ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ : ಅವಧಿ ವಿಸ್ತರಣೆ

ಕೊಪ್ಪಳ ನ. 20 : ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2017-18ನೇ ಶೈಕ್ಷಣಿಕ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ, ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಮಂಜೂರಿಸಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅವಧಿಯನ್ನು ವಿಸ್ತರಿಸಲಾಗಿದೆ.
ಸರ್ಕಾರದ ಆದೇಶದನ್ವಯ 2017-18ನೇ ಶೈಕ್ಷಣಿಕ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಶೇ.60 ರಿಂದ 74.99 ಹಾಗೂ ಶೇ.75 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಪ್ರೋತ್ಸಾಹ ಧನಕ್ಕಾಗಿ ಆನ್‍ಲೈನ್‍ನಲ್ಲಿ ನೋಂದಣಿ ಮಾಡಿಸಲು ಹಾಗೂ ಮೆಟ್ರಿಕ್ ನಂತರದ ಕೋರ್ಸುಗಳ ಪಬ್ಲಿಕ್ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಮಂಜೂರಿಸಲು ಆನ್-ಲೈನ್‍ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ನೋಂದಣಿ ಮಾಡಿಸಿಕೊಳ್ಳಲು ಮತ್ತು ಅರ್ಜಿ ಸಲ್ಲಿಸಲು ನ. 15 ರವರೆಗೆ ಕಾಲಾವಕಾಶ ಕಲ್ಪಿಸಲಾಗಿದ್ದು, ದಿನಾಂಕವನ್ನು ಮತ್ತೋಮ್ಮೆ ವಿಸ್ತರಿಸಿ ಡಿಸೆಂಬರ್. 15 ರವರೆಗೆ ಆನ್-ಲೈನ್‍ನಲ್ಲಿ ಅರ್ಜಿಯನ್ನು ಸಲ್ಲಿಸಲು ಜಂಟಿ ನಿರ್ದೇಶಕರು (ಶಿಕ್ಷಣ) ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ರವರು ಅವಧಿಯನ್ನು ನಿಗದಿಪಡಿಸಿರುತ್ತಾರೆ.
ಕಾರಣ ಎಸ್.ಎಸ್.ಎಲ್.ಸಿ ಮತ್ತು ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದವರು ಇಲಾಖಾ ವೆಬ್‍ಸೈಟ್‍ಗಳಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ತಿತಿತಿ.sತಿ.ಞಚಿಡಿ.ಟಿiಛಿ.iಟಿ ನಲ್ಲಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ತಿತಿತಿ.ಣತಿ.ಞಚಿಡಿ.ಟಿiಛಿ.iಟಿ ನಲ್ಲಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ ಮತ್ತು ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ, ಗಂಗಾವತಿ, ಕುಷ್ಟಗಿ, ಯಲಬುರ್ಗಾ, ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಬಿ. ಕಲ್ಲೇಶ ಅವರು ತಿಳಿಸಿದ್ದಾರೆ

Please follow and like us:

Related posts