ನ. 28 ರಿಂದ ಕೊಪ್ಪಳದಲ್ಲಿ ಪೊಲೀಸ್ ವಾರ್ಷಿಕ ಕ್ರೀಡಾಕೂಟ

ಕೊಪ್ಪಳ ನ. 27 : ಕೊಪ್ಪಳ ಜಿಲ್ಲಾ ಪೆÇಲೀಸ್ ವತಿಯಿಂದ “ವಾರ್ಷಿಕ ಕ್ರೀಡಾಕೂಟ-2018” ವನ್ನು ನ. 28 ರಿಂದ 30 ರವರೆಗೆ ಆಯೋಜಿಸಲಾಗಿದ್ದು, ಉದ್ಘಾಟನಾ ಸಮಾರಂಭವನ್ನು ನ. 28 ರಂದು ಬೆಳಿಗ್ಗೆ 08 ಗಂಟೆಗೆ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಏರ್ಪಡಿಸಲಾಗಿದೆ.
ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸಂಜೀವ ಕುಲಕರ್ಣಿ ಅವರು ಕ್ರೀಡಾಕೂಟದ ಉದ್ಘಾಟನೆ ನೆರವೇರಿಸುವರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೇಣುಕಾ ಕೆ. ಸುಕುಮಾರ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು. ಕ್ರೀಡಾಕೂಟದ ಸಮಾರೋಪ ಸಮಾರಂಭವನ್ನು ನ. 30 ರಂದು ಸಾಯಂಕಾಲ 4 ಗಂಟೆಗೆ ಹಮ್ಮಿಕೊಳ್ಳಲಾಗಿದ್ದು, ಕೊಪ್ಪಳ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸುವರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೇಣುಕಾ ಕೆ. ಸುಕುಮಾರ ಅವರು ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸುವರು