ನ. 01 ರಂದು ಕೊಪ್ಪಳದಲ್ಲಿ ರಾಜ್ಯೋತ್ಸವ ದಿನಾಚರಣೆ

ಕೊಪ್ಪಳ ಅ. : ಕೊಪ್ಪಳ ಜಿಲ್ಲಾಡಳಿತ ವತಿಯಿಂದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ನವೆಂಬರ್. 01 ರಂದು ಬೆಳಿಗ್ಗೆ 09-00 ಗಂಟೆಗೆ ಗದಗ ರಸ್ತೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.
ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಆರ್. ಶಂಕರ್ ಅವರು ಧ್ವಜಾರೋಹಣ ನೆರೆವೇರಿಸುವರು. ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಸಮಾರಂಭದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿ.ಪಂ. ಅಧ್ಯಕ್ಷ ಕೆ. ರಾಜಶೇಖರ ಹಿಟ್ನಾಳ್, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಅಮರೇಗೌಡ ಬಯ್ಯಾಪುರ, ಪರಣ್ಣ ಈಶ್ವರಪ್ಪ ಮುನವಳ್ಳಿ, ಹಾಲಪ್ಪ ಬಸಪ್ಪ ಆಚಾರ ಹಾಗೂ ಬಸವರಾಜ ದಢೇಸೂಗೂರು, ವಿಧಾನಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ ಇಟಗಿ, ಡಾ. ಚಂದ್ರಶೇಖರ ಬಿ. ಪಾಟೀಲ ಹಾಗೂ ಶರಣಪ್ಪ ಮಟ್ಟೂರ, ಜಿ.ಪಂ. ಉಪಾಧ್ಯಕ್ಷೆ ಲಕ್ಷ್ಮಮ್ಮ ಸಿದ್ದಪ್ಪ ನೀರಲೂಟಿ, ತಾ.ಪಂ. ಅಧ್ಯಕ್ಷ ಬಾಲಚಂದ್ರನ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸರ್ಕಾರದ ಕಾರ್ಯದರ್ಶಿ ಉಮಾ ಮಹದೇವನ್ ಪಾಲ್ಗೊಳ್ಳುವರು.
ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಭುವನೇಶ್ವರಿ ನಾಡದೇವತೆಯ ಭಾವಚಿತ್ರದ ಮೇರವಣಿಗೆ ಮತ್ತು ಸ್ತಬ್ದ ಚಿತ್ರಗಳು ನ. 01 ರಂದು ಬೆಳಿಗ್ಗೆ 7 ಗಂಟೆಗೆ ಮಿನಿ ವಿಧಾನಸೌಧ (ತಹಶೀಲ್ದಾರ್ ಕಛೇರಿ) ದಿಂದ ಪ್ರಾರಂಭಗೊಂಡು ಜಿಲ್ಲಾ ಕ್ರೀಡಾಂಗಣಕ್ಕೆ ತಲುಪಲಿದೆ. ಬೆಳಿಗ್ಗೆ 9 ಗಂಟೆಗೆ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮ. ನಂತರ ವಿವಿಧ ಶಾಲಾ ಮಕ್ಕಳು, ಪೊಲೀಸ್, ಎನ್.ಸಿ.ಸಿ. ಸೇವಾದಳ, ಭಾರತ್ ಸ್ಕೌಟ್ಸ್ ಮತ್ತು ಗೈಟ್ಸ್ ಹಾಗೂ ಗೃಹ ರಕ್ಷಕ ದಳದಿಂದ ಪಥಸಂಚಲನ, ಗೌರವ ರಕ್ಷೆ ಸ್ವೀಕಾರ ಕಾರ್ಯಕ್ರಮ, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನ ನಡೆಯಲಿದೆ. ಅಲ್ಲದೇ ಅಂದು ಸಂಜೆ 06-00 ಗಂಟೆಯಿಂದ ನಗರದ ಸಾಹಿತ್ಯ ಭವನದಲ್ಲಿ ದೇಶ ಭಕ್ತಿ ಗೀತೆ, ದೇಶ ಭಕ್ತಿ ನೃತ್ಯಗಳು, ಭರತನಾಟ್ಯ, ಜನಪದ ನೃತ್ಯ ಹಾಗೂ ಸಮೂಹ ಇತ್ಯಾದಿ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಪ್ರಕಟಣೆ ತಿಳಿಸಿದೆ.
