You are here
Home > Koppal News > ನ. ೦೧ ರಿಂದ ಮುನಿರಾಬಾದ್‌ನಲ್ಲಿ ಫಲ-ಪುಷ್ಪ ಪ್ರದರ್ಶನ

ನ. ೦೧ ರಿಂದ ಮುನಿರಾಬಾದ್‌ನಲ್ಲಿ ಫಲ-ಪುಷ್ಪ ಪ್ರದರ್ಶನ

ಕೊಪ್ಪಳ ಅ :ಕೊಪ್ಪಳ ತೋಟಕಾರಿಕೆ ಇಲಾಖೆ (ಜಿ.ಪಂ.) ಹಾಗೂ ಸುವರ್ಣ ಕರ್ನಾಟಕ ಉದ್ಯಾನವನಗಳ ಪ್ರತಿಷ್ಠಾಪನ ಪಂಪಾವನ ಮುನಿರಾಬಾದ್ ಇವರ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಫಲ-ಪುಷ್ಪ ಪ್ರದರ್ಶನ ಕಾರ್ಯಕ್ರಮವನ್ನು ನ. ೦೧ ರಿಂದ ೦೪ ರವರೆಗೆ ತಾಲೂಕಿನ ಮುನಿರಾಬಾದ್ ಗ್ರಾಮದ ಪಂಪಾವನದಲ್ಲಿ ಆಯೋಜಿಸಲಾಗಿದ್ದು, ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು ನ. ೦೧ ಬೆಳಿಗ್ಗೆ ೧೧ ಗಂಟೆಗೆ ಏರ್ಪಡಿಸಲಾಗಿದೆ.
ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಆರ್. ಶಂಕರ್ ಅವರು ಕಾರ್ಯಕ್ರಮದ ಉದ್ಘಾಟನೆ ನೆರೆವೇರಿಸುವರು. ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಸಮಾರಂಭದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿ.ಪಂ. ಅಧ್ಯಕ್ಷ ಕೆ. ರಾಜಶೇಖರ ಹಿಟ್ನಾಳ್, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಅಮರೇಗೌಡ ಪಾಟೀಲ್ ಬಯ್ಯಾಪುರ, ಪರಣ್ಣ ಈಶ್ವರಪ್ಪ ಮುನವಳ್ಳಿ, ಹಾಲಪ್ಪ ಬಸಪ್ಪ ಆಚಾರ ಹಾಗೂ ಬಸವರಾಜ ದಢೇಸೂಗೂರು, ವಿಧಾನಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ ಇಟಗಿ, ಡಾ. ಚಂದ್ರಶೇಖರ ಬಿ. ಪಾಟೀಲ ಹಾಗೂ ಶರಣಪ್ಪ ಮಟ್ಟೂರ, ಜಿ.ಪಂ. ಉಪಾಧ್ಯಕ್ಷೆ ಲಕ್ಷ್ಮಮ್ಮ ಸಿದ್ದಪ್ಪ ನೀರಲೂಟಿ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿಸಮಿತಿ ಅಧ್ಯಕ್ಷ ಗೂಳಪ್ಪ ಹಲಗೇರಿ, ತಾ.ಪಂ. ಅಧ್ಯಕ್ಷ ಬಾಲಚಂದ್ರನ್, ಜಿ.ಪಂ. ಸದಸ್ಯೆ ಬೀನಾಗೌಸ್, ಮುನಿರಾಬಾದ್ ಡ್ಯಾಂ ಗ್ರಾ.ಪಂ. ಅಧ್ಯಕ್ಷೆ ಸುಶೀಲಮ್ಮ ಎಂ. ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸರ್ಕಾರದ ಕಾರ್ಯದರ್ಶಿ ಉಮಾ ಮಹದೇವನ್, ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿ ಎಮ್. ಮಹೇಶ್ವರ್‌ರಾವ್, ಲಾಲ್‌ಬಾಗ್ ತೋಟಗಾರಿಕೆ ನಿರ್ದೇಶಕರು ವೈ.ಎಸ್. ಪಾಟೀಲ್, ಕೊಪ್ಪಳ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೇಣುಕಾ ಕೆ. ಸುಕುಮಾರ್, ಲಾಲ್‌ಬಾಗ್ ತೋಟಗಾರಿಕೆ ಜಂಟಿ ನಿರ್ದೇಶಕರು ಹಾಗೂ ಜಿಲ್ಲಾ ನೋಡಲ್ ಅಧಿಕಾರಿ ಲಕ್ಷ್ಮೀ ಡಿ. ರಾಜು, ಲಾಲ್‌ಬಾಗ್ (ತೋಟಗಾರಿಕೆ ಉದ್ಯಾನವನ ಹಾಗೂ ಪುಷ್ಪಾಭಿವೃದ್ಧಿ) ತೋಟಗಾರಿಕೆ ಜಂಟಿ ನಿರ್ದೇಶಕರು ಡಾ. ಎಂ. ಜಗದೀಶ್, ಕಲಬುರಗಿ ವಿಭಾಗದ ತೋಟಗಾರಿಕೆ ಜಂಟಿ ನಿರ್ದೇಶಕರು ಎಸ್.ಬಿ. ದಿಡ್ಡಿಮನಿ, ಮುನಿರಾಬಾದ್ ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಡಾ. ಪಿ.ಎಂ. ಗಂಗಾಧರಪ್ಪ ಭಾಗವಹಿಸುವರು. ಫಲ-ಪುಷ್ಪ ಪ್ರದರ್ಶನ ಕಾರ್ಯಕ್ರಮದ ಅಂಗವಾಗಿ ನ. ೦೧ ರಿಂದ ೦೪ ರವರೆಗೆ ಸಂಜೆ ೬ ಗಂಟೆಯಿಂದ ರಾತ್ರಿ ೧೦ ಗಂಟೆಯವರೆಗೆ ಪಂಪಾವನ ಉದ್ಯಾನವನದಲ್ಲಿ ಸಾಂಸ್ಕೃತಿ ಕಾರ್ಯಕ್ರಮಗಳು ನಡೆಯಲಿವೆ ಎಂದು ಕೊಪ್ಪಳ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೃಷ್ಣ ಉಕ್ಕುಂದ  ತಿಳಿಸಿದ್ದಾರೆ.

Top