ಪತ್ನಿಯ ಕಿಡ್ನಿ ವೈಫಲ್ಯ : ನೆರವಿಗಾಗಿ ಅತಿಥಿ ಉಪನ್ಯಾಸಕನಿಂದ ಮನವಿ

ಕೊಪ್ಪಳ : ಪತ್ನಿಯು ಕಿಡ್ನಿ ವೈಫಲ್ಯ ಹಾಗೂ ಶ್ವಾಸಕೋಶ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆಗೆ ನೆರವಾಗುವಂತೆ ಅತಿಥಿ ಉಪನ್ಯಾಸಕರೊಬ್ಬರು ಸಚಿವರಿಗೆ ಮನವಿ ಮಾಡಿದ್ದಾರೆ..
ತನ್ನ ಸಂಕಷ್ಟದ ಕುರಿತು ಮಾತನಾಡಿರೋ ಅತಿಥಿ ಉಪನ್ಯಾಸಕನ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯ ಕೊಲ್ಲಿ ನಾಗೇಶ್ವರ ರಾವ್ ಕಾಲೇಜಿನ ಅತಿಥಿ ಉಪನ್ಯಾಸಕ ಡಾ. ಮಂಜಣ್ಣ ಅವರು ತಮ್ಮ ಅಳಲು ತೋಡಿಕೊಂಡಿದ್ದಾರೆ. ತನ್ನ ಪತ್ನಿ ಕಿಡ್ನಿ ಹಾಗೂ ಶ್ವಾಸಕೋಶ ವೈಫಲ್ಯದಿಂದ ಬಳಲುತ್ತಿದ್ದಾಳೆ. ಸದ್ಯ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಈಗ ಆಕೆಯ ಆರೋಗ್ಯ ಸ್ಥಿತಿ ತುಂಬಾ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಚಿಕಿತ್ಸೆಗೆ 10 ರಿಂದ 15 ಲಕ್ಷ ರೂಪಾಯಿ ಹಣ ಬೇಕು. ಆ ಶಕ್ತಿ ನನಗೆ ಇಲ್ಲ. ಯಾರಾದರೂ ಚಿಕಿತ್ಸೆಗೆ ಸಹಾಯ ಮಾಡಿ ಎಂದು ಉಪನ್ಯಾಸಕ ಮಂಜಣ್ಣ ವಿಡಿಯೋದಲ್ಲಿ ಮನವಿ ಮಾಡಿಕೊಂಡಿದ್ದಾರೆ. ಅಲ್ಲದೇ ಉನ್ನತ ಶಿಕ್ಷಣ ಸಚಿವರಾದ ಅಶ್ವತ್ಥ ನಾರಾಯಣ ಸರ್ ನಮ್ಮ. ಕುಟುಂಬಕ್ಕೆ ನೆರವಾಗಿ ಎಂದು ಎಂದು ಅತಿಥಿ ಉಪನ್ಯಾಸಕ ವಿಡಿಯೋದಲ್ಲಿ ಮನವಿ ಮಾಡಿದ್ದಾರೆ

Please follow and like us:
error