=======

=======
ನ. 01 ರಿಂದ ಕನ್ನಡ ಚಿತ್ರಗಳ ಪ್ರದರ್ಶನ ಕಡ್ಡಾಯ : ಪಿ. ಸುನೀಲ್ ಕುಮಾರ್ ಆದೇಶ
ಕೊಪ್ಪಳ ಅ. 27 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯೋತ್ಸವ ನಿಮಿತ್ಯ ನ. 01 ರಿಂದ 07 ರವರೆಗೆ ಕೊಪ್ಪಳ ಜಿಲ್ಲೆಯ ಎಲ್ಲಾ ಚಿತ್ರಮಂದಿರಗಳಲ್ಲಿ ಕಡ್ಡಾಯವಾಗಿ ಕನ್ನಡ ಚಿತ್ರಗಳನ್ನೇ ಪ್ರದರ್ಶಿಸಬೇಕು ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ಆದೇಶವನ್ನು ನೀಡಿದ್ದಾರೆ.
ಕೊಪ್ಪಳ ಜಿಲ್ಲೆಯಾದ್ಯಂತ ಪ್ರತಿ ವರ್ಷದಂತೆ ಈ ವರ್ಷವೂ ಸಹ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಜಿಲ್ಲೆಯ ಎಲ್ಲಾ ಚಿತ್ರಮಂದಿರಗಳಲ್ಲಿ ನ. 01 ರಿಂದ 07 ರವರೆಗೆ ಅಂದರೆ ಒಂದು ವಾರದ ವರೆಗೆ ಕಡ್ಡಾಯವಾಗಿ ಕನ್ನಡ ಚಿತ್ರಗಳನ್ನು ಮಾತ್ರ ಪದರ್ಶಿಸಲು ಆದೇಶಿಸಲಾಗಿದ್ದು, ಜಿಲ್ಲೆಯ ಎಲ್ಲಾ ಚಿತ್ರಮಂದಿರಗಳ ಮಾಲಿಕರು ನ. 01 ರಿಂದ ಒಂದು ವಾರದ ಕಾಲ ತಮ್ಮ ಚಿತ್ರಮಂದಿರಗಳಲ್ಲಿ ಕನ್ನಡ ಚಿತ್ರಗಳನ್ನೇ ಪ್ರದರ್ಶಿಸಿ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಪ್ರಕಟಣೆ ತಿಳಿಸಿದೆ.
=======
ಹೈ-ಕ ಮಂಡಳಿ ಕೋಶದಲ್ಲಿ ಕೆಲಸ ನಿರ್ವಹಿಸಲು ನಿವೃತ್ತ ಅಧಿಕಾರಿಗಳಿಂದ ಅರ್ಜಿ ಆಹ್ವಾನ
ಕೊಪ್ಪಳ ಅ. 27 (ಕರ್ನಾಟಕ ವಾರ್ತೆ): ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಹಾಗೂ ಸಂವಿಧಾನದ ಅನುಚ್ಚೇಧ 371(ಜೆ) ಕಲಂ ಅನ್ವಯ ಕಾರ್ಯ ಚಟುವಟಿಕೆಗಾಗಿ ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಸ್ಥಾಪಿಸಿರುವ ಹೈ-ಕ ಮಂಡಳಿಯ ಕೋಶದಲ್ಲಿ ಕೆಲಸ ನಿರ್ವಹಿಸಲು ನಿವೃತ್ತ ಅಧಿಕಾರಿಗಳನ್ನು ಸೇವೆಗೆ ಪಡೆದುಕೊಳ್ಳಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಯೋಜನೆಗಳ ಕಾರ್ಯಾನುಷ್ಠಾನಕ್ಕೆ ಸಹಕಾರಿಯಾಗಲು ಆಡಳಿತ ಹಿತದೃಷ್ಠಿಯಿಂದ ಜಿಲ್ಲೆಗೆ ಒಂದರಂತೆ ಜಿಲ್ಲಾಧಿಕಾರಿ ಕಛೇರಿ/ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಛೇರಿ ಜಿಲ್ಲಾ ಪಂಚಾಯತ ಒಳಗೊಂಡಂತೆ ಜಿಲ್ಲೆಯಲ್ಲಿ ಒಂದು ಕೋಶವನ್ನು ಸ್ಥಾಪಿಸಿ ನಿವೃತ್ತ ಅಧಿಕಾರಿಗಳ ಸೇವೆಯನ್ನು ಪಡೆದುಕೊಳ್ಳಲು ಮಂಡಳಿಯಿಂದ ಅನುಮತಿ ನೀಡಿರುವುದರಿಂದ ಕೊಪ್ಪಳ ಜಿಲ್ಲಾಧಿಕಾರಿ ಕಛೇರಿಯ ಹೈ.ಕ.ಪ್ರ.