ಪಾರಂಪರಿಕಾ ದಿನಾಚರಣೆ

ಕೊಪಳ ನ 1 : ನಗರದ ಶ್ರೀ ಗವಿಸಿದ್ಧೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಇದೇ ನವಂಬರ 2 ರಂದು ಪಾರಂಪರಿಕಾ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಮಹಾವಿದ್ಯಾಲಯದಲ್ಲಿ ಅನೇಕ ಜಾತಿ, ಧರ್ಮ, ಪರಂಪರೆಯ ಹಿನ್ನಲೆಯುಳ್ಳ ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದು, ಅವರ ಪರಂಪರೆಯನ್ನು ಬೇರೆಯವರಿಗೆ ಪರಿಚಯಿಸುವ ನಿಟ್ಟಿನಲ್ಲಿ ಅವರ ಉಡುಗೆ-ತೊಡುಗೆಗಳನ್ನು ಉಟ್ಟುಕೊಂಡು ಸಂಭ್ರಮಿಸುವ ಈ ವಿನೂತನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಪರಸ್ಪರ ಸಮುದಾಯ ಮತ್ತು ಪರಂಪರೆಗಳನ್ನು ಪರಿಚಯಿಸುವ ಈ ಕಾರ್ಯಕ್ರಮವು ವಿಭಿನ್ನತೆಯಲ್ಲಿ ಏಕತೆಯನ್ನು ಸಾರುತ್ತದೆ. ಇಂತಹ ಕಾರ್ಯಕ್ರಮವನ್ನು ನಮ್ಮ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಚಾರ್ಯರಾದ ಡಾ.ಸಿದ್ದಲಿಂಗಪ್ಪ ಕೊಟ್ನೆಕಲ್‍ರವರು ತಿಳಿಸಿದ್ದಾರೆ

Please follow and like us:
error