ನ. 10 ರಂದು ಹಜರತ್ ಟಿಪ್ಪು ಸುಲ್ತಾನ ಜಯಂತಿ ಆಚರಣೆಗೆ ನಿರ್ಧಾರ : ಪಿ. ಸುನೀಲ್ ಕುಮಾರ್

ಕೊಪ್ಪಳ ನ. ): ಇದೇ ನ. 10 ರಂದು ಹಜರತ್ ಟಿಪ್ಪು ಸುಲ್ತಾನ್‍ರವರ ಜಯಂತಿಯನ್ನು ಜಿಲ್ಲಾ ಕೇಂದ್ರದಲ್ಲಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ಹೇಳಿದರು.
ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಹಜರತ್ ಟಿಪ್ಪು ಸುಲ್ತಾನ್ ಜಯಂತಿಯನ್ನು ಆಚರಿಸುವ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರದಂದು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾಡಳಿತದ ವತಿಯಿಂದ ಮೈಸುರ ಹುಲಿ ಹಜರತ್ ಟಿಪ್ಪು ಸುಲ್ತಾನ್‍ರವರ ಜಯಂತಿ ಆಚರಣೆಯನ್ನು ನ. 10 ರಂದು ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಆಯೋಜಿಸಲಾಗುವುದು. ಅಂದು ಬೆಳಿಗ್ಗೆ 10-30 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ವೇದಿಕೆ ಸಮಾರಂಭ ಏರ್ಪಡಿಸಲಾಗಿದ್ದು, ಸಚಿವರು, ಶಾಸಕರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಅಲ್ಲದೇ ಸಮಾರಂಭದಲ್ಲಿ ಹಜರತ್ ಟಿಪ್ಪು ಸುಲ್ತಾನ್‍ರವರ ಕುರಿತು ವಿಶೇಷ ಉಪನ್ಯಾಸ ನಡೆಯಲಿದೆ. ವೇದಿಕೆ ಕಾರ್ಯಕ್ರಮಕ್ಕೂ ಮುಂಚೆ ಅಂದು ಬೆಳಿಗ್ಗೆ 8-30 ಗಂಟೆಗೆ ನಗರ ಪೊಲೀಸ್ ಠಾಣೆ ಹತ್ತಿರವಿರುವ ಟಿಪ್ಪು ಸುಲ್ತಾನ ಸರ್ಕಲ್‍ಗೆ ಗಣ್ಯರಿಂದ ಮಾಲಾರ್ಪಣೆ/ ಪುಷ್ಪ ನಮನ ಕಾರ್ಯಕ್ರಮ ಜರುಗಲಿದೆ. ವೇದಿಕೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಜನರಿಗೆ ಆಸನದ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆಯನ್ನು ಕೈಗೊಳ್ಳಬೇಕು. ಅಗತ್ಯ ಪೆÇಲೀಸ್ ಬಂದೋಬಸ್ತ್ ಕೈಗೊಳ್ಳಬೇಕು. ಸರ್ಕಾರಿ ಕಛೇರಿಗಳಲ್ಲಿ ಮತ್ತು ಎಲ್ಲಾ ಶಾಲಾ/ ಕಾಲೇಜುಗಳಲ್ಲಿಯೂ ಸಹ ಹಜರತ್ ಟಿಪ್ಪು ಸುಲ್ತಾನ್ ಜಯಂತಿಯನ್ನು ಆಚರಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹಜರತ್ ಟಿಪ್ಪು ಸುಲ್ತಾನ್‍ರವರ ಜಯಂತಿ ಆಚರಣೆ ಕಾರ್ಯಕ್ರಮದ ಯಶಸ್ವಿಗೆ ಎಲ್ಲ ಸಮಾಜದ ಮುಖಂಡರು, ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ಮನವಿ ಮಾಡಿದರು.
ಬಿಡುವಿದ್ದರೇ ಅಂತಹ ಶಾಲಾ ಮಕ್ಕಳು ಸಮಾರಂಭದಲ್ಲಿ ಭಾಗವಹಿಸುವಂತೆ ಮತ್ತು ಮೇರವಣಿಗೆ ಅವಕಾಶ ನೀಡಿ ಎಂದು ಮುಖಂಡರು ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರೀಯಿಸಿದ ಜಿಲ್ಲಾಧಿಕಾರಿಗಳು ಸರ್ಕಾರವು ಯಾವ ರೀತಿ ನಿರ್ದೇಶನ ನೀಡಿದೆ ಅದೇ ರೀತಿಯಲ್ಲಿ ಹಜರತ್ ಟಿಪ್ಪು ಸುಲ್ತಾನ್‍ರವರ ಜಯಂತಿಯನ್ನು ಆಚರಿಸಲಾಗುವುದು. ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ಭಾಗವಹಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಮಂಜುನಾಥ ಗೊಂಡಬಾಳ ಅವರು ಮಾತನಾಡಿ, ಜಿಲ್ಲಾಡಳಿತದ ವತಿಯಿಂದ ಆಚರಿಸುವ ಜಯಂತಿ ಕಾರ್ಯಕ್ರಮಗಳಲ್ಲಿ ಮಾಡುವಂತಹ ವೀಡಿಯೋ, ಚಿತ್ರೀಕರಣಗಳನ್ನು ಸಮಾರಂಭದ ಮೂರು-ನಾಲ್ಕು ದಿನಗಳ ನಂತರ ಸ್ಥಳೀಯ ಟಿವಿ ಚ್ಯಾನಲ್‍ನಲ್ಲಿ ಪ್ರದರ್ಶಿಸುವಂತಾಗಬೇಕು. ಇದರಿಂದ ಜಿಲ್ಲೆಯ ಎಲ್ಲಾ ಸಾರ್ವಜನಿಕರಿಗೆ ಮಾಹಿತಿ ತಿಳಿಯುವಂತಾಗುತ್ತದೆ. ಈ ವ್ಯವಸ್ಥೆಯಾದಾಗ ಮಾತ್ರ ಚಿತ್ರೀಕರಣ ಮಾಡಿದ್ದು, ಉಪಯುಕ್ತವಾಗುತ್ತದೆ ಎಂದು ಮನವಿ ಮಾಡಿದರು. ಇದಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೇಣುಕಾ ಕೆ. ಸುಕುಮಾರ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಕೃಷ್ಣಮೂರ್ತಿ ದೇಸಾಯಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಮಹಿಮೂದ್, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಝಾಕೀರ್ ಹುಸೇನ್ ಕುಕನೂರ, ಜಿಲ್ಲಾ ವಕ್ಫ್ ಅಧಿಕಾರಿ ಮಖಬುಲ್ ಪಾಶಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಆರ್.ಜಿ ನಾಡಗೀರ, ಗಣ್ಯರಾದ ಅಲ್ಲಮಪ್ರಭು ಬೆಟ್ಟದೂರ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. ಸಮಾಜದ ಮುಖಂಡರಾದ ಲಾಯಕ್‍ಅಲಿ ಸಾಬ, ಗೌಸ್‍ಸಾಬ ಸರದಾರ, ಅಮಜದ್ ಪಟೇಲ್, ಕಾಟನ್ ಪಾಶಾ, ಯುಸೂಪ್ ಖಾನ, ಮಹಮ್ಮದಸಾಬ ಮಂಡಲಗೀರಿ ಮತ್ತಿತರರು ಭಾಗವಹಿಸಿ ಉಪಯುಕ್ತ ಸಲಹೆ ಸೂಚನೆಗಳನ್ನು ನೀಡಿದರು.

Please follow and like us:
error