿದರು.
ಸಭೆಯಲ್ಲಿ ಪ್ರೋಬೆಷನರಿ ಐಎಎಸ್ ಅಧಿಕಾರಿ ಅಕ್ಷಯ್ ಶ್ರೀಧರ, ಜಿಲ್ಲಾ ನಗರಾಭಿವೃದ್ಧಿ ಇಲಾಖೆ ಯೋಜನಾ ನಿರ್ದೇಶಕರಾದ ವಿಜಯಕುಮಾರ ಮೆಕ್ಕಳಕಿ ಸೇರಿದಂತೆ ಕೊಪ್ಪಳ ಹಾಗೂ ಗಂಗಾವತಿ ನಗರಸಭೆ, ಪೌರಾಯುಕ್ತರು, ಕುಷ್ಟಗಿ ಹಾಗೂ ಕಾರಟಗಿ ಪುರಸಭೆ, ಯಲಬುರ್ಗಾ, ಕುಕನೂರ, ಕನಕಗಿರಿ, ತಾವರಗೇರ, ಭಾಗ್ಯನಗರ ಪಟ್ಟಣ ಪಂಚಾಯತಗಳ ಮುಖ್ಯಾಧಿಕಾರಿಗಳು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

Please follow and like us:
error