ಪೊಲೀಸ್ ಹುದ್ದೆಗಳ ನೇಮಕಾತಿಗೆ ಪರೀಕ್ಷಾ ಪೂರ್ವ ತರಬೇತಿ : ಹೆಸರು ನೊಂದಣಿಗೆ ಸೂಚನೆ

: ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ಲೇಸ್‌ಮೆಂಟ್ ಸೆಲ್ ಇವರ ಸಹಯೋಗದಲ್ಲಿ “ಸ್ಟಡಿ ಸರ್ಕಲ್ ಯೋಜನೆಯಡಿ” ಪೊಲೀಸ್ ಹುದ್ದೆಗಳ ನೇಮಕಾತಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿಯನ್ನು ಆಗಸ್ಟ್. ೦೧ ರಿಂದ ಆಯೋಜಿಸಲಾಗಿದ್ದು, ಹೆಸರು ನೊಂದಾಯಿಸಿಕೊಳ್ಳುವಂತೆ ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.   
ಪೊಲೀಸ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪರೀಕ್ಷಾ ಪೂರ್ವ ತರಬೇತಿಯನ್ನು ಆಗಸ್ಟ್. ೦೧ ರಿಂದ ೧೬ ರವರೆಗೆ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ತರಬೇತಿಗೆ ಭಾಗವಹಿಸಲು ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಪ್ಪಳದಲ್ಲಿ ತಮ್ಮ ಹೆಸರನ್ನು ಜು. ೩೧ ರೊಳಗಾಗಿ ನೊಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ೦೮೫೩೯-೨೨೦೮೫೯, ೯೧೧೩೯೨೨೯೪೯, ೭೦೧೯೭೬೯೨೮೧ ಕ್ಕೆ ಸಂಪರ್ಕಿಸಬಹುದು

Related posts