You are here
Home > Koppal News > ನ.20 ರಂದು ಕೊಪ್ಪಳದಲ್ಲಿ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ

ನ.20 ರಂದು ಕೊಪ್ಪಳದಲ್ಲಿ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ

: ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಹಜರತ್ ಟಿಪ್ಪು ಸುಲ್ತಾನ್ ಜಯಂತಿಯನ್ನು ನ.20 ರಂದು ಬೆಳಗ್ಗೆ 10-30 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಕಾರ್ಯಕ್ರಮ ಉದ್ಘಾಟಿಸುವರು. ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷ ರಾಜಶೇಖರ್ ಹಿಟ್ನಾಳ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಶಿವರಾಜ ತಂಗಡಗಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ವಿಧಾನ ಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ್ ಇಟಗಿ, ಅಮರನಾಥ್ ಪಾಟೀಲ್, ಶರಣಪ್ಪ ಮಟ್ಟೂರು, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಲಕ್ಷ್ಮಮ್ಮ ಸಿದ್ದಪ್ಪ ನೀರಲೂಟಿ, ನಗರ ಸಭೆ ಅಧ್ಯಕ್ಷ ಮಹೇಂದ್ರ ಛೋಪ್ರಾ, ತಾಲೂಕ ಪಂಚಾಯತ್ ಅಧ್ಯಕ್ಷ ಬಾಲಚಂದ್ರನ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೈಯದ್ ಜುಲ್ಲು ಖಾದರ ಖಾದ್ರಿ, ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಮಾ ಮಹದೇವನ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಕೊಪ್ಪಳ ಯೂಸೂಫಿಯಾ ಮಸ್ಜಿದ್‍ನ ಮೌಲಾನಾ ಮುಪ್ತಿ ಮಹಮ್ಮದ್ ನಜೀರ್ ಅಹ್ಮದ್ ಅವರ ಗೌರವ ಉಪಸ್ಥಿತಿ ಇರಲಿದೆ.
ಮೈಸೂರು ಮಹಾರಾಣಿ ಕಲಾ ಕಾಲೇಜಿನ ನಿವೃತ್ತ ಇತಿಹಾಸ ಪ್ರಾಧ್ಯಾಪಕ ಡಾ.ನಯೀಮ್ ಉರ್ ರಹೆಮಾನ್ ಅವರು ಹಜರತ್ ಟಿಪ್ಪು ಸುಲ್ತಾನ್ ಕುರಿತು ವಿಶೇಷ ಉಪನ್ಯಾಸವನ್ನು ನೀಡುವರು. ಸಮಾರಂಭಕ್ಕೂ ಪೂರ್ವದಲ್ಲಿ ಹಜರತ್ ಟಿಪ್ಪು ಸುಲ್ತಾನ್ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಪಣೆ ನೆರವೇರಿಸುವರು ಎಂದು ಪ್ರಕಟಣೆ ತಿಳಿಸಿದೆ.

Top