You are here
Home > Koppal News > ನಟ ಹಾಗೂ ನಿರ್ದೇಶಕ ಕಾಶೀನಾಥ್ ಇನ್ನಿಲ್ಲ…

ನಟ ಹಾಗೂ ನಿರ್ದೇಶಕ ಕಾಶೀನಾಥ್ ಇನ್ನಿಲ್ಲ…

ಬೆಂಗಳೂರು: ಚಂದನವನದ ಹಿರಿಯ ನಟ ಹಾಗೂ ನಿರ್ದೇಶಕ ಕಾಶೀನಾಥ್ ನಗರದ ಖಾಸಾಗಿ ಆಸ್ಪತ್ರೆಯಲ್ಲಿ ಗುರುವಾರ ಬೆಳಗ್ಗೆ ವಿಧಿವಶರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಎರಡು ದಿನಗಳಿಂದ ನಗರದ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಕಾಶೀನಾಥ್ ಅವರು ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ ಹಾಗೂ ನಿರ್ದೇಶಕ. ಇವರು ಕುಂದಾಪುರ ಸಮೀಪದ ಕೋಟೇಶ್ವರದ ಮಧ್ಯಮ ವರ್ಗದ ಕುಟುಂಬದಲ್ಲಿ ಜನಿಸಿದರು.

ಇವರು ಉಪೇಂದ್ರ, ಮನೋಹರ್, ಸುನೀಲ್‍ಕುಮಾರ್ ದೇಸಾಯಿ ಮುಂತಾದ ಹೆಸರಾಂತ ನಿರ್ದೇಶಕರನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದರು.

ನಟನೆ, ನಿರ್ದೇಶನ, ಸಂಗೀತ ನಿರ್ದೇಶನ ಹಾಗೂ ಚಿತ್ರ ನಿರ್ಮಾಣದಲ್ಲಿ ತಮ್ಮ ಕೈಚಳಕ ತೋರಿಸಿದ್ದಾರೆ. ಅವರ ವಿಭಿನ್ನ ಶೈಲಿಯ ಚಿತ್ರಗಳು ಯಶಸ್ಸಿನ ಉತ್ತುಂಗಕ್ಕೇರಿ ಗಲ್ಲಾಪೆಟ್ಟಿಗೆಯನ್ನು ಸೂರೆ ಹೊಡೆದವು.

ಅವರ ಗರಡಿಯಲ್ಲಿ ಪಳಗಿದ ಅನೇಕ ಯುವಕರು ಇಂದು ಚಿತ್ರರಂಗದಲ್ಲಿ ಬಹಳ ಯಶಸ್ವಿಯಾಗಿದ್ದಾರೆ. ಅವರ ಚಿತ್ರಗಳಲ್ಲಿ ಪ್ರಮುಖವಾದವು ಅನಂತನ ಅವಾಂತರ, ಅನುಭವ, ಹೆಂಡತಿ ಎಂದರೆ ಹೇಗಿರಬೇಕು ಇತ್ಯಾದಿ, ಅವರ ಮಂಗಳೂರು ಮಂಜುನಾಥ ಚಿತ್ರದ ಸಂಭಾಷಣೆಗಳು ಬಹಳ ಜನಪ್ರಿಯವಾಗಿವೆ.

Top