ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ : ಮತ ಎಣಿಕಾ ಕೇಂದ್ರಗಳ ಸ್ಥಾಪನೆ

Koppal News ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ ನಿಮಿತ್ಯ ಜಿಲ್ಲೆಯ ಕೊಪ್ಪಳ ಹಾಗೂ ಗಂಗಾವತಿ ನಗರಸಭೆ, ಕುಷ್ಟಗಿ ಪುರಸಭೆ ಮತ್ತು ಯಲಬುರ್ಗಾ ಪಟ್ಟಣ ಪಂಚಾಯತ್ ಸೇರಿ ನಾಲ್ಕು ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಮತ ಎಣಿಕಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.
ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಾದ ಕೊಪ್ಪಳ ನಗರಸಭೆ ವ್ಯಾಪ್ತಿಯ ಮತ ಎಣಿಕಾ ಕೇಂದ್ರವವನ್ನು ಕೊಪ್ಪಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಿಂಭಾಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ಥಾಪಿಸಲಾಗಿದೆ. ಗಂಗಾವತಿ ನಗರಸಭೆಯ ಮತ ಎಣಿಕಾ ಕೇಂದ್ರ – ಬಾಲಕರ ಸರಕಾರಿ ಪದವಿ ಪೂರ್ವ ಕಾಲೇಜು ವಿಭಾಗ ಗಂಗಾವತಿ. ಕುಷ್ಟಗಿ ಪುರಸಭೆ ಮತ ಎಣಿಕಾ ಕೇಂದ್ರ – ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕುಷ್ಟಗಿ. ಯಲಬುರ್ಗಾ ಪಟ್ಟಣ ಪಂಚಾಯತಿಯ ಮತ ಎಣಿಕಾ ಕೇಂದ್ರವನ್ನು ತಹಶೀಲ್ದಾರ ಕಾರ್ಯಾಲಯ ಯಲಬುರ್ಗಾದಲ್ಲಿ ಸ್ಥಾಪಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾ ಚುನಾವಣಾ ವಿಭಾಗದ ಪ್ರಟಣೆ ತಿಳಿಸಿದೆ.

Please follow and like us:
error