ಪ್ರಥಮ ಶ್ರೇಣಿಯಲ್ಲಿ ಪಾಸಾದ ಪರಿಶಿಷ್ಟ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ : ಅರ್ಜಿ ಆಹ್ವಾನ

ಕೊಪ್ಪಳ ಆ.  : ಸಮಾಜ ಕಲ್ಯಾಣ ಇಲಾಖೆ ವತಿಯಿಂದ ೨೦೧೭-೧೮ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿರಬೇಕು. ಅರ್ಜಿ ಸಲ್ಲಿಸಲು ಆ. ೩೧ ಕೊನೆಯ ದಿನವಾಗಿದ್ದು, ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಇಲಾಖಾ ವೆಬ್‌ಸೈಟ್ www.sw.kar.nic.inನಲ್ಲಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಇಲಾಖಾ ವೆಬ್‌ಸೈಟ್ www.tw.kar.nic.inನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ಪ್ರತಿಯೊಂದಿಗೆ ಮೂಲ ಅಂಕಪಟ್ಟಿಗಳನ್ನು ಹಾಗೂ ಇನ್ನಿತರೆ ದಾಖಲಾತಿಗಳನ್ನು ಮುದ್ದಾಂ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಕೊಪ್ಪಳ ಕಛೇರಿಗೆ ಸಲ್ಲಿಸಿ ಮೂಲ ಅಂಕಪಟ್ಟಿಯನ್ನು ಪರಿಶೀಲಿಸಿಕೊಂಡು ಮರಳಿ ಹಿಂಪಡೆಯುವಂತೆ ಇಲಾಖೆ ಉಪನಿರ್ದೇಶಕರು   ತಿಳಿಸಿದ್ದಾರೆ.

Related posts