ಅ ಮಂಡಳಿಯ ಕೋಶದಲ್ಲಿ ತಾಂತ್ರಿಕ ಅಧಿಕಾರಿ ಹಾಗೂ ತಾಂತ್ರಿಕ ಅಧಿಕಾರಿ ಹೆದ್ದೆಗೆ ಆಸಕ್ತಿಯುಳ್ಳ ನಿವೃತ್ತ ಅಧಿಕಾರಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಹೈ.ಕ.ಪ್ರ.ಅ ಮಂಡಳಿಯ ಕೊಪ್ಪಳ ಕೋಶದಲ್ಲಿ ಸೇವೆಗಾಗಿ ಅರ್ಜಿ ಸಲ್ಲಿಸಲು ತಾಂತ್ರಿಕ ಸಲಹೆಗಾರ ಹೆದ್ದೆಗೆ ನಿವೃತ್ತ ಅಧೀಕ್ಷಕ ಅಭಿಯಂತರರು/ ಕಾರ್ಯನಿರ್ವಾಹಕ ಅಭಿಯಂತರರು ಅರ್ಹರಾಗಿದ್ದು, ರೂ. 40,000/-ಗಳ ಮಾಸಿಕ ಗೌರವಧನವನ್ನು ನೀಡಲಾಗುವುದು. ತಾಂತ್ರಿಕ ಅಧಿಕಾರಿ ಹೆದ್ದೆಗೆ ನಿವೃತ್ತ ಕಾರ್ಯನಿರ್ವಾಹಕ ಅಭಿಯಂತರರು/ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಅರ್ಹರಾಗಿದ್ದು, ರೂ. 30,000/-ಗಳ ಮಾಸಿಕ ಗೌರವಧನವನ್ನು ನೀಡಲಾಗುವುದು. ಗರಿಷ್ಠ 65 ವರ್ಷ, ನಿವೃತ್ತ ಅಧಿಕಾರಿಗಳನ್ನು ಆಯ್ಕೆ ಸಮಿತಿಯಿಂದ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಕೋಶದಲ್ಲಿ ಸಿವಿಲ್ ಇಂಜಿನೀಯರ್‍ಗಳನ್ನು ಮಾತ್ರ ಆಯ್ಕೆ ಮಾಡಿಕೊಳ್ಳಲಾಗುವುದು. ನಿವೃತ್ತ ಅಧಿಕಾರಿಗಳ ಮೇಲೆ ಯಾವುದೇ ಇಲಾಖಾ ವಿಚಾರಣೆ ಇರಬಾರದು. ಕೋಶಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳಿಗೆ ಯಾವುದೇ ವಾಹನ ಸೌಕರ್ಯ ಒದಗಿಸಲಾಗುವುದಿಲ್ಲ. ಕೇವಲ ಒಂದು ವರ್ಷದ ಅವಧಿಗೆ ಮಾತ್ರ ತೆಗೆದುಕೊಳ್ಳಲಾಗುವುದು. ಅವಧಿ ಮುಗಿದ ನಂತರ ಮಂಡಳಿ ಕಾರ್ಯಾಲಯದಿಂದ ಅನುಮತಿ ಆಧಾರದ ಮೇಲೆ ಅವಧಿಯನ್ನು ಮುಂದುವರೆಸಲಾಗುವುದು. ತಾಂತ್ರಿಕೆ ಸಲಹೆಗಾರರು/ ಅಧಿಕಾರಿಗಳು ಜಿಲ್ಲಾಧಿಕಾರಿ ಕಛೇರಿ, ಜಿಲ್ಲಾ ಪಂಚಾಯತ ಕಛೇರಿಯಲ್ಲಿ ಅನುಷ್ಠಾನಗೊಳಿಸುತ್ತಿರುವ ಹೆಚ್.ಕೆ.ಆರ್.ಡಿ.ಬಿ ಕಾಮಗಾರಿಗಳ ಅಂದಾಜು ಪಟ್ಟಿಗಳನ್ನು ಸ್ಕ್ರುಟಿನೀ ಮಾಡವುದು ಮತ್ತು ಅನುಷ್ಠಾನ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಬೇಕು. ತಾಂತ್ರಿಕ ಸಲಹೆಗಾರರು ಮತ್ತು ಅಧಿಕಾರಿಗಳು ಮಂಡಳಿ/ ಜಿಲ್ಲಾಧಿಕಾರಿಗಳು/ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ ರವರು ತಗೆದುಕೊಳ್ಳುವ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವುದು ಮತ್ತು ಕಾಮಗಾರಿಗಳ ಪ್ರಗತಿ ಕುರಿತು ವರದಿಯನ್ನು ಮಂಡಳಿಗೆ ಸಲ್ಲಿಸಬೇಕು. ಆಯ್ಕೆಯಾದ ಅಧಿಕಾರಿಗಳು/ ಸಿಬ್ಬಂದಿಗಳಿಗೆ ಸಂಭಾವನೆಯನ್ನು ಮಂಡಳಿಯ ಆಡಳಿತಾತ್ಮಕ ವೆಚ್ಚದಡಿಯಲ್ಲಿ ಭರಿಸಲಾಗುವುದು. ಕೋಶದಲ್ಲಿ ಇನ್ನಿತರ ಕೆಲಸಗಳನ್ನು ನಿರ್ವಹಿಸಬೇಕು.
