ನೋಂದಾಯಿತ ಖರೀದಿ ಕೇಂದ್ರಗಳಲ್ಲಿ ಬಿಳಿಜೋಳ ಖರೀದಿ ಪ್ರಕ್ರಿಯೆ ಆರಂಭ : ಡಿಸಿ


ಕೊಪ್ಪಳ, : ಕೇಂದ್ರ ಸರ್ಕಾರದ ನಿರ್ದೇಶನದಂತೆ 2020-21ನೇ ಸಾಲಿನ ರಬೀ ಮಾರ್ಕೆಟಿಂಗ್ ಸೀಜನ್‌ನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ 1 ಲಕ್ಷ ಮೆಟ್ರಿಕ್ ಟನ್ ಬಿಳಿ ಜೋಳ ಖರೀದಿಸಲು ಸರ್ಕಾರ ಅನುಮತಿ ನೀಡಿದ್ದು, ಕೇಂದ್ರ ಸರ್ಕಾರವು ಪ್ರಸಕ್ತ ಸಾಲಿಗೆ 1 ಲಕ್ಷ ಮೆಟ್ರಿಕ್ ಟನ್ ಬಿಳಿ ಜೋಳ ಖರೀದಿಸಲು ಗುರಿ ನಿಗದಿಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ತಿಳಿಸಿದ್ದಾರೆ.

ಕೊಪ್ಪಳ ಜಿಲ್ಲೆಗೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ಇವರನ್ನು ಖರೀದಿ ಏಜೆನ್ಸಿಯಾಗಿ ನೇಮಕ ಮಾಡಲಾಗಿದ್ದು ಬಿಳಿ ಜೋಳ ಖರೀದಿಗೆ ಸಂಬAಧಿಸಿದAತೆ ನೋಂದಣಿ ಮಾಡಲಾದ ಖರೀದಿ ಕೇಂದ್ರಗಳಲ್ಲಿ ಖರೀದಿಸಲು ಸೂಚಿಸಲಾಗಿದೆ. ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಬಿಳಿ ಜೋಳವನ್ನು ಮಾರಾಟ ಮಾಡಲು ಇಚ್ಚಿಸುವ ರೈತರು ಆನ್‌ಲೈನ್ ಮೂಲಕ ನೋಂದಣಿ ಮಾಡಬೇಕಿದ್ದು, ರೈತರ ನೋಂದಣಿ ಪ್ರಕ್ರಿಯೆಯು ಏ.20 ರಿಂದ 30 ರವರೆಗೆ ನಡೆಯಲಿದೆ. ಮೇ.01 ರಿಂದ 31 ರವರೆಗೆ ನೋಂದಾಯಿತ ರೈತರಿಂದ ರಾಗಿ ಮತ್ತು ಬಿಳಿ ಜೋಳವನ್ನು ಖರೀದಿಸಿ ಕೇಂದ್ರಗಳಲ್ಲಿ ಶೇಖರಿಸುವ ಕಾರ್ಯ ಆರಂಭವಾಗಲಿದೆ.

