You are here
Home > Koppal News > ಪ್ರಧಾನ ಮಂತ್ರಿಗಳ ಉದ್ಯೋಗ ಯೋಜನೆ : ಅರ್ಜಿ ಆಹ್ವಾನ

ಪ್ರಧಾನ ಮಂತ್ರಿಗಳ ಉದ್ಯೋಗ ಯೋಜನೆ : ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕೊಪ್ಪಳ ಇವರ ವತಿಯಿಂದ ಪ್ರಧಾನಮಂತ್ರಿಗಳ ಉದ್ಯೋಗ ಯೋಜನೆಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕೇಂದ್ರ ಸರ್ಕಾರವು ಗ್ರಾಮೀಣ ನಿರುದ್ಯೋಗ ವಿದ್ಯಾವಂತ ಯುವಕ/ ಯುವತಿಯರಿಗೆ ಸ್ವಯಂ ಉದ್ಯೋಗ ಕಲ್ಪಿಸಲು ಪ್ರಧಾನ ಮಂತ್ರಿಗಳ ಉದ್ಯೋಗ ಯೋಜನೆ (ಪಿಎಂಇಜಿಪಿ) ಯನ್ನು ಪ್ರಸಕ್ತ ಸಾಲಿಗೂ ಮುಂದುವರೆಸಿದ್ದು, ಸೌಲಭ್ಯ ಪಡೆಯಲು ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಯೋಜನೆಯ ಗರಿಷ್ಠ ವೆಚ್ಚ ರೂ. ೨೫ ಲಕ್ಷ, ಉತ್ಪಾದನೆ ಮತ್ತು ಸೇವಾ ಚಟುವಟಿಕೆಗಳಿಗೆ ಬ್ಯಾಂಕುಗಳು ನೀಡುವ ಸಾಲದ ಮೊತ್ತದ ಮೇಲೆ ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ.೨೫ (ಗರಿಷ್ಠ ಮೊತ್ತ ರೂ. ೨.೫೦ ಲಕ್ಷ ಮಾತ್ರ), ಮತ್ತು ವಿಶೇಷ ವರ್ಗದ (ಪ.ಜಾತಿ/ ಪ.ಪಂಗಡ/ ಹಿಂದುಳಿದ ವರ್ಗ/ ಅಲ್ಪಸಂಖ್ಯಾತರು/ ಅಂಗವಿಕಲರು/ ಮಾಜಿ ಸೈನಿಕ/ಮಹಿಳೆ), ಗ್ರಾಮೀಣ ಫಲಾನುಭವಿಗಳಿಗೆ ೩೫% (ಗರಿಷ್ಠ ಮೊತ್ತ ರೂ. ೮.೭೫ ಲಕ್ಷ ಮಾತ್ರ) ಸಹಾಯಧನ ಸೌಲಭ್ಯ ಇರುತ್ತದೆ. ಉದ್ದಿಮೆಯನ್ನು ಪ್ರಾರಂಭ ಮಾಡುವ ಸಾಮಾನ್ಯ ವರ್ಗದವರು ಯೋಜನಾ ವೆಚ್ಚದ ಶೇ. ೧೦% ಮತ್ತು ವಿಶೇಷ ವರ್ಗದವರಿಗೆ ಶೇ. ೫% ರಷ್ಟು ಸ್ವಂತ ಭಂಡವಾಳ ಹೂಡಬೇಕಾಗಿರುತ್ತದೆ.
ಅರ್ಜಿ ಸಲ್ಲಿಸಲು ೧೮ ವರ್ಷ ತುಂಬಿರಬೇಕು. ಯೋಜನೆಯು ಹೊಸದಾಗಿ ಪ್ರಾರಂಭಿಸುವ ಘಟಕಗಳಿಗೆ ಮಾತ್ರ ಅನ್ವಯಿಸುತ್ತದೆ. ಯೋಜನೆಯನ್ನು ಜಿಲ್ಲಾ ಕೈಗಾರಿಕ ಕೇಂದ್ರ, ಕೆ.ವಿ.ಐ.ಸಿ. ಮತ್ತು ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಮುಖಾಂತರ ಅನುಷ್ಠಾನಗೊಳಿಸಲಾಗುತ್ತಿದ್ದು, ರಾಜ್ಯ ಖಾದಿ ಮಂಡಳಿ ಮುಖಾಂತರ ಯೋಜನೆಯ ಸೌಲಭ್ಯ ಪಡೆಯಲು ಅಪೇಕ್ಷಿಸುವ ಆಸಕ್ತ ಅಭ್ಯರ್ಥಿಗಳು www.kviconline.gov.inವೈಬ್ ಸೈಟ್‌ನಲ್ಲಿ ಕೆ.ವಿ.ಐ.ಬಿ ಏಜೆನ್ಸಿ ದಾಖಲಿಸಿ ಅರ್ಜಿ ಸಲ್ಲಿಸಿ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಜಿಲ್ಲಾ ಕಛೇರಿ, ಕೊಪ್ಪಳ ಇವರಿಗೆ ಅರ್ಜಿಯ ಪ್ರತಿ ಮತ್ತು ಅಗತ್ಯ ದಾಖಲಾತಿಗಳ ಯಥಾ ಪ್ರತಿ ಸಲ್ಲಿಸಲು ಹಾಗೂ ಮೊದಲ ಹಂತದಲ್ಲಿ ಜೂನ್. ೧೬ ರೊಳಗಾಗಿ ಸಲ್ಲಿಕೆಯಾಗುವ ಅರ್ಜಿಗಳನ್ನು ವರದಿಯ ಜೂನ್ ತಿಂಗಳಲ್ಲಿ ಆದ್ಯತೆಯ ಮೇಲೆ ಸಂದರ್ಶನದ ಮೂಲಕ ಆಯ್ಕೆ ಮಾಡಿ ಬ್ಯಾಂಕ್ ಶಾಖೆಗಳಿಗೆ ಸಲ್ಲಿಸಲಾಗುವುದು. ಎಂದು ಜಿಲ್ಲಾ ಖಾದಿ ಮತ್ತು ಗ್ರಾಮೋದ್ಯೋಗ ಅಧಿಕಾರಿ

Leave a Reply

Top