ನೀತಿ ಸಂಹಿತೆ ಉಲ್ಲಂಘನೆ : ಗ್ಯಾಸ್ ಏಜೆನ್ಸಿ ವಿರುದ್ಧ ಕೇಸ್ ದಾಖಲು

ಕೊಪ್ಪಳ ನಗರದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ, ಕೇಂದ್ರ ಯೋಜನೆಯಡಿ ನಗರದ 23 ನೇ ವಾರ್ಡ್ ಗಾಂಧಿನಗರದ ಫಲಾನುಭವಿಗಳಿಗೆ ಅಡುಗೆ ಅನಿಲ ಸಂಪರ್ಕ ಸೌಲಭ್ಯ ವಿತರಿಸಿದ ಕೊಪ್ಪಳದ ಗುರುಪ್ರಸಾದ್ ಗ್ಯಾಸ್ ಏಜೆನ್ಸಿ ವಿರುದ್ಧ ನಗರ ಠಾಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆಯ ಮೊಕದ್ದಮೆ ದಾಖಲಿಸಲಾಗಿದೆ.
ಕೊಪ್ಪಳ ಜಿಲ್ಲೆಯಲ್ಲಿ ನಾಲ್ಕು ನಗರ, ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಪ್ರಕ್ರಿಯೆ ಆರಂಭಗೊಂಡಿದ್ದು, ನೀತಿ ಸಂಹಿತೆ ಜಾರಿಯಲ್ಲಿದೆ. ಆದಾಗ್ಯೂ ಕೊಪ್ಪಳ ನಗರದ ಗುರುಪ್ರಸಾದ್ ಗ್ಯಾಸ್ ಏಜೆನ್ಸಿಯವರು ಕಳೆದ ಆ. 09 ರಂದು ನಗರದ 23 ನೇ ವಾರ್ಡ್ ಗಾಂಧಿನಗರದ ಸುಮಾರು 13 ಫಲಾನುಭವಿಗಳಿಗೆ ಕೇಂದ್ರ ಸರ್ಕಾರದ ಯೋಜನೆಯಡಿ ಅಡುಗೆ ಅನಿಲ ಸಿಲಿಂಡರ್ ಸೌಲಭ್ಯ ವಿತರಣೆ ಮಾಡಿರುವ ಕುರಿತು ದೂರು ಬಂದ ಹಿನ್ನೆಲೆಯಲ್ಲಿ ಜಿಲ್ಲೆಯ ಎಂ.ಸಿ.ಸಿ. ತಂಡದಿಂದ ಪರಿಶೀಲನೆ ನಡೆಸಿದೆ. ಪರಿಶೀಲನೆ ಸಂದರ್ಭದಲ್ಲಿ, ಅಡುಗೆ ಅನಿಲ ಸಿಲಿಂಡರ್ ಸೌಲಭ್ಯ ವಿತರಣೆಯಾಗಿರುವುದು ಖಚಿತಪಟ್ಟಿರುತ್ತದೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಕಾರಣಕ್ಕಾಗಿ ಗುರುಪ್ರಸಾದ್ ಗ್ಯಾಸ್ ಏಜೆನ್ಸಿ ವಿರುದ್ಧ ನಗರದ ಪೊಲೀಸ್ ಠಾಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಿದ್ದು, ಎಫ್‍ಐಆರ್ ದಾಖಲಿಸಲಾಗಿದೆ ಎಂದು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಜಿಲ್ಲಾ ಎಂ.ಸಿ.ಸಿ. ತಂಡದ ಮುಖ್ಯಸ್ಥರಾಗಿರುವ ಐಎಎಸ್ ಪ್ರೊಬೆಷನರಿ ಅಧಿಕಾರಿ ಅಕ್ಷಯ್ ಶ್ರೀಧರ್ ಅವರು ತಿಳಿಸಿದ್ದಾರೆ.
ಐಎಎಸ್ ಪ್ರೊಬೆಷನರಿ ಅಧಿಕಾರಿ ಅಕ್ಷಯ್ ಶ್ರೀಧರ್, ಕ್ರೈಂ ಬ್ರಾಂಚ್ ಪೊಲೀಸ್ ಅಧಿಕಾರಿ ನಾರಾಯಣ ದಂಡಿನ್, ಯುನಿಸೆಫ್‍ನ ಹರೀಶ್ ಜೋಗಿ ಅವರು ಜಿಲ್ಲಾ ಎಂ.ಸಿ.ಸಿ. ತಂಡದಲ್ಲಿದ್ದು, ಕೊಪ್ಪಳ ತಹಸಿಲ್ದಾರ್ ಗುರುಬಸವರಾಜ್ ತಂಡದಲ್ಲಿದ್ದರು ತ.

Please follow and like us: