ಪಿಎಂ ಮೋದಿ ಪಾರದರ್ಶಕ ಆಡಳಿತ ನಡೆಸಿದ್ದಾರೆ- ಸಂಗಣ್ಣ ಕರಡಿ

ಕೊಪ್ಪಳ : ಪಿಎಂ ನರೇಂದ್ರ ಮೋದಿಯವರು ಇಡೀ ದೇಶಕ್ಕೆ ಅದ್ಬುತ ಕೊಡುಗೆಗಳನ್ನು ನೀಡಿದ್ದಾರೆ. ಪಾರದರ್ಶಕ ಆಡಳಿತ ನಡೆಸಿದ್ದಾರೆ ಎಂದು ಸಂಸದ ಕರಡಿ ಸಂಗಣ್ಷ ಹೇಳಿದರು. ಅವರು

ಪ್ರದಾನಿ ನರೇಂದ್ರ ಮೋದಿ ಸರಕಾರ ಒಂದು ವರ್ಷ ಪೊರೈಸಿದ ಹಿನ್ನೆಲೆಯಲ್ಲಿ ನಗರ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಮೊದಲನೇ ವರ್ಷದ ಜಿಲ್ಲಾ ಬಿಜೆಪಿ ವತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಜಿಲ್ಲಾ ಪಂಚಾಯಿತಿ ಇತಿಹಾಸ ದೊಡ್ಡದಿದೆ. ಅದೇ ರೀತಿಯಾಗಿ ಮುಂದುವರೆಯುತ್ತಿದೆ ಎಂದರು.

ಸಚಿವ ಸಂಪುಟ ವಿಸ್ತರಣೆಯಾದರೇ, ಅದರಲ್ಲಿ ನಮ್ಮ ಜಿಲ್ಲೆಯ‌ ಶಾಸಕರಿಗೂ ಪ್ರಾಧಾನ್ಯತೆ ನೀಡಬೇಕು ಎಂದು ಸಂಸದರ ನೇತೃತ್ವದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಒತ್ತಡ ಹಾಕುತ್ತೇವೆ. ಇದರಿಂದ ಜಿಲ್ಲೆ ಅಭಿವೃದ್ಧಿಗೆ ಅನುಕೂಲ ಆಗಲಿದೆ ಎಂದರು.

ಜಿಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಹೇಳಿದಹಾಗೇ ಬೇಗ ಕೋವಿಡ್-19 ಆಸ್ಪತ್ರೆ ಮಾಡಿದ್ದರಿಂದ ಜನಸಾಮಾನ್ಯರಿಗೆ ತೊಂದರೆ ಉಂಟಾಗಿದೆ. ಈ ಕುರಿತು ಅವರೂ ಕೂಡಾ ಜಿಲ್ಲಾಸ್ಪತ್ರೆ ಆರಂಭಿಸುವುದಾಗಿ ಹೇಳಿದ್ದರು. ಕಾರಣಾಂತರಗಳಿಂದ ಈ ಕಾರ್ಯ ಆಗಿಲ್ಲ. ಈ ಕುರಿತು ಗಮ‌ನಹರಿಸಿ, ಕ್ರಮ ಕೈಗೊಳ್ಳಲಾಗುವುದು ಎಂದರು.

ಈಗಾಗಲೇ ಎರಡು ಆದರ್ಶ ಗ್ರಾಮಗಳನ್ನು ಆಯ್ಕೆ ಮಾಡಿಕೊಳ್ಳಲಾಗಿತ್ತು. ಆದರೆ ಅಭಿವೃದ್ಧಿಯಾಗದೇ ಹಾಗೇ ಉಳಿದಿವೆ. ಈಗ ಹಲಗೇರಿ ಗ್ರಾಮವನ್ನು ಆದರ್ಶ ಗ್ರಾಮಕ್ಕೆ ಆಯ್ಕೆ ಮಾಡಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಆದರ್ಶ ಗ್ರಾಮಕ್ಕೆ ಪ್ರತ್ಯೇಕವಾಗಿ ಯಾವುದೇ ವಿಶೇಷ ಅನುದಾನ ಇಲ್ಲ. ದಾನಿಗಳಿಂದ ಹಾಗೂ ಆಯಾ ಸ್ಥಳೀಯ ಕೈಗಾರಿಕೆಗಳ ಸಹಕಾರದಿಂದ ಆದರ್ಶ ಗ್ರಾಮವನ್ನು ಅಭಿವೃದ್ಧಿಗೊಳಿಸಬೇಕಾಗಿದೆ. ಈ ಹಿಂದಿನ ಆದರ್ಶ ಗ್ರಾಮಗಳಲ್ಲಿ ಯಾವುದೇ ಕಾರ್ಖಾನೆಗಳಿಲ್ಲ. ಆದರೆ ಪ್ರಸ್ತುತ ಆಯ್ಕೆ ಮಾಡಿಕೊಳ್ಳಲಾದ ಹಲಗೇರಿ ಗ್ರಾಮದ ಅಭಿವೃದ್ಧಿಗೆ ಸಿಎಸ್ಆರ್ ಅನುದಾನ ಬಳಕೆ ಮಾಡಿಕೊಳ್ಳುವ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿಯೊಂದಿಗೆ ಚರ್ಚಿಸಲಾಗಿದೆ. ಅಲ್ಲದೇ ಸ್ಥಳೀಯ ದಾನಿಗಳ ಸಹಕಾರದಿಂದ ಹಲಗೇರಿಯನ್ನು ಆದರ್ಶ ಗ್ರಾಮವನ್ನಾಗಿ ಮಾಡುತ್ತೇವೆ ಎಂದು ಆಶಯ ವ್ಯಕ್ತಪಡಿಸಿದರು.

ಶಾಸಕ ಪರಣ್ಣ ಮುನವಳ್ಳಿ, ಮಾಜಿ ಶಾಸಕರಾದ ಕೆ.ಶರಪ್ಪ,‌‌ಜಿ.ವೀರಪ್ಪ, ಚಂದ್ರಶೇಖರ ಪಾಟೀಲ್, ನವೀನ್ ಗುಳಗಣ್ಣನವರ ಇದ್ದರು.

Please follow and like us:
error