ಪೂರ್ಣಪ್ರಮಾಣದ ಉಪನ್ಯಾಸಕರ ನೇಮಕಕ್ಕೆ ಒತ್ತಾಯಿಸಿ ಮನವಿ

ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ಬಿನ್ನಾಳ ಗ್ರಾಮದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಧ್ಯ ಡೆಪ್ಯೂಟೇಶನ್ ಮೇರೆಗೆ ಉಪನ್ಯಾಸಕರಿದ್ದು, ಪೂರ್ಣ ಪ್ರಮಾಣದ ಪ್ರಾಚಾರ್ಯರು ಮತ್ತು ಉಪನ್ಯಾಸಕರ ನೇಮಕಕ್ಕೆ ಒತ್ತಾಯಿಸಿ ಕಾಲೇಜು ಅಭಿವೃದ್ಧಿ ಮಂಡಳಿ ಸದಸ್ಯರು ಅಪರ ಜಿಲ್ಲಾಧಿಕಾರಿ ಸಿ.ಡಿ. ಗೀತಾ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.

೨೦೧೭-೧೮ ನೇ ಸಾಲಿನಲ್ಲಿ ಕಾಲೇಜು ಮಂಜೂರಾಗಿದ್ದು, ಪ್ರಥಮ ವರ್ಷಕ್ಕೆ ೪೨ ವಿದ್ಯಾರ್ಥಿಗಳು ದಾಖಲಾತಿ ಪಡೆದುಕೊಂಡಿದ್ದಾರೆ. ಆದರೆ, ಈ ವಿದ್ಯಾರ್ಥಿಗಳಿಗೆ ವಿಷಯವಾರು ಸಮರ್ಪಕ ಬೋದಕರಿಲ್ಲ. ಪೂರ್ಣಾವದಿ ಸೇವೆಗೆ ಪ್ರಾಚಾರ್ಯರು ಇಲ್ಲದಿರುವುದು ಶೈಕ್ಷಣಿಕ ಹಿನ್ನೆಡೆಗೆ ಕಾರಣವಾಗಿದೆ. ಹೀಗೆ ಮುಂದುವರೆದರೆ ಮುಂಬರುವ ಶೈಕ್ಷಣಿಕ ವರ್ಷಕ್ಕೆ ಈ ಕಾಲೇಜಿಗೆ ದಾಖಲಾತಿ ಪಡೆಯಲು ವಿದ್ಯಾರ್ಥಿಗಳು ಹಿಂದೇಟು ಹಾಕುವುದರಲ್ಲಿ ಎರಡು ಮಾತಿಲ್ಲ. ಹಾಗಾಗದಿರಲು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನೂಕೂಲವಾಗಿರುವ ಬಿನ್ನಾಳ ಸರಕಾರಿ ಪ.ಪೂ ಕಾಲೇಜಿಗೆ ಪೂರ್ಣಾವಧಿ ಪ್ರಾಚಾರ್ಯರು ಮತ್ತು ಉಪನ್ಯಾಸಕರನ್ನು ಆದಷ್ಟು ಬೇಗ ನೇಮಿಸಿ ಗ್ರಾಮೀಣ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ತಾವು ಗಮನಹರಿಸಬೇಕೆಂದು ಮನವಿ ಮಾಡಿದರು.
ಇದಕ್ಕೆ ಪ್ರತ್ರಿಕ್ರಿಯಿಸಿದ ಅವರು, ಈ ವಿಷಯ ಕುರಿತು ಪದವಿ ಪೂರ್ವ ಶಿಕ್ಷಣ ಇಲಾಖೆ ಡಿಡಿ ಅವರೊಂದಿಗೆ ಮಾಹಿತಿ ಪಡೆದು ಕ್ರಮ ಕೈಗೊಳ್ಳಲಾಗುವುದು. ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ವಿದ್ಯಾರ್ಥಿಗಳಿಗೆ ತೊಂದರೆ ಯಾಗದಂತೆ ಕ್ರಮ ಕೈಗೊಳ್ಳಲಾಗುವುದೆಂದರು.
ಈ ಸಂದರ್ಭದಲ್ಲಿ ಕಾಲೇಜು ಅಭಿವೃದ್ಧಿ ಮಂಡಳಿ ಉಪಾಧ್ಯಕ್ಷ ಜಗದೀಶ ಚಟ್ಟಿ, ಸದಸ್ಯರಾದ ಕಲ್ಲಪ್ಪ ಕರೆಣ್ಣವರ, ಗಿರಿಯಪ್ಪ ಹರಿಜನ ಸೇರಿದಂತೆ ಇತರರು ಇದ್ದರು.

Please follow and like us:
error