ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯ

ಕೊಪ್ಪಳ,  : ಪ್ರತಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯವಾಗಿದ್ದು, ಅನಾರೋಗ್ಯದ ಲಕ್ಷಣಗಳು ಕಂಡು ಬಂದಲ್ಲಿ ಅವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕೋವಿಡ್-19 ರ ಸ್ಟಾö್ಯಂಡರ್ಡ್ ಆಪರೇಟಿಂಗ್ ಪ್ರೊಸಿಜರ್‌ಗಳನ್ನು ನಿರ್ವಹಿಸುವ ಕುರಿತು ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ಪ್ರತಿ ವಿದ್ಯಾರ್ಥಿಗೆ ಥರ್ಮಲ್ ಸ್ಕಿçÃನಿಂಗ್ ಮಾಡಬೇಕು. ಇದಕ್ಕಾಗಿ ಆರೋಗ್ಯ ಇಲಾಖೆ ಥರ್ಮಿಲ್ಉ ಸ್ಕ್ರೀನಿಂಗ್ ಪಕರಣಗಳೊಂದಿಗೆ ಸಿಬ್ಬಂದಿಯನ್ನು ನಿಯೋಜಿಸಬೇಕು. ಪರೀಕ್ಷಾ ಕೇಂದ್ರದ ಕೊಠಡಿಗಳಲ್ಲಿ ಪ್ರತಿ ದಿನ ಸೋಂಕು ನಿವಾರಕಗಳನ್ನು ಸಿಂಪಡಿಸಬೇಕು. ಈಗಾಗಲೇ ಗುರುತಿಸಲಾದ ಕ್ವಾರಂಟೈನ್ ಕೇಂದ್ರಗಳನ್ನು ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳು ಉಳಿದುಕೊಳ್ಳಲು ಬಳಸುವಂತಿಲ್ಲ. ಪರೀಕ್ಷಾ ಕೇಂದ್ರಕ್ಕೆ ಹತ್ತಿರವಿರುವ ವಿದ್ಯಾರ್ಥಿ ವಸತಿ ನಿಲಯದಲ್ಲಿ ಮಕ್ಕಳಿಗೆ ಉಳಿದುಕೊಂಡು ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿ. ಪಾಲಕರನ್ನು ಪರೀಕ್ಷಾ ಕೇಂದ್ರದೊಳಗೆ ಬಿಡುವಂತಿಲ್ಲ. ಪರೀಕ್ಷಾ ಕೇಂದ್ರದ ಸುತ್ತ 200 ಮೀ. ಅಂತರದಲ್ಲಿ ಸೆಕ್ಷನ್ 144 ನಿಷೇಧಾಜ್ಞೆ ಜಾರಿಯಿದ್ದು, ಝರಾಕ್ಸ್ ಸೆಂಟರ್‌ಗಳನ್ನು ಬಂದ್ ಮಾಡಬೇಕು. ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳು ಪಾಲಿಸಬೇಕಾದ ನಿಯಮಗಳನ್ನು ಮೈಕ್ ಮೂಲಕ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ. ಒಂದು ವೇಳೆ ಯಾವುದಾದರೂ ವಿದ್ಯಾರ್ಥಿಗೆ ಆರೋಗ್ಯ ಸಮಸ್ಯೆಗಳಿದ್ದಲ್ಲಿ ಅವರು ಖುದ್ದಾಗಿ ಬಂದು ಮಾಹಿತಿ ನೀಡುವಂತೆ ತಿಳಿಸಿ. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಬೆಳಗ್ಗೆ 8.30 ಗಂಟೆಗೆ ಕಡ್ಡಾಯವಾಗಿ ಹಾಜರಾಗಬೇಕು. ಇದರಿಂದ ಥರ್ಮಲ್ ಸ್ಕಿçÃನಿಂಗ್ ಮತ್ತು ತಪಾಸಣೆಗೆ ಅನುಕೂಲವಾಗಲಿದೆ. ವಿದ್ಯಾರ್ಥಿಗಳು ಅನುಸರಿಸಬೇಕಾದ ನಿಯಮಗಳ ಕುರಿತು ವಿಡಿಯೋ ಚಿತ್ರೀಕರಿಸಿ ಅದನ್ನು ಪರೀಕ್ಷೆಗೆ ಮೊದಲು ಮಕ್ಕಳಿಗೆ ತಲುಪಿಸಿ ಎಂದು ಸೂಚನೆಗಳನ್ನು ನೀಡಿದರು.
