You are here
Home > Koppal News > ಪಂಚರಾಜ್ಯದಲ್ಲಿ ಕಾಂಗ್ರೇಸ್ ಗೆಲುವು ವಿಜಯೋತ್ಸವ

ಪಂಚರಾಜ್ಯದಲ್ಲಿ ಕಾಂಗ್ರೇಸ್ ಗೆಲುವು ವಿಜಯೋತ್ಸವ


ಕೊಪ್ಪಳ, ಡಿ. ೧೧: ದೇಶದ ಪಂಚ ರಾಜ್ಯಗಳಲ್ಲಿ ಕಾಂಗ್ರೇಸ್ ಸಾಧಿಸಿದ ಸಾಧನೆ ನಿಜವಾಗಲೂ ಮುಂಬರುವ ೨೦೧೯ ರ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವನ್ನು ತರಲಿದೆ, ಮೋದಿ ಸರಕಾರವನ್ನು ತಿರಸ್ಕರಿಸಿದ್ದಾರೆ ಎಂದು ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷ ಕೆ. ರಾಜಶೇಖರ ಹಿಟ್ನಾಳ ಹೇಳಿದರು.
ಅವರು ನಗರದ ಅಶೋಕ ವೃತ್ತದಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ವಿಜಯೋತ್ಸವದಲ್ಲಿ ಮಾತನಾಡಿದರು, ಈ ವೇಳೆ ಕಾರ್ಯಕರ್ತರು ಸಿಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಎಐಸಿಸಿ ಅಧ್ಯಕ್ಷರಾಗಿ ಒಂದು ವರ್ಷದಲ್ಲಿ ದೊಡ್ಡ ಸಾಧನೆ ಮಾಡಿದ್ದಾರೆ, ದೇಶದಲ್ಲಿ ಕಾಂಗ್ರೆಸ್‌ನ್ನು ಮತ್ತೆ ದೊಡ್ಡ ಮಟ್ಟದಲ್ಲಿ ಕಟ್ಟುತ್ತಿದ್ದಾರೆ, ಅವರನ್ನು ಜನರು ಒಪ್ಪಿಕೊಂಡಿದ್ದಾರೆ ಎಂಬುದಕ್ಕೆ ಇದು ಸಾಕ್ಷಿ, ರಾಜ್ಯದಲ್ಲೂ ನಾವು ದೊಡ್ಡ ಸಂಖ್ಯೆಯಲ್ಲಿ ಗೆಲ್ಲುತ್ತೇವೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೃಷ್ಣಾ ಇಟ್ಟಂಗಿ, ನಗರ ಬ್ಲಾಕ್ ಅಧ್ಯಕ್ಷ ಕಾಟನ್ ಪಾಶಾ, ನಗರಸಭೆ ಸದಸ್ಯರಾದ ಅಕ್ಬರ್ ಪಾಶಾ ಪಲ್ಟನ್, ಅರುಣ ಅಪ್ಪುಶೆಟ್ಟಿ, ಅಜೀಮುದ್ದಿನ್ ಅತ್ತಾರ್, ಪಟ್ಟಣ ಪಂಚಾಯತ್ ಉಪಾಧ್ಯಕ್ಷರಾದ ಯಶೋಧಾ ಮರಡಿ, ಸದಸ್ಯರಾದ ಮಂಜುನಾಥ ಜಿ. ಗೊಂಡಬಾಳ ಮತ್ತು ಸವಿತಾ ಗೋರಂಟ್ಲಿ, ಕೆಪಿಸಿಸಿ ಮಹಿಳಾ ರಾಜ್ಯ ಕಾರ್ಯದರ್ಶಿ ಕಿಶೋರಿ ಬೂದನೂರ, ಮಾಜಿ ನಗರಸಭೆ ಸದಸ್ಯ ಮಾನ್ವಿ ಪಾಶಾ, ಜಿಲ್ಲಾ ವಕ್ತಾರ ಕುರಗೋಡ ರವಿ, ಜಿಲ್ಲಾ ಕಾನೂನು ಘಟಕದ ಅಧ್ಯಕ್ಷ ಗುರುಬಸವರಾಜ ಹಳ್ಳಿಕೇರಿ, ಮಾಜಿ ಕುಡಾ ಅಧ್ಯಕ್ಷ ಜುಲ್ಲು ಖಾದರ್ ಖಾದ್ರಿ, ಜಿಲ್ಲಾ ಮಹಿಳಾ ಘಟಕ ಅಧ್ಯಕ್ಷೆ ಇಂದಿರಾ ಭಾವಿಕಟ್ಟಿ, ಕಾರ್ಯದರ್ಶಿ ಉಮಾ ಜನಾದ್ರಿ, ಜಿಲ್ಲಾ ಕಾರ್ಮಿಕ ಘಟಕ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ಪಂಡಿತ್, ವಾಜೀದ್ ಎಂ.ಎ., ನಾಗರಾಜ ಬಳ್ಳಾರಿ, ಎಪಿಎಂಸಿ ಸದಸ್ಯ ಮೆಹಬೂಬ ಅರಗಂಜಿ, ಮಲ್ಲಮ್ಮ ಇತರರು ಇದ್ದರು.

Top