ಈ ಯೋಜನೆಯಲ್ಲಿ ರೈತರಿಂದ ಗರಿಷ್ಠ 1 ಲಕ್ಷ ಮೆಟ್ರಿಕ್ ಟನ್ ಬಿಳಿ ಜೋಳ ಖರೀದಿಸಬೇಕಾಗಿರುವುದರಿಂದ ಕೊಪ್ಪಳ ಜಿಲ್ಲೆಯಲ್ಲಿ ಗಂಗಾವತಿ, ಕೊಪ್ಪಳ, ಕುಷ್ಟಗಿ, ಯಲಬುರ್ಗಾ ತಾಲೂಕುಗಳಲ್ಲಿ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕಾಗಿದೆ. ಪ್ರಸ್ತುತ ಈ ತಾಲೂಕುಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ಸಗಟು ಮಳಿಗೆಗಳಲ್ಲಿ ಅಗತ್ಯ ಸಿಬ್ಬಂದಿ, ಗಣಕ ಯಂತ್ರಗಳ ವ್ಯವಸ್ಥೆ ಮಾಡಿ ರೈತರು ನೋಂದಣಿ ಮಾಡಿಕೊಳ್ಳಬೇಕು.
ಜಂಟಿ ಕೃಷಿ ನಿರ್ದೇಶಕರು ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿದ ರೈತರು ಬಿಳಿ ಜೋಳ ಮಾದರಿಯನ್ನು ವಿಶ್ಲೇಷಣೆ ಮಾಡಿ ವರದಿ ನೀಡಲು ಅಗತ್ಯ ಗ್ರೇಡರ್‌ಗಳನ್ನು ನಿಯೋಜಿಸಬೇಕು. ಕೊಪ್ಪಳದ ಕೃಷಿ ಉತ್ಪನ್ನ ಮಾರುಕಟ್ಟೆಯ ಸಹಾಯಕ ನಿರ್ದೇಶಕರು ಖರೀದಿ ಕೇಂದ್ರಗಳಿಗೆ ಬರುವ ರೈತರಿಗೆ ನೀರು, ವಿದ್ಯುತ್, ವಸತಿ ಇತರೆ ಅಗತ್ಯ ವ್ಯವಸ್ಥೆಮಾಡಲು ಸೂಕ್ತ ಸಿಬ್ಬಂದಿಯನ್ನು ನಿಯೋಜಿಸಬೇಕು ಹಾಗೂ ಸರ್ಕಾರದ ಷರತ್ತುಗಳನ್ನು ಪಾಲಿಸಬೇಕು.

ಷರತ್ತುಗಳು:

ಕೋವಿಡ್-19 ಹರಡುವಿಕೆ ಹಿನ್ನಲೆಯಲ್ಲಿ ಲಾಕ್‌ಡೌನ್ ನಿಯಮಗಳ ಅನುಸಾರ ಸಮಾಜಿಕ ಅಂತರ ಹಾಗೂ ನೈರ್ಮಲ್ಯ ಕಾಪಾಡಿಕೊಳ್ಳಬೇಕು. ಸಂಗ್ರಹಣಾ ಕೇಂದ್ರಗಳಲ್ಲಿ ಜನಜಂಗುಳಿ ಉಂಟಾಗದAತೆ ನೋಡಿಕೊಳ್ಳಲು ನಿರ್ದಿಷ್ಟ ಸಂಖ್ಯೆಯ ರೈತರಿಗೆ ಮಾತ್ರ ಅವಕಾಶ ನೀಡಬೇಕು. ಸಂಗ್ರಹಣಾ ಕೇಂದ್ರದಿAದ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳು ಕಡ್ಡಾಯವಾಗಿ ಮಾಸ್ಕ್ ನ್ನು ಧರಿಸಬೇಕು. ಕೋವಿಡ್-19 ಹರಡುವಿಕೆಯನ್ನು ತಡೆಗಟ್ಟುವ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರವು ನೀಡಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕರು ಷರತ್ತುಗಳನ್ನು ಪಾಲನೆ ಮಾಡಿ ರೈತರಿಗೆ ಖರೀದಿ ಕೇಂದ್ರಗಳಲ್ಲಿ ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಳ್ಳಲು ಅಗತ್ಯ ಕ್ರಮವಹಿಸಬೇಕು. ರೈತರು ನೋಂದಣಿ ಮಾಡಿಕೊಳ್ಳುವ ಸ್ಥಳಕ್ಕೆ ಬಿಳಿ ಜೋಳದ ಮಾದರಿಯನ್ನು ವಿಶ್ಲೇಷಿಸುವ ಅಗತ್ಯವಿರುವ ತೇವಾಂಶ ಮಾಪಕಗಳನ್ನು ಲಭ್ಯವಿರುವಂತೆ ಹಾಗೂ ಈ ಎಲ್ಲಾ ಪ್ರಕ್ರಿಯೆಗಳಲ್ಲಿ ರೈತರಿಗೆ ಅನಗತ್ಯ ಗೊಂದಲ, ತೊಂದರೆ ಉಂಟಾಗದAತೆ ಸಂಬAಧಪಟ್ಟ ಎಲ್ಲಾ ಅಧಿಕಾರಿಗಳು ಕಾಲ ಮಿತಿಯಲ್ಲಿ ಕ್ರಮಕೈಗೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Please follow and like us:
error