ಜೂನ್ 25 ರಿಂದ ಜುಲೈ 04 ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲಿದ್ದು, ಜಿಲ್ಲೆಯಾದ್ಯಂತ ರೆಗ್ಯೂಲರ್ ವಿದ್ಯಾರ್ಥಿಗಳು-19,896, ಪುನರಾವರ್ತಿತ ವಿದ್ಯಾರ್ಥಿಗಳು-1,513 ಹಾಗೂ ಬಾಹ್ಯ ವಿದ್ಯಾರ್ಥಿಗಳು 774 ಸೇರಿದಂತೆ ಒಟ್ಟು 22,183 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಜಿಲ್ಲೆಯಲ್ಲಿ 63 ಮುಖ್ಯ ಪರೀಕ್ಷಾ ಕೇಂದ್ರಗಳು, 17 ಉಪ ಕೇಂದ್ರಗಳನ್ನು ಗುರುತಿಸಲಾಗಿದೆ. ಅವುಗಳಲ್ಲಿ 3 ಪರೀಕ್ಷಾ ಕೇಂದ್ರಗಳಲ್ಲಿ ಖಾಸಗಿ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು, ಈ ಕೇಂದ್ರಗಳನ್ನು ಸೂಕ್ಷö್ಮ ಕೇಂದ್ರಗಳೆAದು ಗುರುತಿಸಲಾಗಿದ್ದು, ಪೊಲೀಸ್ ಇಲಾಖೆ ಈ ಕೇಂದ್ರಗಳಿಗೆ ಹೆಚ್ಚಿನ ಭದ್ರತೆ ಒದಗಿಸಬೇಕು. ಜಿಲ್ಲೆಯಲ್ಲಿ ಅತೀ ಸೂಕ್ಷö್ಮ ಪರೀಕ್ಷಾ ಕೇಂದ್ರಗಳು ಯಾವುದೂ ಇಲ್ಲ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ವಿಶೇಷ ಕೋವಿಡ್ ಟಾಸ್ಕ್ ಫೋರ್ಸ್ ಅನ್ನು ರಚಿಸಲಾಗಿದ್ದು, ಈ ತಂಡವು ವಿದ್ಯಾರ್ಥಿಗಳ ಸ್ಕಿçÃನಿಂಗ್ ಸೇರಿದಂತೆ ಕೋವಿಡ್‌ಗೆ ಸಂಬAಧಿಸಿದ ಕರ್ತವ್ಯಗಳನ್ನು ಮಾತ್ರ ಮಾಡಬೇಕು. ಪ್ರತಿ ಕೊಠಡಿಗೆ 18 ರಿಂದ 20 ವಿದ್ಯಾರ್ಥಿಗಳು ಮಾತ್ರ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡುವ ಮೂಲಕ ಸಾಮಾಜಿಕ ಅಂತರವನ್ನು ಕಾಪಾಡಬೇಕು. ಗ್ರಾಮೀಣ ಭಾಗದಿಂದ ಪರೀಕ್ಷೆಗೆ ಆಗಮಿಸುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸಾರಿಗೆ ಇಲಾಖೆಯಿಂದ ಬಸ್‌ಗಳ ವ್ಯವಸ್ಥೆಯನ್ನು ಕಲ್ಪಿಸಬೇಕು. ವಸತಿ ನಿಲಯದಲ್ಲಿದ್ದು ಪರೀಕ್ಷೆ ಬರೆಯಲು ಬಯಸುವ ವಿದ್ಯಾರ್ಥಿಗಳಿಗೆ ಕೋವಿಡ್ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ವಸತಿ ನಿಲಯಗಳಲ್ಲಿ ವ್ಯವಸ್ಥೆ ಮಾಡಬೇಕು ಎಂದು ಅವರು ಹೇಳಿದರು.
ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ ಮಾತನಾಡಿ ಜಿಲ್ಲಾ ಮಟ್ಟದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಒಂದು ಸಹಾಯವಾಣಿಯನ್ನು ಆರಂಭಿಸಬೇಕು. ಈ ಸಹಾಯವಾಣಿಗೆ ವಿದ್ಯಾರ್ಥಿಗಳು ಕರೆ ಮಾಡಿ ಪರೀಕ್ಷಾ ಕೇಂದ್ರಗಳು, ವಸತಿ ನಿಲಯಗಳು, ಅನುಸರಿಸಬೇಕಾದ ನಿಯಮಗಳು, ಪರೀಕ್ಷೆಗಳ ಕುರಿತ ಪ್ರಶ್ನೆಗಳನ್ನು ಕೇಳಬಹುದು. ಇಲಾಖೆಯವರು ಸಂಪೂರ್ಣ ಮಾಹಿತಿಯೊಂದಿಗೆ ಎರಡು ಪಾಳಿಗಳಲ್ಲಿ ಕರ್ತವ್ಯ ನಿರ್ವಹಿಸಿ ವಿದ್ಯಾರ್ಥಿಗಳು ಕೇಳುವ ಪ್ರಶ್ನೆಗಳಿಗೆ ಸೂಕ್ತ ಮಾಹಿತಿ ನೀಡುವುದರ ಜೊತೆಗೆ ಪರೀಕ್ಷಾ ಭಯವನ್ನು ಹೋಗಲಾಡಿಸುವ ಪ್ರಯತ್ನವನ್ನೂ ಮಾಡಬೇಕು. ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳಿಗೆ ಗೊಂದಲ ಉಂಟಾಗಬಾರದು ಆ ರೀತಿಯಲ್ಲಿ ಶಿಕ್ಷಣ ಇಲಾಖೆಯವರು ವ್ಯವಸ್ಥೆ ಕುರಿತು ಮಾಹಿತಿ ನೀಡಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ ಸಿಇಒ ರಘುನಂದನ್ ಮೂರ್ತಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಸಿದ್ರಾಮೇಶ್ವರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ದೊಡ್ಡಬಸಪ್ಪ ನೀರಲಕೇರಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಲಿಂಗರಾಜು, ನಿರ್ಮಿತಿ ಕೇಂದ್ರದ ಶಶಿಧರ್ ಸೇರಿದಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Please follow and like us:
error