ಅರ್ಜಿ ಸಲ್ಲಿಸಲಿಚ್ಛೀಸುವ ಆಸಕ್ತಿಯುಳ್ಳ ನಿವೃತ್ತ ಅಧಿಕಾರಿಗಳು ನಿಗದಿತ ಅರ್ಜಿ ನಮೂನೆಯನ್ನು ಕಛೇರಿ ವೇಳೆಯಲ್ಲಿ ಜಿಲ್ಲಾಧಿಕಾರಿಗಳ ಕಛೇರಿಯ ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಕೋಶದಲ್ಲಿ ಪಡೆದು ನವೆಂಬರ್. 11 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
=======
ಕುಷ್ಟಗಿ-ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಆಯ್ಕೆ ಪಟ್ಟಿ ಪ್ರಕಟ : ಆಕ್ಷೇಪಣೆಗೆ ಆಹ್ವಾನ
ಕೊಪ್ಪಳ ಅ. 27 (ಕರ್ನಾಟಕ ವಾರ್ತೆ): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕುಷ್ಟಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರು/ ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳಿಗೆ ಆಹ್ವಾನಿಸಲಾಗಿದೆ.
ಶಿಶು ಅಭಿವೃದ್ಧಿ ಯೋಜನೆ, ಕುಷ್ಟಗಿ ವ್ಯಾಪ್ತಿಯಲ್ಲಿ ಬರುವ 03 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 06 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ತಾತ್ಕಾಲಿಕವಾಗಿ ಗುರುತಿಸಿ ಆಯ್ಕೆ ಮಾಡಿ ಆನ್‍ಲೈನ್ ಞoಠಿಠಿಚಿಟ.ಟಿiಛಿ.iಟಿ ನಲ್ಲಿ ಪ್ರಕಟಿಸಲಾಗಿದೆ ಹಾಗೂ ಈ ಮಾಹಿತಿಯನ್ನು ಕುಷ್ಟಗಿ ಶಿಶು ಅಭಿವೃಧ್ಧಿ ಯೋಜನಾಧಿಕಾರಿಗಳ ಕಛೇರಿ ಸೂಚನಾ ಫಲಕ ಮತ್ತು ಸಂಬಂಧಿಸಿದ ಗ್ರಾ.ಪಂ. ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಈ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಅಗತ್ಯ ದಾಖಲೆಗಳೊಂದಿಗೆ ನವೆಂಬರ್. 05 ರೊಳಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಕುಷ್ಟಗಿ, ಇಲ್ಲಿಗೆ ಕಛೇರಿ ಸಮಯದಲ್ಲಿ ಸಲ್ಲಿಸಬೇಕು. ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಕುಷ್ಟಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
=======
ಯಲಬುರ್ಗಾ-ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಆಯ್ಕೆ ಪಟ್ಟಿ ಪ್ರಕಟ : ಆಕ್ಷೇಪಣೆಗೆ ಆಹ್ವಾನ
ಕೊಪ್ಪಳ ಅ. 27 (ಕರ್ನಾಟಕ ವಾರ್ತೆ): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯಲಬುರ್ಗಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರು/ ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳಿಗೆ ಆಹ್ವಾನಿಸಲಾಗಿದೆ.
ಶಿಶು ಅಭಿವೃದ್ಧಿ ಯೋಜನೆ, ಯಲಬುರ್ಗಾ ವ್ಯಾಪ್ತಿಯಲ್ಲಿ ಬರುವ 02 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 14 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ತಾತ್ಕಾಲಿಕವಾಗಿ ಗುರುತಿಸಿ ಆಯ್ಕೆ ಮಾಡಿ ಆನ್‍ಲೈನ್ ಞoಠಿಠಿಚಿಟ.ಟಿiಛಿ.iಟಿ ನಲ್ಲಿ ಪ್ರಕಟಿಸಲಾಗಿದೆ ಹಾಗೂ ಈ ಮಾಹಿತಿಯನ್ನು ಯಲಬುರ್ಗಾ ಶಿಶು ಅಭಿವೃಧ್ಧಿ ಯೋಜನಾಧಿಕಾರಿಗಳ ಕಛೇರಿ ಸೂಚನಾ ಫಲಕ ಮತ್ತು ಸಂಬಂಧಿಸಿದ ಗ್ರಾ.ಪಂ. ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಈ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಅಗತ್ಯ ದಾಖಲೆಗಳೊಂದಿಗೆ ನವೆಂಬರ್. 05 ರೊಳಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಯಲಬುರ್ಗಾ, ಇಲ್ಲಿಗೆ ಕಛೇರಿ ಸಮಯದಲ್ಲಿ ಸಲ್ಲಿಸಬೇಕು. ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಯಲಬುರ್ಗಾ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Please follow and like us:
error