ಕೊಪ್ಪಳ ನ. : ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಕಾರ್ಯಕ್ರಮವನ್ನು ನ. ೧೦ ರಂದು ಬೆಳಿಗ್ಗೆ ೧೦-೩೦ ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಆರ್. ಶಂಕರ್ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಸಮಾರಂಭದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ ಅಧ್ಯಕ್ಷ ಕೆ. ರಾಜಶೇಖರ ಹಿಟ್ನಾಳ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಅಮರೇಗೌಡ ಪಾಟೀಲ ಬಯ್ಯಾಪುರ, ಪರಣ್ಣ ಈಶ್ವರಪ್ಪ ಮುನವಳ್ಳಿ, ಹಾಲಪ್ಪ ಬಸಪ್ಪ ಆಚಾರ್ ಹಾಗೂ ಬಸವರಾಜ ದಢೇಸೂಗೂರು, ವಿಧಾನಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ ಇಟಗಿ, ಡಾ. ಚಂದ್ರಶೇಖರ ಬಿ. ಪಾಟೀಲ ಹಾಗೂ ಶರಣಪ್ಪ ಮಟ್ಟೂರ, ಜಿ.ಪಂ. ಉಪಾಧ್ಯಕ್ಷೆ ಲಕ್ಷ್ಮಮ್ಮ ಸಿದ್ದಪ್ಪ ನೀರಲೂಟಿ, ತಾ.ಪಂ. ಅಧ್ಯಕ್ಷ ಬಾಲಚಂದ್ರನ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸರ್ಕಾರದ ಕಾರ್ಯದರ್ಶಿ ಉಮಾ ಮಹದೇವನ್ ಪಾಲ್ಗೊಳ್ಳುವರು. ಖಾದ್ರಿ-ವ-ತಸ್ಕೀನಿ ಖತಿಬ್ ವ ಇಮಾಮ್ ಯೂಸೂಫಿಯಾ ಮಸ್ಜಿದ್ನ ಮೌಲಾನಾ ಮುಫ್ತಿ ಮಹಮ್ಮದ್ ನಜೀರ್ ಅಹ್ಮದ್ ಅವರು ಗೌರವ ಉಪಸ್ಥಿತರಿರುವರು.
ಬೆಂಗಳೂರಿನ ಅಪರ ಪೊಲೀಸ್ ಆಯುಕ್ತರಾದ ಎಂ. ನಂಜುಂಡಸ್ವಾಮಿ ಅವರು ಹಜರತ್ ಟಿಪ್ಪು ಸುಲ್ತಾನ್ರವರ ಕುರಿತು ವಿಶೇಷ ಉಪನ್ಯಾಸ ನೀಡುವರು. ಕಾರ್ಯಕ್ರಮದ ಅಂಗವಾಗಿ ಅಂದು ಬೆಳಿಗ್ಗೆ ೮-೩೦ ಗಂಟೆಗೆ ಹಜರತ್ ಟಿಪ್ಪು ಸುಲ್ತಾನ್ ವೃತ್ತದಲ್ಲಿ ಹಜರತ್ ಟಿಪ್ಪು ಸುಲ್ತಾನ್ರವರ ಭಾವಚಿತ್ರಕ್ಕೆ ಗಣ್ಯ ಮಾನ್ಯರಿಂದ ಮಾಲಾರ್ಪಣೆ ನಡೆಯಲಿದೆ .
ನ. ೧೦ ರಂದು ಕೊಪ್ಪಳದಲ್ಲಿ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ
Please follow and like us: