You are here
Home > Koppal News > ನ. ೨೬ ರಂದು ರಂದು ಕೊಪ್ಪಳದಲ್ಲಿ ಭಕ್ತ ಕನಕದಾಸ ಜಯಂತಿ ಆಚರಣೆ

ನ. ೨೬ ರಂದು ರಂದು ಕೊಪ್ಪಳದಲ್ಲಿ ಭಕ್ತ ಕನಕದಾಸ ಜಯಂತಿ ಆಚರಣೆ


ಕೊಪ್ಪಳ ನ. : ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಭಕ್ತ ಕನಕದಾಸರವರ ಜಯಂತಿ ಆಚರಣೆ ಕಾರ್ಯಕ್ರಮವನ್ನು ನ. ೨೬ ರಂದು ಬೆಳಿಗ್ಗೆ ೧೧-೩೦ ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಆರ್. ಶಂಕರ್ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಸಮಾರಂಭದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ ಪ್ರಭಾರ ಅಧ್ಯಕ್ಷರು ಆಗಿರುವ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ವಿಜಯಲಕ್ಷ್ಮೀ ಚೆನ್ನುಪಾಟಿ ಪ್ರಭಾಕರ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಅಮರೇಗೌಡ ಪಾಟೀಲ ಬಯ್ಯಾಪುರ, ಪರಣ್ಣ ಈಶ್ವರಪ್ಪ ಮುನವಳ್ಳಿ, ಹಾಲಪ್ಪ ಬಸಪ್ಪ ಆಚಾರ್ ಹಾಗೂ ಬಸವರಾಜ ದಢೇಸೂಗೂರು, ವಿಧಾನಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ ಇಟಗಿ, ಡಾ. ಚಂದ್ರಶೇಖರ ಬಿ. ಪಾಟೀಲ ಹಾಗೂ ಶರಣಪ್ಪ ಮಟ್ಟೂರ, ತಾ.ಪಂ. ಅಧ್ಯಕ್ಷ ಬಾಲಚಂದ್ರನ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸರ್ಕಾರದ ಕಾರ್ಯದರ್ಶಿ ಉಮಾ ಮಹದೇವನ್ ಪಾಲ್ಗೊಳ್ಳುವರು. ಗಂಗಾವತಿಯ ಸಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ನಿಂಗಪ್ಪ ಕಂಬಳಿ ಅವರು ಭಕ್ತ ಕನಕದಾಸರವರ ಕುರಿತು ವಿಶೇಷ ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.
ಕಾರ್ಯಕ್ರಮದ ಅಂಗವಾಗಿ ಅಂದು ಬೆಳಿಗ್ಗೆ ೦೯ ಗಂಟೆಗೆ ಭಕ್ತ ಕನಕದಾಸರವರ ಭಾವಚಿತ್ರದ ಮೇರವಣಿಗೆಯು ನಗರದ ಸಿರಸಪ್ಪಯ್ಯನಮಠದಿಂದ ಪ್ರಾರಂಭಗೊಂಡು, ಗಡಿಯಾರ ಕಂಬದ ಮಾರ್ಗವಾಗಿ ಜವಾಹರ ರಸ್ತೆಯ ಮೂಲಕ ಸಾಹಿತ್ಯ ಭವನದ ವರೆಗೆ ಸಾಗಿಬರಲಿದೆ ಎಂದು ಪ್ರಕಟಣೆ ತಿಳಿಸಿದೆ.

Top